ಸತತ ಕುಸಿತಕ್ಕೆ ಸಾಕ್ಷಿಯಾಗಿದ್ದ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಈ ಭಾನುವಾರದಂದು ಜಿಗಿತಗೊಂಡಿದೆ. ಅಕ್ಟೋಬರ್ 03ರಂದು ಬಿಟ್‌ಕಾಯಿನ್ ಶೇಕಡಾ 0.73ರಷ್ಟು ಏರಿಕೆಗೊಂಡಿದ್ದು, $48,109.88ರಷ್ಟು ದಾಖಲಾಗಿತ್ತು. ವಾರದ ಬಳಿಕ ಬಿಟ್ ಕಾಯಿನ್ ಸೇರಿದಂತೆ ಇತರೆ ಡಿಜಿಟಲ್ ದುಡ್ಡು ಚೇತರಿಕೆ ಕಂಡಿದ್ದು, ಎಲ್ಲವುಗಳ ಮೌಲ್ಯ 2,144,025,904,453 ಡಾಲರ್ ಗೇರಿದೆ.
ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 48,077.71 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.76ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 903,785,400,302 ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 48,282.06 ಡಾಲರ್ ಮತ್ತು ಕಡಿಮೆ ಬೆಲೆ 47,157.29 ಡಾಲರ್ ಆಗಿತ್ತು.ಕಳೆದ ವಾರದಲ್ಲಿ ಶೇ 11.19 ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 55.98 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,438.14 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.74ರಷ್ಟು ಏರಿಕೆ ಕಂದಿದೆ. ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 403,695,753,206 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,464.84 ಡಾಲರ್ ಮತ್ತು ಕಡಿಮೆ ಬೆಲೆ 3,317.14 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 350.02 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.08 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 5.00 ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 43,561,424,160 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.08 ಡಾಲರ್ ಮತ್ತು ಕನಿಷ್ಠ ಬೆಲೆ 1.02 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಶೇ 14.52ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 384.74 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2233 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.97ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 29,375,920,722 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.225 ಡಾಲರ್ ಮತ್ತು ಕಡಿಮೆ ಬೆಲೆ 0.2159 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಶೇ 8.63ರಷ್ಟು ಕುಸಿತ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4998.22 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.
ಕಾರ್ಡಾನೊ ಕ್ರಿಪ್ಟೋಕರೆನ್ಸಿ
ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.29 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.51ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 73,230,817,337ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.32 ಡಾಲರ್ ಮತ್ತು ಕಡಿಮೆ ಬೆಲೆ 2.22 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 0.96ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.
ಬಿಟ್‌ಕಾಯಿನ್ ಕ್ಯಾಶ್
ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 571.92 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 4.94ರಷ್ಟು ಹಿಗ್ಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 10,787,768,618 ಡಾಲರ್‌ಗೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 573.31ಡಾಲರ್ ಮತ್ತು ಕಡಿಮೆ ಬೆಲೆ 545.62 ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ 11.80ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಬಿಟ್‌ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 82.84 ರಷ್ಟು ಲಾಭವನ್ನು ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 3,785.82 ಡಾಲರ್ ಆಗಿದೆ.


Click it and Unblock the Notifications