ಮೈಕೊರೆಯುವ ಚಳಿಯಲ್ಲಿ ರಾಜ್ಯದ ಜಿಲ್ಲೆಗಳು ಗಢ ಗಢ ಅಂತ ನಡುಗುತ್ತಿದೆ. ದಿನ ಹೋದಂತೆ ಚಳಿ ಕೂಡಾ ವಿಪರೀತವಾಗುತ್ತಿದೆ. ಇದೀಗ ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಚಳಿ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಹಾಗಿದ್ರೆ ಎಲ್ಲೆಲ್ಲಿ ಗರಿಷ್ಠ ತಾಪಮಾನ ಇರಲಿದೆ? ಎಲ್ಲೆಲ್ಲಿ ಶೀತಗಾಳಿ ಜೊತೆಗೆ ಚಳಿ ವಿಪರೀತವಾಗಲಿದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಜ್ಯದಲ್ಲಿ ಚಳಿಯ ನಡುವೆ ಕೆಲವು ಪ್ರದೇಶಗಳಲ್ಲಿ ಮಳೆ ಕೂಡಾ ಆಗುತ್ತಿದೆ. ಅಲ್ಲದೇ ಹವಾಮಾನ ಇಲಾಖೆ ಕೂಡಾ ಮಳೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ
ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಲಘು ಮಳೆಯಾಗಬಹುದು ಜೊತೆಗೆ ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಇನ್ನು ತಾಪಮಾನ ನೋಡುವುದಾದ್ರೆ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಬಿಟ್ಟು ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಶೀತಗಾಳಿ
ಇನ್ನು ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಭಾಗಗಳಲ್ಲಿ ತಾಪಮಾನದ ಪ್ರಮಾಣ ಸಾಮಾನ್ಯವಾಗಿ ಹೋಲಿಸಿದ್ರೆ ಇಂದು ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 33 ರಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಇನ್ನು ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ್ಲಿ ಒಣ ಹವೆ ಮುಂದುವರೆಯಲಿದೆ. ಆದರೆ ರಾತ್ರಿಯ ವೇಳೆ ಚಳಿ ಹೆಚ್ಚಾಗಲಿದೆ.
ಈ ಜಿಲ್ಲೆಗಳಲ್ಲಿ ಮಳೆಯಬ್ಬರ ಶುರು
ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯೇ ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೇ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ ನಿನ್ನೆ ಬಿದ್ದಿದೆ. ಇದೀಗ ಚಿಕ್ಕ ಮಗಳೂರು ಮಂದಿ ಮೊದಲ ಮಳೆಯಲ್ಲೇ ಖುಷಿಗೊಂಡಿದ್ದು, ಕಾಫಿ ಬೆಳೆಗಾರರಿಗೆ ಸ್ವಲ್ಪ ಸಂಕಷ್ಟ ಎದುರಾಗಿದೆ. ಇನ್ನು ನಿನ್ನೆ ಬೆಳಗಾವಿಯಲ್ಲೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲೂ ಭಾರೀ ಮಳೆಯಾಗಿದೆ. ಅದರಲ್ಲೂ ವಿಶೇಷವಾಗಿ ಪುಣ್ಯ ಕ್ಷೇತ್ವಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಘಿದೆ ಎಂದು ವರದಿಯಾಗಿದೆ.
ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ. ಚಳಿಯಾಗಲಿ, ಮಳೆಯಾಗಲಿ ಜನರು ಮಾತ್ರ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications