ಕ್ರಿಪ್ಟೋ ಕರೆನ್ಸಿಯು ಸದ್ಯ ಸಾಕಷ್ಟು ಚರ್ಚೆಯ ವಿಷಯವಾಗಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಡಿಜಿಟಲ್ ರೂಪದ ಕರೆನ್ಸಿಯನ್ನು ನಿಷೇಧಿಸಿವೆ. ಆದರೂ ಹಲವು ರಾಷ್ಟ್ರಗಳಲ್ಲಿ ಕ್ರಿಪ್ಟೋಕರೆನ್ಸಿಗೆ ಸಾಕಷ್ಟು ಬೇಡಿಕೆಯಿದ್ದು, ಅನೇಕರು ಇದರಿಂದ ಲಾಭಗಳಿಸಿದ್ರೆ, ನಷ್ಟ ಅನುಭವಿಸಿರುವವರು ಹೆಚ್ಚಿದ್ದಾರೆ.
ಪ್ರಪಂಚದ ಅನೇಕ ದೇಶಗಳ ಸರ್ಕಾರಗಳ ಕಟ್ಟುನಿಟ್ಟಿನಿಂದಾಗಿ, ಅನೇಕ ಕ್ರಿಪ್ಟೋಕರೆನ್ಸಿಗಳ ಜೊತೆಗೆ ಬಿಟ್‌ಕಾಯಿನ್‌ನ ದರಗಳು ಸಂಪೂರ್ಣವಾಗಿ ಕುಸಿದಿವೆ. ಆದಾಗ್ಯೂ ಅನೇಕ ಕ್ರಿಪ್ಟೋ ಕರೆನ್ಸಿ ದರಗಳು ಇನ್ನೂ ಹೆಚ್ಚುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬಿಟ್‌ಕಾಯಿನ್
ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯನ್ನು ಪ್ರಸ್ತುತ 37,557.53 ಡಾಲರ್ ಬೆಲೆಯಿದೆ. ಪ್ರಸ್ತುತ ಇದು ಶೇಕಡಾ 5.19 ರಷ್ಟು ಕಡಿಮೆಯಾಗಿದ್ದು, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 703.04 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 40,894.44 ಡಾಲರ್ ಮತ್ತು ಕಡಿಮೆ ಬೆಲೆ 37,233.69 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಶೇಕಡಾ 29.19ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.
ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಎಥೆರಿಯಮ್
ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯನ್ನು ಪ್ರಸ್ತುತ 2,668.34 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 5.40 ರಷ್ಟು ಕಡಿಮೆಯಾಗಿದ್ದು, 309.63 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,914.89 ಡಾಲರ್ ಮತ್ತು ಕಡಿಮೆ ಬೆಲೆ 2,642.12 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 264.63 ರಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್ ಆಗಿದೆ.
ಎಕ್ಸ್‌ಆರ್‌ಪಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.945258 ಡಾಲರ್‌ನಷ್ಟಿದೆ. ಇದು ಪ್ರಸ್ತುತ ಶೇಕಡಾ 6.03 ರಷ್ಟು ಕಡಿಮೆಯಾಗಿದ್ದು, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 5 94.52 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ 1.07 ಡಾಲರ್ ಮತ್ತು ಕಡಿಮೆ ಬೆಲೆ 0.934939 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಶೇಕಡಾ 330.96ರಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.
ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ
ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.333708 ಡಾಲರ್ ದರ ಹೊಂದಿದೆ. ಇದು ಪ್ರಸ್ತುತ ಶೇಕಡಾ 5.86 ರಷ್ಟು ಕಡಿಮೆಯಾಗಿದ್ದು, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 43.35 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.367165 ಡಾಲರ್ ಮತ್ತು ಕಡಿಮೆ ಬೆಲೆ 0.327809 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ 6,979.36 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.


Click it and Unblock the Notifications