ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಮಂಗಳವಾರ (ನವೆಂಬರ್ 16) ದಂದು ತುಸು ಇಳಿಕೆ ಕಂಡಿದೆ. ಬಿಟ್‌ಕಾಯಿನ್ ಶೇಕಡಾ 6ರಷ್ಟು ಇಳಿಕೆಗೊಂಡು 60 ಸಾವಿರ ಅಮೆರಿಕನ್ ಡಾಲರ್ ಮೊತ್ತಕ್ಕೆ ಮರಳಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 2,648,833,924,713 ಯುಎಸ್ ಡಾಲರ್ ಗೇರಿದೆ. ಅತಿ ಹೆಚ್ಚು ಲಾಭ ಗಳಿಸಿರುವ ಸೆಕ್ಯುರ್ಡ್ ಶಿಪ್ ಶೇ 1158.64ರಷ್ಟು ಏರಿಕೆ ಕಂಡಿದೆ.
ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ...
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 60,486.39ಯುಎಸ್ ಡಾಲರ್‌ಗೆ ಸೀಮಿತಗೊಂಡಿದ್ದು, ಶೇ 6.01 ರಷ್ಟು ಇಳಿಕೆ ಕಂಡಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 1,144,985,872,462 ಯುಎಸ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 64,280.93 ಡಾಲರ್ ಮತ್ತು ಕಡಿಮೆ ಬೆಲೆ 59,016.34 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ 9.58ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 245.27 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 68,789.63 ಡಾಲರ್ ಆಗಿದೆ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 4,318.48 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.19ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 511,372,513,234ಯುಎಸ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 4,891.70 ಡಾಲರ್ ಮತ್ತು ಕಡಿಮೆ ಬೆಲೆ 4,144.33 ಡಾಲರ್ ಆಗಿತ್ತು. ಕಳೆದ ವಾರ ಶೇ 9.88ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 792.86 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,891.70 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.10 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.90ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 52,108,288,961 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.19
ಡಾಲರ್ ಮತ್ತು ಕನಿಷ್ಠ ಬೆಲೆ 1.05 ಡಾಲರ್ ಆಗಿತ್ತು. ಕಳೆದ ವಾರ ಶೇ 11.79ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 262.64 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1.96ಡಾಲರ್‌ನಷ್ಟಿದೆ.
ಕಾರ್ಡಾನೊ ಕ್ರಿಪ್ಟೋಕರೆನ್ಸಿ
ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 1.92 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 5.39 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 64,094,813,445 ಯುಎಸ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.04 ಡಾಲರ್ ಮತ್ತು ಕಡಿಮೆ ಬೆಲೆ 1.62 ಡಾಲರ್ ಆಗಿತ್ತು. ಕಳೆದ ವಾರ ಶೇ 14.82ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.
ಬಿಟ್ ಕಾಯಿನ್ ಕ್ಯಾಶ್
ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 609.54ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.00 ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11,521,721,499
ಯುಎಸ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 672.67
ಡಾಲರ್ ಮತ್ತು ಕಡಿಮೆ ಬೆಲೆ 578.46 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 4.53 ರಷ್ಟು ಏರಿಕೆ ಕಂಡಿದೆ. ಬಿಟ್ ಕಾಯಿನ್ ಕ್ಯಾಶ್ ಒಂದು ವಾರದಲ್ಲಿ 12.75ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 134.83 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,635.15 ಡಾಲರ್ ಆಗಿದೆ.
ಡೋಜ್ ಕಾಯಿನ್
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2413ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.84 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 31,886,686,545 ಯುಎಸ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.2592 ಡಾಲರ್ ಮತ್ತು ಕಡಿಮೆ ಬೆಲೆ 0.2264 ಡಾಲರ್ ಆಗಿತ್ತು. ಕಳೆದ ವಾರ ಶೇ 11.49ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 8775.13 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.7376 ಡಾಲರ್‌ನಷ್ಟಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Renault Duster 2026: ಕಡಿಮೆ ಬೆಲೆಗೆ ಉತ್ತಮ ಕಾರು; 10.49 ಲಕ್ಷ ಬೆಲೆಯಲ್ಲಿ ಹೊಸ ರೆನಾಲ್ಟ್ ಡಸ್ಟರ್-ವಿಶೇಷತೆ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ



Click it and Unblock the Notifications