ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಭರ್ತಿಯಾಗುತ್ತಿದ್ದ ಕಬಿನಿಗೆ (Kabini) ತಪ್ಪದೇ ಬಾಗಿನ ಅರ್ಪಣೆ ಮಾಡಿ ಈ ವರ್ಷ ಹೀಗೆ ಮಳೆಯಾಗಲಿ ಎಂದು ಬೇಡಿಕೊಳ್ಳವಂತವಹ ಪದ್ದತಿ ಇದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಿನಿ ನದಿಗೆ 'ಬಾಗಿನಾ' ಅರ್ಪಿಸಿ ಅಣೆಕಟ್ಟಿನ ಪುನಶ್ಚೇತನಕ್ಕೆ 32.25 ಕೋಟಿ ಅನುಮೋದನೆ ನೀಡಲಾಗಿದೆ ಎಂದು ಘೋಷಣೆಯನ್ನು ಮಾಡಿದ್ದಾರೆ. ಇದರ ಜೊತೆಗೆ ಈ ಪ್ರದೇಶಕ್ಕೆ ನೀರಾವರಿ ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಹ ಒತ್ತು ನೀಡಲಾಗುತ್ತದೆ ಎಂದು ಹೇಳಿದ್ಧಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರತಿ ವರ್ಷ 1.13 ಲಕ್ಷ ಎಕರೆ ಕೃಷಿ ಭೂಮಿಗೆ ನೀರು ಒದಗಿಸುವ ಕಬಿನಿ ನದಿಗೆ ಪೂಜೆ ಸಲ್ಲಿಸುವುದಾಗಿ ಹೇಳಿದರು. ಅಣೆಕಟ್ಟು ಪುನಶ್ಚೇತನಕ್ಕೆ 32.25 ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಅವರು ಹೇಳಿದರು. ಕೆಆರ್‌ಎಸ್ ಅಣೆಕಟ್ಟಿನ ಬಳಿ ಇರುವ ಬೃಂದಾವನ ಉದ್ಯಾನದ ಮಾದರಿಯಲ್ಲಿಯೇ ಉದ್ಯಾನವನವನ್ನು ಅಭಿವೃದ್ಧಿಪಡಿಸುವ ಯೋಜನೆಯೂ ಇದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಅಣೆಕಟ್ಟುಗಳ ಸುರಕ್ಷತೆಯ ಕುರಿತ ತಾಂತ್ರಿಕ ಸಮಿತಿಯ ವರದಿಯನ್ನು ಸ್ವೀಕರಿಸಿದ ನಂತರ ರಾಜ್ಯಾದ್ಯಂತ ಅಣೆಕಟ್ಟುಗಳ ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದ ಗೇಟ್ ಒಂದು ಹಾನಿಗೊಳಗಾದ ನಂತರ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಬಿನಿ ಜಲಾಶಯವು ಈ ವರ್ಷ ಭರ್ತಿಯಾಗಿದೆ. ಮಳೆ ಪ್ರಮಾಣ ಕಡಿಮೆಯಿದ್ದರೂ ಸಹ ಇದು ಈ ಪ್ರದೇಶಕ್ಕೆ ಆಧಾರವಾಗಿದೆ ಎಂದು ಹೇಳಿದ್ಧಾರೆ.
ಇತ್ತೀಚೆಗೆ ನಮ್ಮ ಸರ್ಕಾರ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರದೇಶಕ್ಕೆ 35 ಕೋಟಿ ರೂಪಾಯಿ ವೆಚ್ಚದ ಯೋಜನೆಗಳನ್ನು ಅನುಮೋದನೆಯನ್ನು ಕೊಟ್ಟಿತ್ತು. 88 ಕೋಟಿ ರೂಪಾಯಿ ವೆಚ್ಚದ ಹನಿ ನೀರಾವರಿ ಯೋಜನೆಯ ವಿಸ್ತೃತ ವರದಿಯನ್ನು ಸಹ ನೀಡಲಾಗಿತ್ತು ಎಮದು ಅವರು ಹೇಳಿದ್ದಾರೆ.

ಉದ್ಯೋಗ ಸೃಷ್ಟಿ
ಕಬಿನಿ ಉತ್ಸವ ಮತ್ತು ಕಾವೇರಿ ಆರತಿ ಯೋಜನೆಗಳು ಜಾರಿಯಲ್ಲಿ ಇವೆ. ನಾವು ನಮ್ಮ ಪ್ರವಾಸೋದ್ಯಮದ ಮೂಲಕ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸಲು ನಮ್ಮ ಸರ್ಕಾರವು ಸದಾ ಬದ್ದವಾಗಿ ಇರುತ್ತದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಗಳ ಜವಾಬ್ದಾರಿಯಿಲ್ಲ
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ ನಿಂದ ತೆರಿಗೆ ನೋಟೀಸ್ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಜಿಎಸ್‌ಟಿ ಪದ್ಧತಿ ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರಗಳ ಜವಾಬ್ದಾರಿಯಿಲ್ಲ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.


Click it and Unblock the Notifications