ಕೊರೊನಾವೈರಸ್ ಪರಿಣಾಮ ಪ್ರಪಂಚದಾದ್ಯಂತ ಭಾರೀ ಪ್ರಮಾಣದಲ್ಲಿ ಉದ್ಯೋಗ ನಷ್ಟವುಂಟಾಗುತ್ತಿದ್ದು, ಒಂದರ ಹಿಂದೆ ಮತ್ತೊಂದರಂತೆ ಖಾಸಗಿ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿವೆ. ಇದೇ ಸಾಲಿಗೆ ದೇಶಿಯ ಸಾಮಾಜಿಕ ಜಾಲತಾಣ 'ಶೇರ್ ಚಾಟ್' 101 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ.
ಸಂಸ್ಥೆಯ ಒಟ್ಟಾರೆ ನೌಕರರ ಪೈಕಿ 4 ನೇ ಒಂದು ಭಾಗದಷ್ಟು ನೌಕರರನ್ನು ಉದ್ಯೋಗದಿಂದ ತೆಗೆದುಹಾಕುತ್ತಿರುವುದಾಗಿ ಶೇರ್ ಚಾಟ್ ಬುಧವಾರ (ಮೇ 20) ಘೋಷಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂಪನಿಯ ಸಹ ಸಂಸ್ಥಾಪಕ ಹಾಗೂ ಸಿಇಒ ಅಂಕುಶ್ ಸಚದೇವ ''ಜಾಹಿರಾತು ಮಾರುಕಟ್ಟೆಯಲ್ಲಿ ಕೋವಿಡ್-19 ರ ಅಸ್ಥಿರತೆಯ ಪರಿಣಾಮ ಸಂಸ್ಥೆಯ ನೌಕರರ ಪೈಕಿ 101 ಜನರನ್ನು ಉದ್ಯೋಗದಿಂದ ತೆಗೆದುಹಾಕಲಾಗಿದೆ. ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆಗಳಿಂದಾಗಿ ಉದ್ಯಮಕ್ಕೆ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನೌಕರರನ್ನು ಉದ್ಯೋಗದಿಂದ ತೆಗೆದುಹಾಕಲಾಗಿದೆ'' ಎಂದು ಹೇಳಿದ್ದಾರೆ.
ವರ್ಕ್ ಫ್ರಮ್ ಹೋಮ್ ಕೆಲಸ ಮಾಡುವ ವಾತಾವರಣವನ್ನು ನಾವು ಅಳವಡಿಕೆ ಮಾಡಿಕೊಳ್ಳಲಾಗಿದೆ. ಕಚೇರಿಯಲ್ಲೇ ನಡೆಯುವ ಕೆಲಸಗಳ ಕುರಿತು ನಾವು ಮರುಪರಿಶೀಲನೆ ಮಾಡಿದ್ದೇವೆ ಎಂದು ಸಿಇಒ ಹೇಳಿದ್ದಾರೆ.
ತಿಂಗಳಿಗೆ 60 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಬೆಂಗಳೂರು ಮೂಲದ ಶೇರ್ ಚಾಟ್ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಮತ್ತು ಇತರೆ ಕೆಲವು ಹೂಡಿಕೆದಾರರಿಂದ ಕಳೆದ ಆಗಸ್ಟ್ ನಲ್ಲಿ 100 ಮಿಲಿಯನ್ ಡಾಲರ್ ನಷ್ಟು ಗಳಿಸಿತ್ತು.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications