ರಾಜ್ಯದಲ್ಲಿ ದಿನ ಕಳೆದಂತೆ ಚಳಿ (Winter) ವಿಪರೀತವಾಗುತ್ತಿದೆ. ಜನರಂತೂ ಚಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಅತ್ತ ಕೆಲವು ಜಿಲ್ಲೆಗಳಲ್ಲಂತೂ ಬಿಸಿಲು ಬರದೇ, ಚಳಿಯಲ್ಲೇ ಜೀವನ ಸಾಗಿಸುವಂತಾಗಿದೆ. ಬೆಂಗಳೂರಿನಲ್ಲಂತೂ ದಿನಬೆಳಗಾದ್ರೆ ಸಾಕು ಚಳಿ, ರಸ್ತೆ ತುಂಬೆಲ್ಲಾ ಮಂಜು ಆವರಿಸಿಕೊಂಡಿರುತ್ತದೆ. ಇದೀಗ ಕರ್ನಾಟದಲ್ಲಿ ಮತ್ತೆ ಶುಷ್ಕ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಹಾಗಿದ್ರೆ ಇಂದು ಕರ್ನಾಟಕದ ಹವಾಮಾನ ಹೇಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಜನವರಿ 24ಕ್ಕೆ ಹೋಲಿಸಿದ್ರೆ, ಕನಿಷ್ಠ ಅಥವಾ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟಿನಲ್ಲಿ ಬದಲಾವಣೆಯಾಗುವುದಿಲ್ಲ ಎಂದು ಹೇಳಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಜಿಲ್ಲೆಗಳು ಯಾವುದೆಲ್ಲಾ ಗೊತ್ತಾ?
ಈ ಜಿಲ್ಲೆಗಳಲ್ಲಿ ಮಳೆ!
ಚಿಕ್ಕಬಳ್ಳಾಪುರ, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಮೈಸೂರು, ಕೊಡಗು, ಹಾಸನ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಎಲ್ಲೆಲ್ಲಿ ಒಣ ಹವೆ?
ಕೆಲವೆಡೆ ಮೋಡ ಕವಿದ ವಾತಾವರಣ ಇದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಜೊತೆಗೆ ತೀವ್ರ ಚಳಿ ಮುಂದುವರೆಯಲಿದೆ. ಅದರಲ್ಲಿ ಉತ್ತರ ಒಳನಾಡು ಜಿಲ್ಲೆಗಳಾದ, ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರ, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣ ಹವೆಯೇ ಇದ್ದು, ಇನ್ನೂ ಕೆಲವು ದಿನ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅದೇ ರೀತಿ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ರಾಮನಗರ, ಮೈಸೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ವಿಜಯನಗರ ಜಿಲ್ಲೆಗಳಲ್ಲೂ ಒಣ ಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಸಿಲಿಕಾನ್ ಸಿಟಿ ಬೆಂಗಳೂರು ಇಂದೂ ಕೂಡಾ ಮಂಜಿನಿಂದ ಆವೃತವಾಗಿದೆ. ಭಾನುವಾರ ಬೆಂಗಳೂರಿನಲ್ಲಿ ಚಳಿ ವಿಪರೀತವಾಗಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಆದ್ದರಿಂದ ಜನರು ಬೆಚ್ಚಗಿನ ಉಡುಪು, ಬಿಸಿನೀರು, ಬಿಸಿ ಬಿಸಿ, ಆರೋಗ್ಯಕರ ಆಹಾರ ತಿನ್ನುವುದನ್ನು ರೂಢಿ ಮಾಡಿಕೊಳ್ಳಿ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದೆ.
ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಆದ್ದರಿಂದ ಚಾಲಕರು ಕೂಡಾ ರಸ್ತೆಗಳಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಸಂಚರಿಸುವಂತೆ ಸಲಹೆ ನೀಡಲಾಗಿದೆ.


Click it and Unblock the Notifications