ದುಬಾರಿ 'ರಾಮಯ್ಯ': ಸಿಎಂ ಐಶಾರಾಮಿ ಜೀವನಕ್ಕೆ ಇಷ್ಟು ಹಣ ಬೇಕೇ .. ಹೌದು, ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲ್ಲೂ ಇಲ್ಲಿಯವರೆಗೂ ವಿಮಾನ ಪ್ರಯಾಣ ಮಾಡಿರಿರುವ ಮಾಹಿತಿ ಸದನದಲ್ಲಿ ಬಹಿರಂಗವಾಗಿದೆ.ಹಾಗಿದ್ರೆ ಸಿಎಂ ಸಿದ್ದರಾಮಯ್ಯ ಇಂದುವರರೆಗೂ ವಿಮಾಣ ಪ್ರಯಾಣಕ್ಕೆ ಖುರ್ಚು ಮಾಡಿದ್ದ ವೆಚ್ಚವೆಷ್ಟು..? ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ...
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವೂ ಇನ್ನೂ ಆಗಿಲ್ಲ ಈ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯ ದುಬಾರಿ ಪ್ರಯಾಣವನ್ನು ಮಾಡಿದ್ದಾರೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ಹೆಚ್ಚಿನ ಚರ್ಚೆಗಳು ಆಗುತ್ತಿದೆ. ಜೆಡಿಎಸ್ ಎಂಎಲ್‌ಸಿ ಟಿ.ಎನ್. ಜವರಾಯಿಗೌಡ ಅವರು ಸಿಎಂ ಬುಕ್ ಮಾಡಿದ ಜೆಟ್‌ಗಳು ಮತ್ತು ವಿಮಾನಗಳ ಕುರಿತು ಕೇಳಿದ ಪ್ರಶ್ನೆಗೆಯಲ್ಲಿ ಈ ಮಾಹಿತಿ ತಿಳಿದುಬಂದಿದೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಬರಹದ ರೂಪದಲ್ಲಿ ಉತ್ತರವನ್ನು ನೀಡಿದ್ದಾರೆ.

ಇದುವರೆಗೂ ಸಿಎಂ ಸಿದ್ದರಾಮಯ್ಯ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಬರೋಬ್ಬರಿ 11 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಖರ್ಚು ವೆಚ್ಚದ ವರದಿಯನ್ನು ಸರ್ಕಾರ ವಿಧಾನ ಪರಿಷತ್‌ನಲ್ಲಿ ಮಾಹಿತಿಯನ್ನು ಬಹಿರಂಗಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ವಾಣಿಜ್ಯ ವಿಮಾನಯಾನ ಸಂಸ್ಥೆಗಳಿಂದ ಉತ್ತಮ ಸಂಪರ್ಕ ಹೊಂದಿರುವ ದೆಹಲಿ ಮತ್ತು ಚೆನ್ನೈನಂತಹ ನಗರಗಳಿಗೆ ಚಾರ್ಟರ್ ವಿಮಾನಗಳನ್ನು ಬುಕ್ ಮಾಡಿದ್ದಾರೆ. ಹಾಗೂ ವಿವಿಧ ಜಿಲ್ಲೆ ಪ್ರವಾಸ, ವಿಶೇಷ ಪ್ರವಾಸಗಳಿಗಾಗಿ ಸಿಎಂ ವಿಮಾನ ಬಳಕೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿನಿಂದಲ್ಲೂ ಇಲ್ಲಿಯವರೆಗೆ ಸಿಎಂ ಹಾಗೂ ರಾಜ್ಯಪಾಲರು ಸುಮಾರು ಒರೋಬ್ಬರಿ 34 ಕೋಟಿ ರೂ. ವಿಮಾನಯಾನಕ್ಕೆ ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಈ ವರದಿಯಲ್ಲಿ ಸಿಎಂ, ರಾಜ್ಯಪಾಲರು ಹಾಗೂ ಹೈಕೋರ್ಟ್ ನ್ಯಾಯಾಧೀಶರ ಸಂಪೂರ್ಣ ವಿಮಾನ ಹಾಗೂ ಹೆಲಿಕಾಷ್ಟರ್ ಪ್ರಯಾಣದ ಖರ್ಚು ವೆಚ್ಚದ ಮಾಹಿತಿಯಿದೆ. ಕಳೆದ ವರ್ಷದಲ್ಲಿ ಸುಮಾರು 21 ಕೋಟಿ ರೂ. ವಿಮಾನ ಪ್ರಯಾಣಕ್ಕೆ ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಿಂದ ಕೇವಲ 1.5 ಗಂಟೆ ಪ್ರಯಾಣದಂತಹ ಮೈಸೂರಿನ ಹತ್ತಿರದ ಸ್ಥಳಗಳಿಗೂ ಸಿಎಂ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಪ್ರಯಾಣಕ್ಕಾಗಿ 10.85 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂಬುವುದು ಆಶ್ಚರ್ಯಕರವಾದ ವಿಷಯವಾಗಿದೆ.
ಸಿಎಂ ಸಿದ್ದರಾಮಯ್ಯ ರಾಜ್ಯದ ಮೇಲೆ ಸಾಲಗಳನ್ನು ಹೊರೆಸುತ್ತಿದ್ದಾರೆ ಹೊರತು ಅಭಿವೃದ್ದಿಯ ಕಡೆ ಗಮನವರಿಸುತ್ತಲ್ಲ. ಇವರ ಹೆಲಿಕಾಪ್ಟರ್ ಪ್ರಯಾಣದ ಒಲವು ರಾಜ್ಯದ ಜನತೆ ಹುಬ್ಬೇರುವಂತೆ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಹಾರಾಟಕ್ಕೆ ಸರ್ಕಾರಿ ಬೊಕ್ಕಸವನ್ನು ಖಾಲಿ ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ.
ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ಖರ್ಚು ಮಾಡಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76,509 ಕೋಟಿ ಕೊಡಲು ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಆರಂಭಗೊಂಡ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನವನ್ನು ಸರ್ಕಾರ ಈ ವರೆಗೆ ತೆಗೆದುಕೊಂಡಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯ ಸಂಪುಟ ಉಪಸಮಿತಿ ವರದಿಯನ್ನು ನೀಡುವ ಮೊದಲೇ ಬಿಜೆಪಿಯವರು ಸರ್ಕಾರ ವಿವಿಗಳನ್ನು ಮುಚ್ಚಲು ಹೊರಟಿದೆ ಎಂದು ಟೀಕೆ ಮಾಡಿದ್ದಾರೆ.
ವರದಿಯೊಂದರ ಪ್ರಕಾರ, 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87,000 ರೂಪಾಯಿಗಿಂತ ಕಡಿಮೆ ಇದೆ. ದೇಶದಲ್ಲಿ ಅಸಮಾನತೆ ಅಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವವನ್ನು ನಾವು ಜಾರಿ ಮಾಡಿದ್ದೇವೆ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Click it and Unblock the Notifications