For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಜುಲೈ 31ರ ಬೆಲೆ ತಿಳಿದುಕೊಳ್ಳಿ

|

ಸದ್ಯ ಸಾಕಷ್ಟು ಏರಿಳಿತ ಕಾಣುತ್ತಿದ್ದ ಕ್ರಿಪ್ಟೋಕರೆನ್ಸಿಗಳು ಮತ್ತೆ ಚೇತರಿಕೆ ಸಾಧಿಸಿವೆ. ಅದರಲ್ಲೂ ಬಿಟ್‌ಕಾಯಿನ್‌ ಮತ್ತೆ 40,000 ಅಮೆರಿಕನ್ ಡಾಲರ್ ಗಡಿದಾಟಿದ್ದು, 42,000 ಗಡಿ ಸಮೀಪಿಸಿದೆ. ಈ ಮೂಲಕ ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆದಾರರ ಒಲವು ಮುಂದುವರಿದಿದೆ.

 

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ದರವು ಪ್ರಸ್ತುತ 42,107.22 ಡಾಲರ್‌ನಷ್ಟಿದ್ದು, ಈ ಮೂಲಕ ಪ್ರಸ್ತುತ ಶೇಕಡ 4.95ರಷ್ಟು ಹೆಚ್ಚಾಗಿದೆ. ಈ ಮೂಲಕ ಬಿಟ್ ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 790.42 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 42,351.93 ಡಾಲರ್ ಮತ್ತು ಕಡಿಮೆ ಬೆಲೆ 38,349.22 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 43.84 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್‌ನಷ್ಟಿದೆ.

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
 

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,477.57 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.87ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 289.65 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,478.62 ಡಾಲರ್ ಮತ್ತು ಕನಿಷ್ಠ ಬೆಲೆ 2,317.68 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 231.42 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.753110 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.05ರಷ್ಟು ಕಡಿಮೆಯಾಗಿದೆ. ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 75.30 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.769385 ಡಾಲರ್ ಮತ್ತು ಕಡಿಮೆ ಬೆಲೆ 0.712338 ಡಾಲರ್‌ನಷ್ಟು ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 239.22 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.209521 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.32ರಷ್ಟು ಗಳಿಸುತ್ತಿದೆ. ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 27.33 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.214350 ಡಾಲರ್ ಮತ್ತು ಕಡಿಮೆ ಬೆಲೆ 0.196020 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,305.65 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

English summary

Cryptocurrency Rate On July 31: bitcoin, dogecoin, xrp and ethereum Latest Rate Here

Here the details of Different bitcoins and Latest Rate and Market Cap
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X