ಬೆಂಗಳೂರಿನಲ್ಲಿ ಈಗಾಗಲೇ ತಾಳಲಾರದ ಚಳಿ ಇದೆ. ಇನ್ನೂ ಚಳಿ ಹೆಚ್ಚಳವಾಗುತ್ತಿದೆ. ಈ ನಡುವೆ ಕರ್ನಾಟಕದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ಹೌದು, ಇಂದು ಅಂದರೆ ಜನವರಿ 19 ರಂದು ರಾಜ್ಯದ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಮಳೆ ಸುರಿಯಬಹುದು.
ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದೆ ಮತ್ತು ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಪ್ರಮುಖವಾಗಿ ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಮಂಗಳೂರು, ಚಾಮರಾಜನಗರ, ಮೈಸೂರು, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ಯ ಒಣಹವೆ ವಾತಾವರಣ ಇರಲಿದ್ದು, ಸಂಜೆಯಾಗುವಾಗ ಚಳಿಯ ಜೊತೆಗೆ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜನವರಿ 20ರ ಮುನ್ಸೂಚನೆ
ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಹಾಗೆಯೇ 48 ಗಂಟೆಗಳಲ್ಲಿಯೂ ಇದೇ ವಾತಾವರಣವಿರುವ ನಿರೀಕ್ಷೆಯಿದೆ. ಹಾಗೆಯೇ ಗುಡುಗು ಮತ್ತು ಭಾರೀ ಮಳೆಯ ಮುನ್ನೆಚರಿಕೆಯನ್ನು ನೀಡಿಲ್ಲ. ತಾಪಮಾನದ ಮುನ್ಸೂಚನೆಯನ್ನು ಕೂಡಾ ನೀಡಿಲ್ಲ.
ಮುಂದಿನ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲವಾದ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಆವರಿಸುವ ಸಾಧ್ಯತೆ ಅಧಿಕವಾಗಿದೆ. ಗರಿಷ್ಠವಾಗಿ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿದೆ.
ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎನ್ನುವ ಮಾಹಿತಿ ಇದೆ.


Click it and Unblock the Notifications