ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ತ್ರಿ ತಾವು ಮತ್ತೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿ ಅಥವಾ ಯಾವುದೇ ಹುದ್ದೆಯ ಸ್ವರೂಪದಲ್ಲಿರಲು ತಮಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ(ಎನ್‌ಸಿಎಲ್ಎಟಿ) ಆದೇಶ ನೀಡಿದೆ.
''ಟಾಟಾ ಸಮೂಹದ ಹಿತಾಸಕ್ತಿಗಳಿಗಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನ ವಿರುದ್ಧದ ಅಪಪ್ರಚಾರವನ್ನು ಹೋಗಲಾಡಿಸಲು ನಾನು ಕಾನೂನು ಹೋರಾಟ ಮಾಡಿದೆ. ಈಗ ಎನ್‌ಸಿಎಲ್‌ಟಿ ಆದೇಶದ ಹೊರತಾಗಿಯೂ ನಾನು ಟಾಟಾ ಸನ್ಸ್ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನ ಅಥವಾ ಕಂಪನಿಯ ಯಾವುದೇ ನಿರ್ದೇಶಕ ಸ್ಥಾನವನ್ನು ವಹಿಸಿಕೊಳ್ಳುವುದಿಲ್ಲ'' ಎಂದು ಸೈರಸ್ ಮಿಸ್ತ್ರಿ ಹೇಳಿದ್ದಾರೆ.

ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಸೈರಸ್ ಮಿಸ್ತ್ರಿಯವರನ್ನು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡುವಂತೆ ಆದೇಶ ನೀಡಿತ್ತು. ಮೂರು ವರ್ಷಗಳ ಹಿಂದೆ 2016ರಲ್ಲಿ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿ ಸೈರಸ್ ಮಿಸ್ತ್ರಿಯನ್ನು ಟಾಟಾ ಗ್ರೂಪ್‌ನ ಆಡಳಿತ ಮಂಡಳಿಯಿಂದ ಹೊರ ಹಾಕಲಾಗಿತ್ತು. ನಂತರ ರತನ್ ಟಾಟಾ ಸಂಸ್ಥೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಮಿಸ್ತ್ರಿ ಕಂಪನಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ ನ್ಯಾಯಮಂಡಳಿ ಮೊರೆ ಹೋಗಿದ್ದರು.
ಸೈರಸ್ ಮಿಸ್ತ್ರಿ ಅವರನ್ನು ಮರುನೇಮಕ ಮಾಡಬೇಕೆಂಬ ಎನ್‌ಸಿಎಲ್ಎಟಿ ಆದೇಶ ರದ್ದುಪಡಿಸಬೇಕೆಂದು ಟಾಟಾ ಸನ್ಸ್‌ನ ಅರ್ಜಿಯು ಈ ವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಆದರೆ ಅದಕ್ಕೂ ಮುಂಚೆಯೇ ಸೈರಸ್ ಮಿಸ್ತ್ರಿ ಈ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications