ಮತ್ತೆ $40,000 ಗಡಿ ದಾಟಿದ ಬಿಟ್‌ಕಾಯಿನ್: ಜುಲೈ 30ರಂದು ಕ್ರಿಪ್ಟೋಕರೆನ್ಸಿಗಳ ಬೆಲೆ ಎಷ್ಟಿದೆ?

ಸದ್ಯ ಸಾಕಷ್ಟು ಏರಿಳಿತ ಕಾಣುತ್ತಿದ್ದ ಕ್ರಿಪ್ಟೋಕರೆನ್ಸಿಗಳು ಮತ್ತೆ ಚೇತರಿಕೆ ಸಾಧಿಸಿವೆ. ಅದರಲ್ಲೂ ಬಿಟ್‌ಕಾಯಿನ್‌ ಮತ್ತೆ 40,000 ಅಮೆರಿಕನ್ ಡಾಲರ್ ಗಡಿದಾಟಿದೆ. ಈ ಮೂಲಕ ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆದಾರರ ಒಲವು ಮುಂದುವರಿದಿದೆ.

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 40,037.91 ಡಾಲರ್‌ನಷ್ಟು ವ್ಯಾಪಾರವಾಗುತ್ತಿದೆ. ಇದು ಪ್ರಸ್ತುತ 0.75 ಶೇಕಡ ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 751.49 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 40,652.58 ಡಾಲರ್ ಮತ್ತು ಕಡಿಮೆ ಬೆಲೆ 39,420.12 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 37.40 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,424.94 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.57ರಷ್ಟು ಗಳಿಸುತ್ತಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 283.46 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2,450.36 ಡಾಲರ್ ಮತ್ತು ಕಡಿಮೆ ಬೆಲೆ 2,275.45 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 227.48 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.755723 ಡಾಲರ್‌ನಷ್ಟಿದೆ. ಇದು ಪ್ರಸ್ತುತ ಶೇಕಡಾ 7.94 ರಷ್ಟು ಏರಿಕೆಯಾಗುತ್ತಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 75.57 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.766132 ಡಾಲರ್ ಮತ್ತು ಕಡಿಮೆ ಬೆಲೆ 0.697903 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 240.75 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

 

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.208018 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಪ್ರಸ್ತುತ ಇದು ಶೇಕಡಾ 2.19 ರಷ್ಟು ಕಡಿಮೆಯಾಗಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 27.15 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.210598 ಡಾಲರ್ ಮತ್ತು ಕಡಿಮೆ ಬೆಲೆ 0.200488 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,290.23 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+