ನವದೆಹಲಿ, ನವೆಂಬರ್ 18: ಭಾರತದಲ್ಲಿ ಬಿಟ್‌ಕಾಯಿನ್ ಸೇರಿದಂತೆ ಕ್ರಿಪ್ಟೋಕರೆನ್ಸಿ ವಿಚಾರ ಇತ್ತೀಚೆಗೆ ತೀವ್ರ ಚರ್ಚೆ ಕಾರಣವಾಗಿದೆ. ಜಾಗತಿಕ ಮಟ್ಟದಲ್ಲಿ ನಿಷೇಧಿಸಲ್ಪಟ್ಟಿರುವ ಕ್ರಿಪ್ಟೋಕರೆನ್ಸಿಗಳನ್ನು ಬಾಂಡ್, ಷೇರು ಮತ್ತು ಚಿನ್ನದ ರೀತಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಭಾರತದಲ್ಲಿ ಕ್ರಿಪ್ಟೋಕರೆನ್ಸಿಯ ಸಂಗ್ರಹಕ್ಕೆ ಅನುಮತಿ ನೀಡಲಾಗುತ್ತದೆಯೇ ವಿನಃ ಕ್ರಿಪ್ಟೋ ಕರೆನ್ಸಿ ವಹಿವಾಟನ್ನು ನಿಷೇಧಿಸಲು ಕೇಂದ್ರ ಸರ್ಕಾರ ಬಯಸಿದೆ. ಅವುಗಳ ವಹಿವಾಟಿನ ಬದಲಿಗೆ ಅದನ್ನು ಸಂಪತ್ತಿನ ಮಾದರಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಅನುಮತಿ ಸಿಗಲಿದೆ.
ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕ್ರಿಪ್ಟೋಕರೆನ್ಸಿಯನ್ನು ಸಂಪೂರ್ಣವಾಗಿ ನಿಷೇಧಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ. ಆದರೆ ಈ-ಮಾದರಿ ವಹಿವಾಟು ನಡೆಸುವಂತೆ ಹೂಡಿಕೆದಾರರನ್ನು ಆಕರ್ಷಿಸುತ್ತಿರುವ ವಿನಿಮಯ ಕೇಂದ್ರಗಳು ಮತ್ತು ವೇದಿಕೆ ಹಾಗೂ ಮಧ್ಯವರ್ತಿಗಳ ಮೇಲೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಿದ್ಧಪಡಿಸಲಾದ ಮಸೂದೆಯನ್ನು ಮುಂದಿನ ಎರಡು ಮೂರು ವಾರಗಳಲ್ಲಿ ಸಂಪುಟ ಪರಿಶೀಲನೆ ನಡೆಸಲಿದೆ.

ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡನೆ:
ನವೆಂಬರ್ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಕೇಂದ್ರ ಚಳಿಗಾಲ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಿದ್ಧಪಡಿಸಿದ ಮಸೂದೆಯು ಚರ್ಚೆಗೆ ಬರುವ ಸಾಧ್ಯತೆಯಿದೆ. ಕ್ರಿಪ್ಟೋಕರೆನ್ಸಿ ವಹಿವಾಟಿನ ಮೇಲೆ ಯಾವ ರೀತಿ ನಿಯಂತ್ರಣವನ್ನು ವಿಧಿಸಬೇಕು. ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯನ್ನು ಹೇಗೆ ಹಿಡಿತವನ್ನು ಹೊಂದಿರಬೇಕು ಎಂಬ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚಿಸುವ ನಿರೀಕ್ಷೆಗಳಿವೆ.
ಸೆಬಿ ನಿಯಂತ್ರಣಕ್ಕೆ ಕ್ರಿಪ್ಟೋಕರೆನ್ಸಿ ಮಾರುಕಟ್ಟೆ:
ಭಾರತದ ಷೇರು ಮಾರುಕಟ್ಟೆ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ನಿಯಂತ್ರಣವನ್ನು ಹೊಂದಿದೆ. ಅದೇ ಸೆಬಿಗೆ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯನ್ನು ನಿಯಂತ್ರಿಸುವ ಅಧಿಕಾರ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ ಇದರ ಬಗ್ಗೆ ಯುವುದೇ ರೀತಿ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕ್ರಿಪ್ಟೋ ಎಂಬುದು ಕರೆನ್ಸಿ ಎನ್ನುವುದಕ್ಕಿಂತ ಅದು ಸಂಪತ್ತು:
ಭಾರತದಲ್ಲಿ ಡಿಜಿಟಲ್ ಮಾದರಿಯ ಕ್ರಿಪ್ಟೋವನ್ನು ಕರೆನ್ಸಿ ಎಂದು ಪರಿಗಣಿಸುವುದಕ್ಕಿಂತ ಅದನ್ನು ಸಂಪತ್ತು ಎಂದು ಗುರುತಿಸಬೇಕು ಎಂದು ಈ ಮಾದರಿ ವಹಿವಾಟು ನಡೆಸುವ ಹೂಡಿಕೆದಾರರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಿಕೊಂಡಿದ್ದಾರೆ. ಮೇ ತಿಂಗಳ ಮಾಹಿತಿ ಪ್ರಕಾರ, ಭಾರತದಲ್ಲಿ ಡಿಜಿಟಲ್ ಕರೆನ್ಸಿ ಮಾರುಕಟ್ಟೆಯಲ್ಲಿ ಒಟ್ಟಾರೆ ಸಂಪತ್ತು 49,000 ಕೋಟಿ ರೂಪಾಯಿ ಇದೆ. 2020ರ ಏಪ್ರಿಲ್ ತಿಂಗಳಿನಲ್ಲಿ 6854 ಕೋಟಿ ಇತ್ತು ಎಂದು ಬ್ಲ್ಯಾಕ್ ಚೈನ್ ಡೇಟಾ ವೇದಿಕೆ ಚೈನಾಲಿಸಿಸ್ ಹೇಳಿದೆ.
ಕರ್ನಾಟಕದಿಂದ ದೇಶಕ್ಕೆ ವ್ಯಾಪಿಸಿದ ಕ್ರಿಪ್ಟೋಕರೆನ್ಸಿ ಸುದ್ದಿ:
ಕರ್ನಾಟಕದಲ್ಲಿ ಹ್ಯಾಕರ್ ಶ್ರೀಕಿ ಬಂಧನದ ನಂತರದಲ್ಲಿ ಬಿಟ್‌ಕಾಯಿನ್ ಸೇರಿದಂತೆ ಕ್ರಿಪ್ಟೋಕರೆನ್ಸಿಗಳ ಸುದ್ದಿ ಇಡೀ ದೇಶಕ್ಕೆ ವ್ಯಾಪಿಸಿದೆ. ಭಾರತದಾದ್ಯಂತ ಭಾರಿ ಸದ್ದು ಮಾಡಿರುವ ಕ್ರಿಪ್ಟೋಕರೆನ್ಸಿ ಎಲ್ಲ ಮಾದರಿಗಳ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಶನಿವಾರ ಸಭೆ ನಡೆಸಿದ್ದರು. ಅನಿಯಂತ್ರಿತ ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯು ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನೆಗೆ ಹಣ ಒದಗಿಸುವುದರ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿತ್ತು.
ಕ್ರಿಪ್ಟೋಕರೆನ್ಸಿ ಸಂಪೂರ್ಣ ನಿಷೇಧಕ್ಕಿಲ್ಲ ಒಲವು:
ಭಾರತದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಸಂಪೂರ್ಣವಾಗಿ ನಿಷೇಧಿಸುವುದಕ್ಕೆ ಜಯಂತ್ ಸಿನ್ಹಾ ನೇತೃತ್ವದ ಸಂಸದೀಯ ಹಣಕಾಸು ಸ್ಥಾಯಿ ಸಮಿತಿ ಕೂಡಾ ಒಲವು ತೋರಿಸಿಲ್ಲ. ಅದರ ಬದಲಿಗೆ ಮಾರುಕಟ್ಟೆ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯತೆ ಬಗ್ಗೆ ಚರ್ಚಿಸಲಾಗಿತ್ತು. ಅಲ್ಲದೇ ಈ ರೀತಿ ಡಿಜಿಟಲ್ ಕರೆನ್ಸಿ ಜಾರಿಗೆ ಬಂದರೆ ಅದರ ಮೇಲೆ ಯಾವ ರೀತಿ ತೆರಿಗೆ ವಿಧಿಸಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿತ್ತು. ಕ್ರಿಪ್ಟೋ ಕರೆನ್ಸಿಯಿಂದಾಗಿ ದೇಶದ ಆರ್ಥಿಕ ಸ್ಥಿರತೆಗೆ ಧಕ್ಕೆ ಉಂಟಾಗುತ್ತದೆ. ಕಿರು ಹಣಕಾಸು ಸೇವಾ ವಲಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಕಳವಳ ವ್ಯಕ್ತಪಡಿಸಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ



Click it and Unblock the Notifications