ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಜುಲೈ 29ರ ಬೆಲೆ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಕ್ರಿಪ್ಟೋಕರೆನ್ಸಿಗಳ ಸದ್ದು ಜೋರಾಗಿದ್ದು, ಬಿಟ್‌ಕಾಯಿನ್‌ ನಂತಹ ಮಾರುಕಟ್ಟೆ ಕುಸಿತದ ನಡುವೆಯು ಹೂಡಿಕೆದಾರರ ಖರೀದಿ ನಿಂತಿಲ್ಲ. ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 39,736.40 ಡಾಲರ್‌ನಷ್ಟಿದ್ದು, ಇದು ಪ್ರಸ್ತುತ ಶೇಕಡಾ 0.21 ರಷ್ಟು ಕಡಿಮೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 745.83 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 40,906.34 ಡಾಲರ್ ಮತ್ತು ಕಡಿಮೆ ಬೆಲೆ 38,837.00 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ 36.76 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,283.13 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.34 ರಷ್ಟು ಕುಸಿದಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 266.86 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2,346.70 ಡಾಲರ್ ಮತ್ತು ಕನಿಷ್ಠ ಬೆಲೆ 2,246.41 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 208.81 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.701894 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.99 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 70.18 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.754117 ಡಾಲರ್ ಮತ್ತು ಕನಿಷ್ಠ ಬೆಲೆ 0.631433 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 219.78 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

 

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.202981 ಕ್ಕೆ ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.77 ರಷ್ಟು ಕಡಿಮೆಯಾಗಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 26.49 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.213847 ಡಾಲರ್ ಮತ್ತು ಕಡಿಮೆ ಬೆಲೆ 0.1201924 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,212.22 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+