ಕ್ರಿಪ್ಟೋ ಕರೆನ್ಸಿಯು ಸದ್ಯ ಸಾಕಷ್ಟು ಚರ್ಚೆಯ ವಿಷಯವಾಗಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಡಿಜಿಟಲ್ ರೂಪದ ಕರೆನ್ಸಿಯನ್ನು ನಿಷೇಧಿಸಿವೆ. ಆದರೂ ಹಲವು ರಾಷ್ಟ್ರಗಳಲ್ಲಿ ಕ್ರಿಪ್ಟೋಕರೆನ್ಸಿಗೆ ಸಾಕಷ್ಟು ಬೇಡಿಕೆಯಿದ್ದು, ಕೆಲವು ಕ್ರಿಪ್ಟೋಕರೆನ್ಸಿಗಳು ಕುಸಿಯಲಾರಂಭಿಸಿವೆ.
ಪ್ರಪಂಚದ ಅನೇಕ ದೇಶಗಳ ಸರ್ಕಾರಗಳ ಕಟ್ಟುನಿಟ್ಟಿನಿಂದಾಗಿ, ಅನೇಕ ಕ್ರಿಪ್ಟೋಕರೆನ್ಸಿಗಳ ಜೊತೆಗೆ ಬಿಟ್‌ಕಾಯಿನ್‌ನ ದರಗಳು ಇಳಿಕೆಗೊಂಡಿವೆ. ಅಂತಹ ಪರಿಸ್ಥಿತಿಯಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬಿಟ್‌ಕಾಯಿನ್
ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 37,951.73 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 1.41 ರಷ್ಟು ಹೆಚ್ಚಾಗಿದ್ದು, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 710.45 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 40,430.21 ಡಾಲರ್ ಮತ್ತು ಕಡಿಮೆ ಬೆಲೆ 37,310.12 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಶೇಕಡಾ 31.65ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.
ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಎಥೆರಿಯಮ್
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,715.03 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 1.99 ರಷ್ಟು ಹೆಚ್ಚಾಗಿದ್ದು, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯು 315.08 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,868.78 ಡಾಲರ್ ಮತ್ತು ಕಡಿಮೆ ಬೆಲೆ 2,652.96 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 266.62 ರಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್ ಆಗಿದೆ.
ಎಕ್ಸ್‌ಆರ್‌ಪಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.967263 ಡಾಲರ್ ನಷ್ಟಿದೆ. ಇದು ಪ್ರಸ್ತುತ ಶೇಕಡಾ 1.57 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 96.37 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.04 ಡಾಲರ್ ಮತ್ತು ಕಡಿಮೆ ಬೆಲೆ 0.941182 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಶೇಕಡಾ 336.34ನಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.
ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ
ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.330773 ಡಾಲರ್‌ನಷ್ಟಿದೆ. ಪ್ರಸ್ತುತ ಇದು ಶೇಕಡಾ 0.44 ರಷ್ಟು ಕಡಿಮೆಯಾಗಿದ್ದು, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 42.88 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.347589 ಡಾಲರ್ ಮತ್ತು ಕಡಿಮೆ ಬೆಲೆ 0.326187 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ 6,885.86 ರಷ್ಟು ಲಾಭವನ್ನು ನೀಡಿದೆ. ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications