ಬೆಂಗಳೂರು, ಸೆಪ್ಟೆಂಬರ್ 13: ನಂದಿನ ಹಾಲಿನ ಬೆಲೆ ಏರಿಕೆ ಮಾಡುತ್ತೇವೆ. ನಂದಿನ ಹಾಲಿನ ಬೆಲೆ ಏರಿಕೆ ಸಂಬಂಧ ಸಭೆ ಕರೆದು ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರದ ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮಾಡಿ ಬಳಿಕ ಮಾತನಾಡಿದ ಅವರು, ಈ ಹೆಚ್ಚಳದ ಹಣ ರೈತರಿಗೆ ಹೋಗಬೇಕು ಎಂದು ಹೇಳಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ನಂದಿನ ಹಾಲಿನ ಉತ್ಪನ್ನಗಳನ್ನು ಹೆಚ್ಚಳ ಮಾಡಿದ್ದ ಸರ್ಕಾರ ಈಗ ಮತ್ತೊಮ್ಮೆ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿದೆ.

ನಂದಿನಿ ಹಾಲು ಹೆಚ್ಚಳ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇದೆ. ಈ ಬಾರಿ ಏರಿಕೆ ಮಾಡುವ ದರವನ್ನು ನೇರವಾಗಿ ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜೂನ್‌ನಲ್ಲಿ ಕರ್ನಾಟಕ ಮಿಲ್ ಫೆಡರೇಶನ್ (kmf) ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿ ಬೆಲೆ ಏರಿಕೆ ಮಾಡಿತ್ತು. ಹೊಸ ದರಗಳು ಜೂನ್ 26 ರಿಂದಲೇ ಜಾರಿಗೆ ಬಂದಿದ್ದವು.
ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದ ಭೀಮಾನಾಯ್ಕ್, ಪ್ರಸ್ತುತ ಮಾರಾಟ ಮಾಡಲಾಗುತ್ತಿರುವ ಹಾಲಿನ ಜೊತೆ ಐವತ್ತು ಮಿಲಿ ಲೀಟರ್ ಹಾಲು ಹೆಚ್ಚುವರಿ ಸೇರಿಸಲಾಗುವುದು. ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಹೇಳಿದ್ದರು.
ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್‌ನಲ್ಲಿ ಅಮುಲ್ ಒಂದು ಲೀಟರ್‌ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಲಬ್ಬೊ ಲಬ್ಬೋ ಅಂತಾರೆ:
ನೀವೆಲ್ಲ (ಜೆಡಿಎಸ್) ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications