ಕೋವಿಡ್-19 ಸಾಂಕ್ರಾಮಿಕದ ಎರಡನೇ ತರಂಗ ಅಲೆ ಜೋರಾಗಿದ್ದು, ಹಲವು ರಾಜ್ಯಗಳು ಈಗಾಗಲೇ ಕರ್ಫ್ಯೂ ವಿಧಿಸಿವೆ. ಸಾಂಕ್ರಾಮಿಕ ರೋಗದ ಹೆಚ್ಚಳದ ಜೊತೆಗೆ ನಿರ್ಬಂಧಗಳು ಹೆಚ್ಚಿರುವ ಕಾರಣ ಬೇಡಿಕೆ ಮತ್ತು ಉತ್ಪಾದನೆ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.
''ಕೊರೊನಾವೈರಸ್‌ನಿಂದಾಗಿ ಗ್ರಾಹಕ ಮತ್ತು ಹೂಡಿಕೆದಾರರ ಮನೋಭಾವದ ವಿಷಯದಲ್ಲಿ ದೇಶವು ಹೆಚ್ಚಿನ ಅನಿಶ್ಚಿತತೆಗೆ ಸಿದ್ಧತೆ ನಡೆಸಬೇಕಿದೆ ಮತ್ತು ಅಗತ್ಯವಿರುವಾಗ ಸರ್ಕಾರವು ಹಣಕಾಸಿನ ಕ್ರಮಗಳೊಂದಿಗೆ ಸ್ಪಂದಿಸುತ್ತದೆ'' ಎಂದು ನೀತಿ ಆಯೋಗ್ ಉಪಾಧ್ಯಕ್ಷ ರಾಜೀವ್ ಕುಮಾರ್ ಇಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯು ಹಿಂದಿನ ಪರಿಸ್ಥಿತಿಗಿಂತ ಸಾಕಷ್ಟು ಕಷ್ಟಕರವಾಗಿದೆ ಎಂದು ಒಪ್ಪಿಕೊಂಡರೂ, 2022ರ ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆಯು ಶೇಕಡಾ 11ರಷ್ಟು ಬೆಳೆಯುತ್ತದೆ ಎಂದು ರಾಜೀವ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಭಾರತದಲ್ಲಿ ಅನೇಕ ರಾಜ್ಯಗಳಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆಯು ಭಾರೀ ಪ್ರಮಾಣದಲ್ಲಿ ಏರಿಕೆಗೊಂಡಿದ್ದು, ಸಾವಿನ ಸಂಖ್ಯೆಯಲ್ಲೂ ಹೆಚ್ಚಳ ಕಂಡಿದೆ. ಅನೇಕ ರಾಜ್ಯ ಸರ್ಕಾರಗಳು ಜನರ ಚಲನೆಗೆ ನಿರ್ಬಂಧಗಳನ್ನು ಹೇರಲಾಗಿದೆ.
ಕೇಂದ್ರ ಸರ್ಕಾರ ಲಾಕ್‌ಡೌನ್ ಕುರಿತು ಏನಾದರೂ ಯೋಚಿಸುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಕೋವಿಡ್ ತರಂಗದ ನೇರ ಮತ್ತು ಪರೋಕ್ಷ ಪರಿಣಾಮವನ್ನು ವಿಶ್ಲೇಷಿಸಿದ ನಂತರ ಈ ಪ್ರಶ್ನೆಗೆ ಉತ್ತರಿಸಬೇಕಾಗಿದೆ ಎಂದು ಹೇಳಿದರು.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?



Click it and Unblock the Notifications