KSRTC: 100 ಅಶ್ವಮೇಧ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಇದರಲ್ಲೂ ಮಹಿಳೆಯರಿಗೆ ಉಚಿತ

ಬೆಂಗಳೂರು, ಫೆಬ್ರವರಿ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ (ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂಬಾರಿ ಉತ್ಸವ ಬಸ್‌, ಪಲ್ಲಕ್ಕಿ ಉತ್ಸವ ಬಸ್‌ಗಳನ್ನು ಈಗಾಗಲೇ ಪರಿಚಯಿಸಿದೆ. ಪ್ರಿಮಿಯಂ ಅಲ್ಲದ ರಾಜ್ಯದ ಎಲ್ಲಾ ಬಸ್‌ಗಳಲ್ಲೂ ಈಗ ಮಹಿಳೆಯರಿಗೆ ಸರ್ಕಾರ ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವಂತೆ ಈಗ ಹೊಸದಾಗಿ ಚಾಲನೆಗೊಂಡಿರುವ ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್‌ಗಳಲ್ಲೂ ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಅವಕಾಶವಿರುತ್ತದೆ.

100 ಅಶ್ವಮೇಧ ಬಸ್‌ಗಳಿಗೆ ಚಾಲನೆ, ಮಹಿಳೆಯರಿಗೆ ಉಚಿತ

ಕೆಎಸ್‌ಆರ್‌ಟಿಸಿಯ ಕೆಂಗೇರಿ ವರ್ಕ್ ಶಾಪ್‌ಗೆ​ 100 ಹೊಸ ಬಸ್​ ಬಂದಿವೆ. ಕೆಎಸ್​ಆಆರ್‌ಟಿಸಿದೆ ಒಟ್ಟು 1,000 ಹೊಸ ಬಸ್‌​ಗಳು ಬರಲಿವೆ. ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್‌​ಗಳು ಬಂದಿವೆ. ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರುವರಿ 5) ಬೆಂಗಳೂರಿನ ವಿಧಾನಸೌಧದ ಮುಂಭಾಗ ಚಾಲನೆ ನೀಡಿದ್ದಾರೆ.

ಇನ್ನು ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನಿಡಿದೆ. ಮೊದಲ ಹಂತದಲ್ಲಿ ರಸ್ತೆಗಿಳಿದಿರುವ ಈ 100 ಬಸ್‌ಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ಹೆಸರಿಡಲಾಗಿದೆ. ಈ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಅಶ್ವಮೇಧ ಕ್ಲಾಸಿಕ್ ಬಸ್‌ಗಳು 3.42 ಮೀಟರ್ ಎತ್ತರವಿದ್ದು, 12 ಪ್ಯಾನಿಕ್ ಬಟನ್, ಜಿಪಿಎಸ್, 2 ರೇರ್ ಕ್ಯಾಮರಾ ಹಾಗೂ 6 ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಟ್‌ಗಳನ್ನು ಒಳಗೊಂಡಿವೆ. 52 ಬಕೆಟ್ ಸೀಟು, ಬಸ್‌ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೇಜ್ ಇಡಲು ಹೆಚ್ಚು ಸ್ಥಳಾವಕಾಶವನ್ನು ನೀಡಲಾಗಿದೆ.

ಎಲ್ಲಾ ಬಸ್‌ಗಳು ಭಾರತ್ ಸ್ಟೇಜ್ 6 ಮಾನದಂಡಗಳನ್ನು ಹೊಂದಿವೆ. ಅವು ಎತ್ತರವಾಗಿದ್ದು, ಅಗಲವಾದ ಹಿಂಬದಿ ಮತ್ತು ಮುಂಭಾಗದ ವಿಂಡ್‌ಸ್ಕ್ರೀನ್‌ಗಳು ಮತ್ತು ದೊಡ್ಡ ಪ್ರಯಾಣಿಕರ ಕಿಟಕಿ ಗ್ಲಾಸ್‌ಗಳನ್ನು ಹೊಂದಿವೆ. ಸಿಎಂ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದ ಹೊರಗೆ ಚಾಲನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+