For Quick Alerts
ALLOW NOTIFICATIONS  
For Daily Alerts

ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಣೆಗೆ ಸಿಎಂ ಬೊಮ್ಮಾಯಿ ಮನವಿ

|

ನವದೆಹಲಿ, ಫೆಬ್ರುವರಿ 8: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್‌ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್‌ಗೆ ಜಿಎಸ್‌ಟಿ ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ.

ಆದರೆ ಕೋವಿಡ್- 19ರಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ನೆರವಿಗೆ ಧಾವಿಸುವಂತೆ ಕೇಂದ್ರ ಹಣಕಾಸು ಸಚಿವರಲ್ಲಿ ಸಿಎಂ ಬಸವರಾಜ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಣೆಗೆ ಸಿಎಂ ಬೊಮ್ಮಾಯಿ ಮನವಿ

ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿಎಸ್‌ಟಿ ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.

ಕೇಂದ್ರದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಸಂಸದರೊಂದಿಗೆ ಚರ್ಚೆ
ಸೋಮವಾರ ನವದೆಹಲಿಯಲ್ಲಿ ನಡೆದ ಕರ್ನಾಟಕ ಸಂಸದರ ಸಭೆಯಲ್ಲಿ ಕೇಂದ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ನೀರಾವರಿ, ರೈಲ್ವೆ, ನಗರಾಭಿವೃದ್ಧಿ, ಬಂದರು, ರಸ್ತೆ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಕೇಂದ್ರದಲ್ಲಿ ಯಾವ ವಿಷಯಗಳನ್ನು ಪ್ರಸ್ತಾಪ ಮಾಡಬೇಕೆನ್ನುವ ವಿಚಾರಗಳ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ನಡೆಸಲಾದ ಸಂಸದರ ಸಭೆಯ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರ ನೇತೃತ್ವದಲ್ಲಿ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಮಂಜೂರಾತಿ ದೊರೆತಿರುವ ಯೋಜನೆಗಳನ್ನು ಸಂಪೂರ್ಣವಾಗಿ ರಾಜ್ಯಕ್ಕೆ ಒದಗಿಸಿಕೊಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು.

ವಿತ್ತ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ 1 ಲಕ್ಷ ಕೋಟಿ ರೂ.ಗಳ ಬಂಡವಾಳ ಅನುದಾನದಲ್ಲಿ 50 ವರ್ಷಗಳ ಅವಧಿಗೆ ಬಡ್ಡಿರಹಿತವಾಗಿ ಒಂದು ಲಕ್ಷ ಕೋಟಿ ರೂ.ಗಳನ್ನು ರಾಜ್ಯಕ್ಕೆ ಸಾಲದ ರೂಪದಲ್ಲಿ ನೀಡಬೇಕೆನ್ನುವ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕಕ್ಕೆ ಎಷ್ಟು ಬರಬೇಕೆನ್ನುವುದು ಚರ್ಚೆಯಾಗಿ, ಸುಮಾರು 3800 ರಿಂದ 4000 ಕೋಟಿ ರೂ.ಗಳು ದೊರೆಯಬಹುದೆಂಬ ಅಂದಾಜಿದೆ ಎಂದರು.

English summary

CM Basavaraj Bommai Appeals For Extension of GST Relief Period For States

Karnataka Chief Minister Basavaraj Bommai has met Union Finance Minister Nirmala Sitharaman to discuss extending GST relief to the states to 2024-25.
Story first published: Tuesday, February 8, 2022, 8:28 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X