ಕಳೆದ ಕೆಲವು ತಿಂಗಳಿಂದ ರಾಜ್ಯದಲ್ಲಿ ಹೆಚ್ಚಾಗಿದ್ದ ಚಳಿ (Cold) ವಾತಾವರಣ, ಇದೀಗ ಬೇಸಿಗೆಯತ್ತ ಮುಖ ಮಾಡುತ್ತಿದೆ. ಚಳಿಯಿಂದ ಗಢ ಗಢ ನಡುಗುತ್ತಿದ್ದ ಜನ, ಇದೀಗ ಬೇಸಿಗೆಯ (Summer) ಬೇಗೆಗೆ ಒಣಗುವ ಪರಿಸ್ಥಿತಿ ಎದುರಾಗಲಿದೆ. ಇದೀಗ ಹವಾಮಾನ ಇಲಾಖೆ ಕರ್ನಾಟಕದ ಇಂದಿನ ಹವಾಮಾನ ವರದಿ (Karnataka Weather) ಬಿಡುಗಡೆ ಮಾಡಿದ್ದು, ಬೆಂಗಳೂರು (Bengaluru) ಸೇರಿ ಹಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದ ದಟ್ಟವಾದ ಮಂಜು ಆವರಿಸಿತ್ತು. ಇನ್ನು ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಆದರೂ ಬಿಸಿಲಿನ ತಾಪಮಾನ ತಟ್ಟುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಂದರೆ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮೈಸೂರು ಮತ್ತು ಹಾಸನ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಾಗದೆ, ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಹೆಚ್ಚಾಗಲಿದೆ ಬೇಸಿಗೆ!
ಕರ್ನಾಟಕದಲ್ಲಿ ಈ ವರ್ಷ ಬೇಸಿಗೆ ಬಿಸಿ ಭಾರೀ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ತಾಪಮಾನ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ಮಾರ್ಚ್, ಏಪ್ರಿಲ್ ಸಂದರ್ಭದಲ್ಲಿ ಬೇಸಿಗೆ ಬರಲಿದೆ. ಆದ್ರೆ ಇದೀಗ ನಿರೀಕ್ಷೆಗೂ ಮೊದಲೇ ಬೇಸಿಗೆ ಬರಲಿದೆ ಎಂದು ಮುನ್ಸೂಚನೆ ನೀಡಿದ್ದು, ಇದರಿಂದ ಜನರ ಮೇಲೂ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಾಗಲಿದೆ. ಕರಾವಳಿ ಪ್ರದೇಶದಲ್ಲಿ ಇಂದು ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಇನ್ನು ಮಧ್ಯಾಹ್ನದ ಸಮಯದಲ್ಲಿ ಸೆಕೆ ಹೆಚ್ಚಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶೀತ ವಾತಾವರಣ ಇರಲಿದೆ ಎನ್ನಲಾಗಿದೆ. ಅದೇ ರೀತಿ ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ. ರಾಯಚೂರು, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಅಲ್ಲದ ಶಿವಮೊಗ್ಗ, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ವಿಜಯನಗರ, ಮೈಸೂರು, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಒಣ ಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್, ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ತೀವ್ರ ಚಳಿಯಿಂದಾಗಿ ಜನರ ಆರೋಗ್ಯದಲ್ಲೂ ಸಮಸ್ಯೆಗಳಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಉತ್ತಮ ಆರೋಗ್ಯಕ್ಕಾಗಿ ಬಿಸಿ ಬಿಸಿ ನೀರು, ಆಹಾರ, ಬೆಚ್ಚಗಿನ ಬಟ್ಟೆ ಧರಿಸುವಂತೆ ಸಲಗೆ ನೀಡಲಾಗಿದೆ.


Click it and Unblock the Notifications