ದೇಶದಲ್ಲಿ ಕೊರೊನಾವೈರಸ್ ಹರಡುವಿಕೆಯಿಂದ 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ದೃಷ್ಟಿಯಿಂದ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರಟ್ ಬುಧವಾರ ತಿಳಿಸಿದೆ.
ರಾಷ್ಟ್ರವ್ಯಾಪಿ ಲಾಕ್‌ಡೌನ್ ಆಗಿರುವುದರಿಂದ ಉದ್ಯೋಗಿಗಳ ಸುರಕ್ಷತೆ ದೃಷ್ಟಿಯಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲು ಮುಂದಾಗಿದೆ.

"ಹಲೋ ಸಹ ಭಾರತೀಯರೇ, ನಾವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ. ನಿಮ್ಮ ಅಗತ್ಯತೆಗಳು ಯಾವಾಗಲೂ ನಮ್ಮ ಆದ್ಯತೆಯಾಗಿರುತ್ತವೆ ಮತ್ತು ಸಾಧ್ಯವಾದಷ್ಟು ಬೇಗ ನಾವು ನಿಮಗೆ ಸೇವೆ ಸಲ್ಲಿಸುತ್ತೇವೆ ಎಂದು ನಮ್ಮ ಭರವಸೆ ಇದೆ "ಎಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ವಾಲ್ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ ಕಳೆದ ಕೆಲವು ದಿನಗಳಿಂದ ವಿವಿಧ ರಾಜ್ಯಗಳಲ್ಲಿ ಜನರು ಮತ್ತು ಸರಕುಗಳ ಚಲನೆಗೆ ನಿರ್ಬಂಧಗಳನ್ನು ಜಾರಿಗೊಳಿಸಿದ್ದರಿಂದ ತನ್ನ ವ್ಯವಹಾರವನ್ನು ನಡೆಸಲು ಹೆಣಗಾಡುತ್ತಿದೆ. ಇತರೇ ಇ-ಕಾಮರ್ಸ್ ಪೋರ್ಟಲ್‌ಗಳಾದ ಅಮೆಜಾನ್, ಸ್ನ್ಯಾಪ್‌ಡೀಲ್, ಬಿಗ್‌ಬಾಸ್ಕೆಟ್ ಮತ್ತು ಗ್ರೋಫರ್ಸ್ ಸಹ ಇದೇ ರೀತಿಯ ಕಾರ್ಯಾಚರಣೆ ಸಮಸ್ಯೆಗಳನ್ನು ಎದುರಿಸಿದೆ.
ಆಹಾರ, ಔಷಧೀಯ ವಸ್ತುಗಳು, ವೈದ್ಯಕೀಯ ಉಪಕರಣಗಳ ಇ-ಕಾಮರ್ಸ್ ವಿತರಣೆಯನ್ನು ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಪೂರೈಕೆ ಸರಪಳಿ ಜಾಲದ ಕುಸಿತವು ಎಲ್ಲಾ ಇ-ಕಾಮರ್ಸ್‌ಗೆ ಕಷ್ಟಕರವಾಗಿಸಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications