For Quick Alerts
ALLOW NOTIFICATIONS  
For Daily Alerts

ಫೆಬ್ರವರಿ 5ರಂದು ಕ್ರಿಪ್ಟೋ ಮಾರುಕಟ್ಟೆಯಲ್ಲಿ ಕರೆನ್ಸಿಗಳ ಮೌಲ್ಯ ಏರಿಕೆ

|

ಜಾಗತಿಕ ಮಟ್ಟದ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ಶನಿವಾರ (ಫೆಬ್ರವರಿ 5)ದಂದು ಬಿಟ್‌ಕಾಯಿನ್ ಮೌಲ್ಯದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 1,708,250,719,923 ಯುಎಸ್ ಡಾಲರ್ ಗೇರಿದೆ. ಪಪ್ಪಿ ಕರೆನ್ಸಿ ಮೌಲ್ಯದಲ್ಲಿ ಅತಿಹೆಚ್ಚು ಏರಿಕೆಯಾಗಿದ್ದು, ಶೇಕಡಾ 519.42ರಷ್ಟು ಹೆಚ್ಚಳವಾಗಿದೆ.

ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳು ನಿಯಂತ್ರಣ ಹೇರಿವೆ. ಹೀಗಿದ್ದರೂ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ. ಕ್ರಿಪ್ಟೋಕರೆನ್ಸಿಗಳ ಖರೀದಿ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಭಾರತದಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಡಿಜಿಟಲ್ ಕರೆನ್ಸಿಗಳ ವರ್ಗಾವಣೆ ಮೇಲೆ ಶೇ.30ರಷ್ಟು ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಈಗಾಗಲೇ ನಿರ್ಧರಿಸಿದೆ.

ಚಿನ್ನದ ಬೆಲೆ ಸ್ಥಿರ: ಫೆಬ್ರವರಿ 5ರ ದರ ತಿಳಿದುಕೊಳ್ಳಿಚಿನ್ನದ ಬೆಲೆ ಸ್ಥಿರ: ಫೆಬ್ರವರಿ 5ರ ದರ ತಿಳಿದುಕೊಳ್ಳಿ

ಭಾರತೀಯರ ಹೂಡಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಲಿಯನ್ ಡಾಲರ್‌ಗಳಷ್ಟು ಹಣವನ್ನು ಭಾರತೀಯರೇ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಪ್ರಮಾಣ ಮೊದಲಿಗಿಂತ ಏರಿಕೆಯಾಗಿದೆ. ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಎಂದರೇನು. ಅವುಗಳ ಇತ್ತೀಚಿನ ದರ ಎಷ್ಟಿದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.

ಕ್ರಿಪ್ಟೋ ಮಾರುಕಟ್ಟೆ ಮತ್ತು ಬಿಟ್‌ಕಾಯಿನ್ ಕರೆನ್ಸಿ

ಕ್ರಿಪ್ಟೋ ಮಾರುಕಟ್ಟೆ ಮತ್ತು ಬಿಟ್‌ಕಾಯಿನ್ ಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಈ ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೀತಿಯ ಮುದ್ರಣ ರೂಪ ಇರುವುದಿಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ.

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 41,613.83 ಯುಎಸ್ ಡಾಲರ್‌ಗೆ ಬೆಲೆಯಲ್ಲಿ ವಹಿವಾಟು ನಡೆಸುತ್ತಿದ್ದು, ಶೇ 9.92ರಷ್ಟು ಏರಿಕೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 788,548,483,813 ಯುಎಸ್ ಡಾಲರ್‌ನಷ್ಟಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 41,729.43 ಡಾಲರ್ ಮತ್ತು ಕಡಿಮೆ ಬೆಲೆ 37,398.35 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ. 10.33ರಷ್ಟು ಏರಿಕೆಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 10.05 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 68,990.90 ಡಾಲರ್ ಆಗಿದೆ.

ಎಥೆರಿಯಮ್

ಎಥೆರಿಯಮ್

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,029.39 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.65ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 361,863,535,845 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,032.66 ಡಾಲರ್ ಮತ್ತು ಕಡಿಮೆ ಬೆಲೆ 2,771.40 ಡಾಲರ್ ಆಗಿತ್ತು. ಕಳೆದ ವಾರ ಶೇ.19.38ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇ.17.96 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,865.57 ಡಾಲರ್‌ನಷ್ಟಿದೆ.

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.6689 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.16ರಷ್ಟು ಇಳಿಕೆಯಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 32,094,476,279 ಡಾಲರ್‌ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.6837 ಡಾಲರ್ ಮತ್ತು ಕನಿಷ್ಠ ಬೆಲೆ 0.6075 ಡಾಲರ್ ಆಗಿತ್ತು. ಕಳೆದ ವಾರ ಶೇ 8.87ರಷ್ಟು ಏರಿಕೆಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 18.45 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಕಾರ್ಡಾನೊ

ಕಾರ್ಡಾನೊ

ಕಾರ್ಡಾನೊ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.16 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.26ರಷ್ಟು ಏರಿಕೆಯಾಗಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 38,922,077,171 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1.17 ಡಾಲರ್ ಮತ್ತು ಕಡಿಮೆ ಬೆಲೆ 1.05 ಡಾಲರ್ ಆಗಿತ್ತು. ಕಳೆದ ವಾರ ಶೇ.9.67ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 10.90 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 310.93 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.38ರಷ್ಟು ಏರಿಕೆಯಾಗಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 5,899,746,689 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 313.20 ಡಾಲರ್ ಮತ್ತು ಕಡಿಮೆ ಬೆಲೆ 283.81 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಬಿಟ್ ಕಾಯಿನ್ ಕ್ಯಾಶ್ ಶೇ.4.91ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 27.54 ಪ್ರತಿಶತದಷ್ಟು ನಷ್ಟ ಅನುಭವಿಸಬೇಕಾಗಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,836.63 ಡಾಲರ್ ಆಗಿದೆ.

English summary

Cryptocurrency Prices Today (05 February 2022): Bitcoin, Dogecoin, XRP and Ethereum Latest Rate Here

Cryptocurrency Prices Today (05 February 2022): Check out the Bitcoin, Dogecoin, Xrp and Ethereum Latest Rate Here.
Story first published: Saturday, February 5, 2022, 13:09 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X