ಭಾರತೀಯ ಷೇರುಪೇಟೆ ಮಂಗಳವಾರ ಸಾಕಷ್ಟು ಏರಿಳಿತಗಳ ನಡುವೆ ಮಿಶ್ರ ಪ್ರತಿಫಲ ನೀಡಿದೆ. ಮುಂಬೈ ಷೇರುಪೇಟೆ 14.37 ಪಾಯಿಂಟ್ಸ್ ಇಳಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 10.80 ಏರಿಕೆಗೊಂಡಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇಕಡಾ 0.03ರಷ್ಟು ಅಥವಾ 14.37 ಪಾಯಿಂಟ್ಸ್ ಕುಸಿದು 50637.53 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಶೇಕಡಾ 0.07ರಷ್ಟು ಅಥವಾ 10.80 ಪಾಯಿಂಟ್ಸ್ ಏರಿಕೆಗೊಂಡು 15208.50

ನಿಫ್ಟಿಯಲ್ಲಿ ಏಷ್ಯನ್ ಪೇಂಟ್ಸ್, ಟೈಟಾನ್ ಕಂಪನಿ, ಈಚರ್ ಮೋಟಾರ್ಸ್, ಜೆಎಸ್‌ಡಬ್ಲ್ಯೂ ಸ್ಟೀಲ್ ಮತ್ತು ಬ್ರಿಟಾನಿಯಾ ಇಂಡಸ್ಟ್ರೀಸ್ ನಿಫ್ಟಿಯಲ್ಲಿ ಹೆಚ್ಚು ಲಾಭ ಗಳಿಸಿದವ ಷೇರುಗಳಾಗಿದ್ದು, ಎಚ್‌ಡಿಎಫ್‌ಸಿ ಬ್ಯಾಂಕ್, ಎಚ್‌ಡಿಎಫ್‌ಸಿ ಲೈಫ್, ರಿಲಯನ್ಸ್ ಇಂಡಸ್ಟ್ರೀಸ್, ಆಕ್ಸಿಸ್ ಬ್ಯಾಂಕ್ ಮತ್ತು ಕೋಲ್ ಇಂಡಿಯಾ ಸೇರಿವೆ ನಷ್ಟ ಅನುಭವಿಸಿವೆ.
ನಿಫ್ಟಿ ಬ್ಯಾಂಕ್ ಹೊರತುಪಡಿಸಿ, ಇಂಧನ ಮತ್ತು ಪಿಎಸ್‌ಯು ಬ್ಯಾಂಕ್ ಸೂಚ್ಯಂಕಗಳು ಇತರ ಎಲ್ಲ ವಲಯ ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ಕೊನೆಗೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ 0.31 ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕ 0.26 ರಷ್ಟು ಕುಸಿದಿದೆ.


Click it and Unblock the Notifications