For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಆಗಸ್ಟ್ 01ರ ಬೆಲೆ

|

ಜನಪ್ರಿಯ ಡಿಜಿಟಲ್ ಕರೆನ್ಸಿ ಸದ್ಯ ಸಾಕಷ್ಟು ಏರಿಳಿತ ಕಾಣುತ್ತಿದ್ದು, ಕ್ರಿಪ್ಟೋಕರೆನ್ಸಿಗಳು ಮತ್ತೆ ಚೇತರಿಕೆ ಕಾಣುತ್ತಿದೆ. ಅದರಲ್ಲೂ ಬಿಟ್‌ಕಾಯಿನ್‌ ಮತ್ತೆ 40,000 ಅಮೆರಿಕನ್ ಡಾಲರ್ ಗಡಿದಾಟಿದ್ದು, 42,000 ಗಡಿ ಸಮೀಪಿಸಿದೆ. ಈ ಮೂಲಕ ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆದಾರರ ಒಲವು ಮುಂದುವರಿದಿದೆ. ಒಟ್ಟಾರೆ ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮೌಲ್ಯ ಏರಿಕೆಯಿಂದಾಗಿ ಒಟ್ಟಾರೆ ಡಿಜಿಟಲ್ ಕರೆನ್ಸಿ ಮಾರುಕಟ್ಟೆ ಮೌಲ್ಯ 1,661,130,673,977 ಡಾಲರ್ ಆಗಿದೆ.

 

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಏನಿದು ಬಿಟ್‌ಕಾಯಿನ್‌: ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಜನಪ್ರಿಯ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ದರವು ಕಳೆದ 24 ಗಂಟೆಗಳಲ್ಲಿ ಶೇ 0.18ರಷ್ಟು ಏರಿಕೆ ಕಂಡು 41,764.87 ಡಾಲರ್‌ನಷ್ಟಿದ್ದು, ಈ ಮೂಲಕ ಕಳೆದ ಒಂದು ವಾರದಲ್ಲಿ ಶೇಕಡ 20.60 ರಷ್ಟು ಹೆಚ್ಚಾಗಿದೆ. ಒಟ್ಟಾರೆ, ಬಿಟ್ ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಮೌಲ್ಯ 783,578,880,869 ಡಾಲರ್‌ನಷ್ಟು ಆಗಿದೆ.

ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 43.84 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್‌ನಷ್ಟಿದೆ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ 24 ಗಂಟೆಗಳಲ್ಲಿ ಶೇ 5.51ರಷ್ಟು ಏರಿಕೆ ಕಂಡು 2,597.80 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಕಳೆದ ಒಂದು ವಾರದಲ್ಲಿ ಶೇಕಡ 19.67 ರಷ್ಟು ಹೆಚ್ಚಾಗಿದೆ. ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 303,565,525,744 ಡಾಲರ್‌ನಷ್ಟು ಆಗಿದೆ.

ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 231.42 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಕಳೆದ 24 ಗಂಟೆಗಳಲ್ಲಿ ಶೇ 2.66ರಷ್ಟು ಏರಿಕೆ ಕಂಡು 0.7663 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಕಳೆದ ಒಂದು ವಾರದಲ್ಲಿ ಶೇಕಡ 26.29ರಷ್ಟು ಹೆಚ್ಚಾಗಿದೆ. ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಮೌಲ್ಯ 35,521,528,146 ಡಾಲರ್‌ನಷ್ಟು ಆಗಿದೆ.

ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 239.22 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ ಕಳೆದ 24 ಗಂಟೆಗಳಲ್ಲಿ ಶೇ 2.62ರಷ್ಟು ಏರಿಕೆ ಕಂಡುಪ್ರಸ್ತುತ 0.2129 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಕಳೆದ ಒಂದು ವಾರದಲ್ಲಿ ಶೇಕಡ 7.53ರಷ್ಟು ಹೆಚ್ಚಾಗಿದೆ. ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಮೌಲ್ಯ 27,890,508,989 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.214350 ಡಾಲರ್ ತನಕ ತಲುಪಿತ್ತು ಮತ್ತು ಕಡಿಮೆ ಬೆಲೆ 0.196020 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,305.65 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

English summary

Cryptocurrency Rate On August 1: bitcoin, dogecoin, xrp and ethereum Latest Rate Here

Here the details of Different bitcoins and Latest Rate and Market Cap as on August 1
Story first published: Sunday, August 1, 2021, 14:24 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X