ದಿನಂಪ್ರತಿ ಮಳೆ ಎಚ್ಚರಿಕೆಯನ್ನೇ (Rain Alert) ನೀಡುತ್ತಿದ್ದ ಹವಾಮಾನ ಇಲಾಖೆ, ಇದೀಗ ಚಳಿ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳು ಚಳಿಯಿಂದ (Cold) ನಡುಗುವಂತಾಗಿದೆ. ಅತ್ತ ದಿನವಿಡೀ ಒಣ ಹವೆ ಇರುತ್ತಿದ್ದ ಉತ್ತರ ಕರ್ನಾಟಕ ಕೂಡಾ ಗಢ ಗಢ ನಡುಗುತ್ತಿದೆ. ನವೆಂಬರ್ ತಿಂಗಳ ಮಧ್ಯದಿಂದ ಶುರವಾದ ಶೀತದಲೆ (Cold Wave) ಇನ್ನೂ ನಿಂತಿಲ್ಲ. ಅದರಲ್ಲೂ ವಿಶೇಷವಾಗಿ ಪ್ರಸ್ತುತ ಉತ್ತರ ಕರ್ನಾಟಕದಲ್ಲಿ ಶೀತದಲೆ ಹೆಚ್ಚಾಗಿದೆ. ಅಲ್ಲದೇ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲಿ ಚಳಿ... ಚಳಿ!
ಅತ್ತ ತಿಂಗಳಿಡೀ ಮಳೆಯಾಗುತ್ತಿದ್ದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದರೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ವಿಜಯನಗರ, ಕೋಲಾರ, ರಾಮನಗರ, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಸ್ವಲ್ಪ ಒಣ ಹವೆ ಮುಂದುವರೆಯಲಿದ್ದು, ಸ್ವಲ್ಪ ಪ್ರಮಾಣದಲ್ಲಿ ಚಳಿ ಇರಲಿದೆ ಎಂದು ಸೂಚನೆ ನೀಡಲಾಗಿದೆ. ಸಾರ್ವಜನಿಕರೂ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸಲಹೆ ಪಾಲಿಸುವಂತೆ ಕೋರಲಾಗಿದೆ.
ಉತ್ತರ ಒಳನಾಡಿನಲ್ಲಿ ತಾಪಮಾನ ಇಲಾಖೆ
ನಿನ್ನೆ ಬೀದರ್‌ನಲ್ಲಿ 7.4 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 8.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಡಿಸೆಂಬರ್‌ನಲ್ಲಿ ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಭಾರೀ ಇಳಿಕೆಯಾಗಿದೆ. ಅತ್ತ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಇಂದು ಕುಸಿತ ಕಾಣಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಚಳಿ ಹೆಚ್ಚಳ!
ಇನ್ನು ಬೆಂದಕಾಳೂರು, ಸದ್ಯ ಚಳಿಯಿಂದ ಗಢ ಗಢ ನಡುಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತುತ ಚಳಿಯ ವಾತಾವರಣ ಹೆಚ್ಚಾಗುತ್ತಿದೆ. ಅಲ್ಲದೇ ಸಾರ್ವಜನಿಕರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೆಚ್ಚನೆಯ ಉಡುಪು, ಚಳಿಯಿಂದ ರಕ್ಷಣೆ, ಸರಿಯಾದ ಆಹಾರ ತಿನ್ನುವಂತೆ ಭಾರತೀಯ ಹವಾಮಾನ ಇಲಾಖೆ ಸಲಹೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಪ್ರದೇಶಗಳಲ್ಲಿ ಚಳಿ ಜೊತೆಗೆ ದಟ್ಟವಾದ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 25 ರಿಂಗ 27ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲೂ ಇದೇ ರೀತಿಯ ಹವಾಮಾನ ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಪೂರ್ವ ಉತ್ತರ ಪ್ರದೇಶದಲ್ಲಿ ಡಿಸೆಂಬರ್ 22, 26, 27 ರಂದು ಮಂಜಿನ ವಾತಾವರಣ, ವಿಪರೀತ ಚಳಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications