For Quick Alerts
ALLOW NOTIFICATIONS  
For Daily Alerts

ಶುಭ ಸುದ್ದಿ: ಸತತವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ!

|

ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಈ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ದೊರೆತಿದೆ. ಜೂನ್ ಒಂದರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಮೇಲಿನ ಬೆಲೆಯು 135 ರೂಪಾಯಿ ಇಳಿಕೆಯಾಗಿತ್ತು. ಜುಲೈ 1ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂಪಾಯಿ 198 ಕಡಿತ ಮಾಡಲಾಗಿತ್ತು. ಇಂದು (ಆಗಸ್ಟ್ 1) ಸಿಲಿಂಡರ್ ಬೆಲೆಯಲ್ಲಿ 36 ರು ತಗ್ಗಲಿದೆ.

 

ಆದರೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ಬೆಲೆ ಪರಿಷ್ಕರಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆ ತಿಳಿಸಿವೆ.

ಆಗಸ್ಟ್‌ 1ರಿಂದ ಯಾವೆಲ್ಲಾ ಹಣಕಾಸು ನಿಯಮ ಬದಲಾವಣೆ ತಿಳಿಯಿರಿ

ಬೆಲೆ ಪರಿಷ್ಕರಣೆ ಬಳಿಕ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಸರಾಸರಿ 36 ರು ತಗ್ಗಲಿದೆ. ಪ್ರಮುಖ ನಗರಗಳ ದರ ಪಟ್ಟಿ ಹೀಗಿದೆ: ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ಸಿಲಿಂಡರ್ ದರ ನೀಡಲಾಗಿದೆ.

ನಗರ-ಆಗಸ್ಟ್ ದರ (19KG)-14.2 KG(ಗೃಹಬಳಕೆ)

 • ನವದೆಹಲಿ: 1976 ರು-1053ರು
 • ಕೋಲ್ಕತಾದಲ್ಲಿ: 2095.50ರು- 1079.00 ರು
 • ಮುಂಬೈನಲ್ಲಿ 1936.50ರು- 1052.50 ರು
 • ಚೆನ್ನೈನಲ್ಲಿ 2141ರು-1068.50
 • ಬೆಂಗಳೂರು: 2064 ರು-1055 ರು
 • ಹೈದರಾಬಾದ್: 2198ರು-1105 ರು
 • ಜೈಪುರ: 2202ರು- 1056 ರು
 • ಲಕ್ನೋ: 2086ರು- 1090 ರು
 • ಪಾಟ್ನಾ: 2250ರು- 1151 ರು
 • ನೋಯ್ಡಾ: 1937.5ರು -1050 ರು
 • ತಿರುವನಂತಪುರಂ: 2010ರು- 1062 ರು

ಶುಭ ಸುದ್ದಿ: ಸತತವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ!


ಬೆಲೆ ಏರಿಳಿತ:

ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆ 100 ರೂ.ಗಳಷ್ಟು ಏರಿಕೆಯಾಗಿತ್ತು. ಮಾರ್ಚ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಕೇವಲ 2,012 ರೂ. ಏಪ್ರಿಲ್ 1 ರಂದು 2,253 ರೂ ಆಗಿದ್ದು, ಮೇ 1 ರಂದು 2,355 ರೂ. ಇತ್ತು

ಕೇಂದ್ರ ಸರ್ಕಾರವು ಹಣ ದುಬ್ಬರ ನಿಯಂತ್ರಣಕ್ಕಾಗಿ ಹಲವು ಕ್ರಮವನ್ನು ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಈ ಮೂಲಕ ಅಗತ್ಯ ವಸ್ತುಗಳ ಗಗನಕ್ಕೇರಿರುವ ಬೆಲೆಗಳನ್ನು ತಗ್ಗಿಸುವ ಪ್ರಯತ್ನ ಮಾಡಲಾಯಿತು. ಇದಾದ ಬಳಿಕ ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ಕೂಡ ಮೌಲ್ಯವರ್ಧಿತ ತೆರಿಗೆಯನ್ನು ಇಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ದೇಶದ ಪ್ರಮುಖ ನಗರಗಳ ಎಲ್ ಪಿ ಜಿ ದರ ತಿಳಿಯಲು ಕ್ಲಿಕ್ ಮಾಡಿ

 

ಗಮನಿಸಿ: ಈ ನಡುವೆ ಕಚ್ಚಾತೈಲ ಬೆಲೆ ಏರಿಳಿತ ಕಂಡಿದ್ದರೂ ಎರಡು ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಬಹುತೇಕ ಸ್ಥಿರವಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್‌ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.

ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ

English summary

Commercial LPG cylinder prices slashed check out new price list on major cities

Commercial LPG cylinder prices slashed check out new price list on major cities across India.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X