For Quick Alerts
ALLOW NOTIFICATIONS  
For Daily Alerts

ನಾಳೆಯಿಂದ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ, ಕ್ಯಾಶ್ ವಿತ್‌ಡ್ರಾ ಮಾಡಿದ್ದೀರಾ?

|

ನಾಳೆ ಅಂದರೆ ಜನವರಿ 31 ಹಾಗೂ ಫೆಬ್ರವರಿ 1ರಂದು ಹಲವಾರು ಬ್ಯಾಂಕ್ ನೌಕರರ ಸಂಘಗಳು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ ನಡೆಸಲಿವೆ. ಇದರಿಂದಾಗಿ ಭಾರತದಾದ್ಯಂತ ವಿಶೇಷವಾಗಿ ಪಿಎಸ್‌ಯು ಬ್ಯಾಂಕುಗಳಲ್ಲಿ ಬ್ಯಾಕಿಂಗ್ ಸೇವೆ ಮೇಲೆ ಪರಿಣಾಮ ಬೀರಲಿದೆ.

ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆ (UFBU) ತಿಂಗಳ ಕೊನೆಯಲ್ಲಿ ಮತ್ತು ಫೆಬ್ರವರಿ ಆರಂಭದಲ್ಲಿ ಎರಡು ದಿನಗಳ ಕಾಲ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಅಂದು ಕೂಡ ಬ್ಯಾಂಕ್ ಮುಷ್ಕರವಿರಲಿದೆ. ವೇತನ ಪರಿಷ್ಕರಣೆ ಕುರಿತು ಭಾರತೀಯ ಬ್ಯಾಂಕುಗಳ ಸಂಘ(ಐಬಿಎ)ಯೊಂದಿಗೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ.

ನಾಳೆಯಿಂದ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ

ಸತತ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಗ್ರಾಹಕರಿಗೆ ತೊಂದರೆಯಾಗದಿರುವಂತೆ ಸೂಕ್ತ ಬದಲಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತಿಳಿಸಿದೆ. ಇನ್ನು ಬಹುತೇಕ ಬ್ಯಾಂಕುಗಳು ಎರಡು ದಿನಗಳ ಕಾಲ ಸೇವೆಯಲ್ಲಿ ಪರಿಣಾಮ ಬೀರಬಹುದು ಎಂದು ಈಗಾಗಲೇ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ.

2017ರ ನವಂಬರ್ 01ರಿಂದ ಬಗೆಹರಿಯದೇ ಉಳಿದಿರುವ ವೇತನ ಪರಿಷ್ಕರಣೆ ಬೇಡಿಕೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಒತ್ತಾಯಿಸಿ ಮಾರ್ಚ್ ತಿಂಗಳಲ್ಲೂ ಸಹ ಮೂರು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.

ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಭಾರತೀಯ ಬ್ಯಾಂಕ್ ನೌಕರರ ಫೆಡರೇಷನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ನೌಕರರ ಫೆಡರೇಶನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ ಮತ್ತು ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟಗಳನ್ನು ಈ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು (UFBU) ಒಳಗೊಂಡಿದೆ.

English summary

Consecutive Two Days Bank Strike All Over India

Bank unions have called for a two-day nationwide strike on January 31 and February 1
Story first published: Thursday, January 30, 2020, 18:59 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X