For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಜುಲೈ 22ರ ಬೆಲೆ ತಿಳಿದುಕೊಳ್ಳಿ

|

ಇತ್ತೀಚಿನ ದಿನಗಳಲ್ಲಿ ಕ್ರಿಪ್ಟೋಕರೆನ್ಸಿಗಳ ಸದ್ದು ಜೋರಾಗಿದ್ದು, ಬಿಟ್‌ಕಾಯಿನ್‌ ನಂತಹ ಮಾರುಕಟ್ಟೆ ಕುಸಿತದ ನಡುವೆಯು ಹೂಡಿಕೆದಾರರ ಖರೀದಿ ನಿಂತಿಲ್ಲ. ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

 

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್‌

ಬಿಟ್‌ಕಾಯಿನ್‌

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 32,031.31 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.89 ಗಳಿಸುತ್ತಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 601.00 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 32,815.74 ಡಾಲರ್ ಮತ್ತು ಕಡಿಮೆ ಬೆಲೆ 29,927.85 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 9.62 ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ. ಇಂದು ಬಿಟ್‌ಕಾಯಿನ್‌ನ ದರ ಸುಮಾರು 3000 ಡಾಲರ್‌ನಷ್ಟು (ರೂ. 2.25 ಲಕ್ಷ) ಏರಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಕಚ್ಚಾ ತೈಲ ಬೆಲೆ ಇಳಿಕೆ: ಸತತ 5ನೇ ದಿನ ಪೆಟ್ರೋಲ್ ದರ ಬದಲಾವಣೆ ಇಲ್ಲಕಚ್ಚಾ ತೈಲ ಬೆಲೆ ಇಳಿಕೆ: ಸತತ 5ನೇ ದಿನ ಪೆಟ್ರೋಲ್ ದರ ಬದಲಾವಣೆ ಇಲ್ಲ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
 

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1,983.34 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.62 ಗಳಿಸುತ್ತಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 231.63 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2,032.84 ಡಾಲರ್ ಮತ್ತು ಕನಿಷ್ಠ ಬೆಲೆ 1,812.52 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 166.44 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ ಕಾಯಿನ್‌ಡೆಸ್ಕ್‌ನಲ್ಲಿ 0.568124 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.67 ಗಳಿಸುತ್ತಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 56.81 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.583999 ಡಾಲರ್ ಮತ್ತು ಕನಿಷ್ಠ ಬೆಲೆ 0.533900 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 154.54 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

 

ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.191549 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.11 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 24.97 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.214442 ಡಾಲರ್ ಮತ್ತು ಕಡಿಮೆ ಬೆಲೆ 0.176441 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 3,893.40 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

English summary

Cryptocurrency Rate On July 22: bitcoin, dogecoin, xrp and ethereum Latest Rate Here

Here the details of Different bitcoins and Latest Rate and Market Cap
Story first published: Thursday, July 22, 2021, 10:47 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X