ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಇತ್ತೀಚಿನ ದಿನಗಳಲ್ಲಿ ಭಾರೀ ಚರ್ಚೆಯಲ್ಲಿದೆ. ಕ್ರಿಪ್ಟೊಕರೆನ್ಸಿ ಹೂಡಿಕೆ ಮೂಲಕ ಅನೇಕ ಜನರು ಹಣಗಳಿಸಿದ್ರೆ, ಮತ್ತೆ ಹಲವರು ನಷ್ಟ ಅನುಭವಿಸಿದ್ದಾರೆ. ಇದಕ್ಕೆ ಕಾರಣ ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ದರಗಳು ಇತ್ತೀಚೆಗೆ ಭಾರೀ ಕುಸಿಯಲಾರಂಭಿಸಿದೆ.
ಆದರೆ ಅನೇಕ ಕ್ರಿಪ್ಟೋ ಕರೆನ್ಸಿ ದರಗಳು ಇನ್ನೂ ಹೆಚ್ಚುತ್ತಿದ್ದು, ಜೊತೆಗೆ ಉತ್ತಮ ಆದಾಯವನ್ನು ಸಹ ನೀಡಿವೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಒಂದೆಡೆ ಕುಸಿಯುತ್ತಿದ್ದರೆ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟು ಎಂದು ಈ ಕೆಳಗೆ ತಿಳಿಯಿರಿ.
ಬಿಟ್‌ಕಾಯಿನ್ ರೇಟ್ ಎಷ್ಟಿದೆ?
ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯನ್ನು ಪ್ರಸ್ತುತ 36,058.90 ಡಾಲರ್ ಬೆಲೆಯಿದೆ. ಪ್ರಸ್ತುತ ಇದು ಶೇಕಡಾ 10.35 ರಷ್ಟು ಕಡಿಮೆಯಾಗಿದ್ದು, ಬಿಟ್‌ಕಾಯಿನ್ ಮಾರುಕಟ್ಟೆ ಕ್ಯಾಪ್ 674.85 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 41,806.71 ಡಾಲರ್ ಮತ್ತು ಕಡಿಮೆ ಬೆಲೆ 33,594.96 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ 24.07% ನಷ್ಟು ಆದಾಯವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.
ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,251.91 ಡಾಲರ್‌ನಷ್ಟಿದ್ದು, ಈ ಸಮಯದಲ್ಲಿ ಶೇಕಡಾ 19.42 ರಷ್ಟು ಕುಸಿತ ಕಂಡುಬಂದಿದೆ. ಇದರ ನಡುವೆ ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯು 258.93 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,791.28 ಡಾಲರ್ ಮತ್ತು ಕಡಿಮೆ ಬೆಲೆ 2,108.24 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 216.52 ರಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್ ಆಗಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.873875 ಡಾಲರ್ ಚಾಲನೆಯಲ್ಲಿದೆ. ಈ ಸಮಯದಲ್ಲಿ ಶೇಕಡಾ 22.68 ರಷ್ಟು ಕುಸಿತ ಕಂಡುಬಂದಿದೆ. ಈ ದರದಲ್ಲಿ ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 87.40 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.15 ಮತ್ತು ಕಡಿಮೆ ಬೆಲೆ 0.867339 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ 296.13% ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.
ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ
ಡಾಗ್‌ಕೋಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.327074 ಡಾಲರ್ ಬೆಲೆಯಿರಿಸಲಾಗಿದೆ. ಪ್ರಸ್ತುತ ಇದು ಶೇಕಡಾ 16.70 ರಷ್ಟು ಕಡಿಮೆಯಾಗಿದ್ದು, ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 42.20 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.398851 ಡಾಲರ್ ಮತ್ತು ಕಡಿಮೆ ಬೆಲೆ 0.314354 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ 6,805.05% ಲಾಭವನ್ನು ನೀಡಿದೆ. ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.52 ಡಾಲರ್ ಆಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications