ಬೆಂಗಳೂರಿನಂತಹ ಮಹಾನಗರಗಳಲ್ಲಿ ದಿನಕ್ಕೆ ಲಕ್ಷಗಟ್ಟಲೆ ವಾಹನಗಳು ಸಂಚರಿಸುತ್ತವೆ. ಅದರಲ್ಲೂ ಇತ್ತೀಚೆಗೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಲೆನೋವಾಗಿಬಿಟ್ಟಿದೆ. ಒಂದು ಕಿಲೋಮೀಟರ್ ಹೋಗಬೇಕೆಂದರೆ ಬರೋಬ್ಬರಿ 20 ರಿಂದ 30 ನಿಮಿಷ ಕಾಯಬೇಕಾಗಿದೆ. ಟ್ರಾಫಿಕ್ ಪೊಲೀಸರು (Traffic Police) ಈ ಬಗ್ಗೆ ನಿರಂತರ ಕಾರ್ಯಚರಿಸುತ್ತಿದ್ದರೂ, ಟ್ರಾಫಿಕ್ ಸಮಸ್ಯೆ ಮಾತ್ರ ಕಮ್ಮಿಯಾಗುತ್ತಲೇ ಇಲ್ಲ. ಇನ್ನು ದೊಡ್ಡ ದೊಡ್ಡ ಕಾರ್ಯಕ್ರಮಗಳಿದ್ದರೆ ಕೇಳೋದೆ ಬೇಡ, ರಸ್ತೆ ತುಂಬಾ ವಾಹನಗಳೇ ತುಂಬಿರುತ್ತದೆ. ಇದೀಗ ಕಬ್ಬನ್ ಪಾರ್ಕ್‌ನಲ್ಲಿ ಇಂದಿನಿಂದ (ನ.27) ಫ್ಲವರ್ ಶೋ (Cubbon Park Flower Show) ಆರಂಭವಾಗಲಿದೆ. ಈ ಹಿನ್ನೆಲೆ 11 ದಿನಗಳ ಕಾಳ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಹೌದು, ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋ ಇಂದಿನಿಂದ ಅದ್ಧೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಫ್ಲವರ್ ಶೋ ನೋಡಲು ಕಬ್ಬನ್ ಪಾರ್ಕ್‌ಗೆ ಆಗಮಿಸುತ್ತಾರೆ. ಆದರೆ ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ. ಕಬ್ಬನ್ ಪಾರ್ಕ್ ಸುತ್ತಮುತ್ತ ಸಂಚಾರದಲ್ಲಿ ಬದಲಾವಣೆ ತರಲಾಗಿದೆ. ಅಂದರೆ ನವೆಂಬರ್ 27 ರಿಂದ 11 ದಿನಗಳ ಕಾಲ ಕಬ್ಬನ್ ಪಾರ್ಕ್ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.ʼ
ಬದಲಿ ಮಾರ್ಗ ಬಳಸುವಂತೆ ಸೂಚನೆ
ಫ್ಲವರ್ ಶೋ ಹಿನ್ನೆಲೆ ಕಬ್ಬನ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಗಳಿರುತ್ತದೆ. ಈ ಪರಿಣಾಮ ಸಂಚಾರ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಬದಲಿ ಮಾರ್ಗ ಬಳಸುವಂತೆ ಸಂಚಾರಿ ಪೊಲೀಸರು ಸೂಚನೆ ಹೊರಡಿಸಿದ್ದಾರೆ. 11 ದಿನಗಳ ಕಾಲ ನಡೆಯಲಿರುವ ಫ್ಲವರ್ ಶೋ ಸಂದರ್ಭದಲ್ಲಿ, ರಿಚ್‌ಮಂಡ್ ಸರ್ಕಲ್ ಶಿವಾಜಿ ನಗರ, ಕೆಆರ್ ಸರ್ಕಲ್, ಕಾರ್ಪೊರೇಷನ್ ಕಡೆಗೆ ಹೋಗು ವಾಹನಸವಾರರು ಪರ್ಯಾಯ ಮಾರ್ಗ ಬಳಸಲು ಸಲಹೆ ನೀಡಲಾಗಿದೆ.
ಯಾವೆಲ್ಲಾ ರಸ್ತೆಗಳು ಬಂದ್?
ಇನ್ನು 11 ದಿನಗಳ ಕಾಲ ವಿಠಲ್ ಮಲ್ಯ ರಸ್ತೆ, ಬ್ಯಾಂಡ್ ಸ್ಟ್ಯಾಂಡ್ ಬಾಲಭವನದ ಮುಂಭಾಗದ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಕಬ್ಬನ್ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದುದ, ಈ ಪರಿಣಾಮ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಉತ್ತಮ ಎನ್ನಲಾಗಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರವೇಶ ಉಚಿತ!
ಪ್ರತೀ ವರ್ಷ ಆಗಸ್ಟ್‌ನಲ್ಲಿ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಕೈಗೊಳ್ಳಲಾಗುತ್ತದೆ. ಅದೇ ಮಾದರಿಯಲ್ಲಿ ಇದೀಗ ಕಬ್ಬನ್ ಪಾರ್ಕ್‌ನಲ್ಲೂ ಫ್ಲವರ್ ಶೋ ಶುರುವಾಗಿದೆ. ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣ ಹಿನ್ನೆಲೆ ಬರೋಬ್ಬರಿ 10 ವರ್ಷಗಳ ನಂತರ ಇದೀಗ ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋ ನಡೆಯುತ್ತಿದೆ.
ಕಬ್ಬನ್ ಪಾರ್ಕ್‌ನಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಕೈಗೊಳ್ಳಲಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವನ್ನು ನೀಡಲಾಗಿದೆ. ಇನ್ನು ಉಳಿದ ಮಕ್ಕಳಿಗೆ 10 ರೂ. ಟಿಕೆಟ್ ದರ ಮತ್ತು ದೊಡ್ಡವರಿಗೆ 30 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ.


Click it and Unblock the Notifications