ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಪ್ರಮಾಣ (Rain) ಕಮ್ಮಿಯಾಗಿದೆ. ಆದ್ರೆ ಚಳಿ ವಾತಾವರಣ ಶುರುವಾಗಿದೆ. ಈ ಬಾರಿ ಚಳಿಗಾಲ ಬಹಳ ಬೇಗನೆ ಆರಂಭವಾಗಿದ್ದು, ಈ ಮಧ್ಯೆ ಕೆಲವೊಂದು ದಿನ ಮಳೆಯೂ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ, ಯಾವೆಲ್ಲಾ ಜಿಲ್ಲೆಗಳಲ್ಲಿ ಚಳಿ ಇರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರಿನ ಹವಾಮಾನ:
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಇಂದೂ ಕೂಡಾ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ ಅಲ್ಲಲ್ಲಿ ಲಘು ಮಳೆಯಾಘುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನಿ ತಾಪಮಾನ ನೋಡುವುದಾದ್ರೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ ಸುಮಾರು 18 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎನ್ನಲಾಗಿದೆ. ಇನ್ನು ಬೆಂಗಳೂರಿನಾದ್ಯಂತ ಈ ವಾರವಿಡೀ ಮೋಡ ಕವಿದ ವಾತಾವರಣವೇ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಜೊತೆ ಚಳಿ:
ಇನ್ನು ಮುಂದಿನ ಕೆಲವು ದಿನಗಳವರೆಗೆ ಕರ್ನಾಕದ ಬಹು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮುಂದುವರೆಯಲಿದೆ. ಆದರೆ ಬೆಳಗ್ಗೆ ಮಂಜಿನ ಜೊತೆಗೆ ಚಳಿ ಇರಲಿದೆ ಎನ್ನಲಾಗಿದೆ. ಆದರೂ ಕರ್ನಾಟಕದ ನೈಸರ್ಗಿಕ ಮೇಲ್ವಿಚಾರಣಾ ಕೇಂದ್ರ, "ಇಂದಿನಿಂದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವು ತಾಲೂಕುಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು" ಎಂದು ಸೂಚನೆ ನೀಡಿದೆ.
ಇಲಾಖೆ ಮುನ್ಸೂಚನೆ ಪ್ರಕಾರ ಕರ್ನಾಟಕದ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗದಲ್ಲ ಲಘು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಮೋಡ ಕವಿದ ವಾತಾವರಣ ಇರಲಿದ್ದು, ಜೊತೆಗೆ ಚಳಿಯೂ ಇರಲಿದೆ.
ಯಾವುದೇ ಎಚ್ಚರಿಕೆ ಇಲ್ಲ
ಭಾರೀ ಪ್ರಮಾಣದಲ್ಲಿ ಮಳೆಯಾಗದೇ ಇರುವುದರಿಂದ ಹವಾಮಾನ ಇಲಾಖೆ ಯಾವುದೇ ಅಲರ್ಟ್ ಘೋಷಣೆ ಮಾಡಿಲ್ಲ. ಆದ್ರೂ ನದಿ, ಸಮುದ್ರ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಸದಾ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಇನ್ನು ಮಳೆಗಿಂತಲೂ ಈ ಬಾರಿ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ.
ಇನ್ನು ಚೆನ್ನೈ, ತಮಿಳುನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಶಾಲೆಗಳಿಗೂ ರಜೆ ನೀಡಲಾಗಿದೆ. ಚೆನ್ನೈ, ತಿರುವಲ್ಲೂರು, ಕಾಂಚಿಪುರಂ ಮತ್ತು ಇತರ ಜಿಲ್ಲೆಗಳಲ್ಲಿ ಶಾಲೆಗಳು ಇಂದು ಮುಚ್ಚಲ್ಪಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೇ ಕೇರಳದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಪಟ್ಟಣಂತಿಟ್ಟ, ಕೊಟ್ಟಾಯಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೇ ಶಬರಿಮಲೆ ಯಾತ್ರಿಕರಿಗೂ ಜಾಗರೂಕರಾಗುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಟ್ರಾಫಿಕ್, ರಸ್ತೆಯಲ್ಲಿ ನೀರು ಈ ಎಲ್ಲಾ ಸಂದರ್ಭದಲ್ಲಿ ಚಾಲಕರೂ ಮುನ್ನೆಚ್ಚರಿಕೆಯನ್ನು ವಹಿಸಬೇಕು.


Click it and Unblock the Notifications