ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಜೂನ್ 22ರ ಬೆಲೆ ತಿಳಿದುಕೊಳ್ಳಿ

ವಿಶ್ವದೆಲ್ಲೆಡೆ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಅದರ ಬೇಡಿಕೆ ಮಾತ್ರ ಸಂಪೂರ್ಣ ಕಡಿಮೆಯಾಗಿಲ್ಲ. ಡಿಜಿಟಲ್ ಕರೆನ್ಸಿಗಳ ಕುರಿತು ಚರ್ಚೆ ಮುಂದುವರಿದಿದೆ.

ಪ್ರಪಂಚದ ಅನೇಕ ದೇಶಗಳ ಸರ್ಕಾರಗಳ ಕಟ್ಟುನಿಟ್ಟಿನಿಂದಾಗಿ, ಬಿಟ್‌ಕಾಯಿನ್‌ನಿಂದ ಕೆಲವು ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಯುವಿಕೆಗೆ ಕಾರಣವಾಗಿದೆ. ಜೊತೆಗೆ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇನ್ನೂ ಹೆಚ್ಚಿನ ಮಟ್ಟದಲ್ಲಿಯೇ ಉಳಿದಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್‌

ಬಿಟ್‌ಕಾಯಿನ್‌

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 32,913.86 ಕ್ಕೆ ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 6.11 ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 616.79 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 35,052.67 ಡಾಲರ್ ಮತ್ತು ಕಡಿಮೆ ಬೆಲೆ 31,179.05 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 12.20 ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1,967.04 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.70 ರಷ್ಟು ಕುಸಿದಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 228.94 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1,967.04 ಡಾಲರ್ ಮತ್ತು ಕಡಿಮೆ ಬೆಲೆ 1,860.36 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 162.96 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.784887 ಡಾಲರ್‌ರಷ್ಟಿದೆ. ಇದು ಪ್ರಸ್ತುತ ಶೇಕಡಾ 6.48 ರಷ್ಟು ಕುಸಿದಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 78.53 ಬಿಲಿಯನ್ ತಲುಪಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.845153 ಡಾಲರ್ ಮತ್ತು ಕನಿಷ್ಠ ಬೆಲೆ 0.770489 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 256.29 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

 

ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.286917 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಪ್ರಸ್ತುತ ಇದು ಶೇಕಡಾ 5.79 ರಷ್ಟು ಕಡಿಮೆಯಾಗಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 37.30 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.306007 ಡಾಲರ್ ಮತ್ತು ಕಡಿಮೆ ಬೆಲೆ 0.279953 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 5,967.72 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+