For Quick Alerts
ALLOW NOTIFICATIONS  
For Daily Alerts

ಕೊರೊನಾ ಕಾರಣ : ಬ್ಯಾಂಕ್‌ಗಳ ಕೆಲಸದ ಸಮಯ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಿರ್ಬಂಧ

|

ದೇಶದಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಲಸದ ಸಮಯವನ್ನು ನಿರ್ಬಂಧಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ.

''ನಾವು ಕೊರೊನಾವೈರಸ್ ಎರಡನೇ ಅಲೆಯ ಸವಾಲಿನ ಅವಧಿಯನ್ನು ಎದುರಿಸುತ್ತಿದ್ದೇವೆ. ಹಲವಾರು ರಾಜ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಕೊರೊನಾ ಸೋಂಕುಗಳನ್ನು ದಾಖಲಿಸುತ್ತಿದೆ ಮತ್ತು ಆರ್ಥಿಕ ಚಟುವಟಿಕೆಗಳ ಬಗ್ಗೆ ಗಂಭೀರ ಕಾಳಜಿಗಳಿವೆ'' ಎಂದು ಐಬಿಎ ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ (ಎಸ್‌ಎಲ್‌ಬಿಸಿ) ಕನ್ವೀನರ್‌ಗಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಬ್ಯಾಂಕ್‌ಗಳ ಕೆಲಸದ ಸಮಯ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮಾತ್ರ!

ಏಪ್ರಿಲ್ 21ರಂದು ವಿಶೇಷ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಐಬಿಐ ಈ ನಿರ್ಧಾರ ತೆಗೆದುಕೊಂಡಿದ್ದು, ಕಳೆದ ವರ್ಷ ಹೊರಡಿಸಲಾಗಿದ್ದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳಲ್ಲಿ (ಎಸ್‌ಒಪಿ) ಬ್ಯಾಂಕ್‌ಗಳು ಏನೆಲ್ಲಾ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ನಿರ್ಧರಿಸಲಾಯಿತು.

ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯಗಳು ಕೋವಿಡ್-19 ಸೋಂಕಿನ ಸರಪಳಿಯನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಬ್ಯಾಂಕ್‌ಗಳು ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ವಿಭಿನ್ನ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಾಗಬಹುದು" ಎಂದು ಅದು ಹೇಳಿದೆ.

ಪತ್ರದ ಪ್ರಕಾರ, ಬ್ಯಾಂಕುಗಳು ಠೇವಣಿ ಸ್ವೀಕರಿಸುವಿಕೆ, ನಗದು ಹಿಂಪಡೆಯುವಿಕೆ, ಹಣ ರವಾನೆ ಮತ್ತು ಸರ್ಕಾರಿ ವ್ಯವಹಾರಗಳ ನಾಲ್ಕು ಕಡ್ಡಾಯ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲಿದೆ. ಆಯಾ ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚುವರಿ ಸೇವೆಗಳನ್ನು ನಿರ್ಧರಿಸುತ್ತದೆ ಎಂದು ಹೇಳಿದೆ.

English summary

Covid-19 Impact: Bank To Curb Work Hours From 10am To 2pm

Covid-19 Infections reason Indian Banks’ Association (IBA) has advised banks to restrict working hours between 10 am to 2 pm
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X