ಬೆಂಗಳೂರು, ಸೆಪ್ಟೆಂಬರ್ 23: ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ ದಸರಾ ಗಿಫ್ಟ್ ಘೋಷಿಸಿದೆ. ಈ ಮೂಲಕ 110 ಹಳ್ಳಿಗಳ ಜನರ ಕನಸು ನನಸಿಗೆ ದಿನಾಂಕ ನಿಗದಿಯಾಗಿದೆ. ಕಳೆದ 17 ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದ 110 ಹಳ್ಳಿಗಳ ಜನರಿಗೆ ಕಾವೇರಿ ಕುಡಿಯುವ ನೀರಿನ ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ ಇನ್ನೇನು ಕೆಲ ದಿನಗಳಲ್ಲೇ ನಡೆಯಲಿದ್ದು, ಈ ಮೂಲಕ 50 ಲಕ್ಷ ಜನರಿಗೆ ನೀರು ಒದಗಿಸುವ ದೇಶದ ದೊಡ್ಡ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಇದರಿಂದ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಮತ್ತಷ್ಟು ಉಚ್ಚ್ರಯ ಸ್ಥಿತಿ ತಲುಪಲು ಸಹಕಾರಿಯಾಗಿದೆ. ಜೊತೆಗೆ ಉದ್ಯಮ, ಹೂಡಿಕೆದಾರರಿಗೂ ಇದರಿಂದ ಸಾಕಷ್ಟು ಅನುಕೂಲವಾಗಲಿದೆ.
ಈ ಯೋಜನೆ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಪಿತೃ ಪಕ್ಷದ ನಂತರ ವಿಜಯ ದಶಮಿ ವೇಳೆಗೆ ನೆರವೇರಿಸುವ ಆಲೋಚನೆಯಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

ರಾಮನಗರ ಜಿಲ್ಲೆ ಹಾರೋಹಳ್ಳಿಯ ಕಾವೇರಿ ನೀರು ಪಂಪಿಂಗ್ ಸ್ಟೇಷನ್ ಬಳಿ ಭೇಟಿ ನೀಡಿ ಬಳಿಕ ಮಂಡ್ಯ ಜಿಲ್ಲೆ ಮಳವಳ್ಳಿಯ ತೊರೆಕಾಡನಹಳ್ಳಿಯ ನೀರು ಶುದ್ಧೀಕರಣ ಮತ್ತು ಪಂಪಿಂಗ್ ಸ್ಟೇಷನ್ ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ಸೋಮವಾರ ಮಾತನಾಡಿ "ಬೆಂಗಳೂರು ಜನತೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದನ್ನು ತಪ್ಪಿಸಿ ಮನೆ, ಮನೆಗೂ ಕುಡಿಯುವ ನೀರು ಹರಿಸುವುದು ನಮ್ಮ ಸಂಕಲ್ಪ. ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳಿಗೆ ಕಾವೇರಿ ನೀರು ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರ ಈ ಯೋಜನೆ ಆರಂಭಿಸಿತ್ತು. ಈ ಯೋಜನೆ ಜಾರಿಗೆ ಇದ್ದ ತೊಂದರೆಗಳನ್ನು ನಾವು ಹಂತ, ಹಂತವಾಗಿ ನಿವಾರಿಸಿದ್ದೇವೆ. ಅನೇಕ ಕಡೆಗಳಲ್ಲಿ ಹಲವು ಸಮಸ್ಯೆಗಳು ಕಂಡುಬಂದಿದ್ದವು. ಮುಂದೆ ಯಾವುದೇ ತೊಂದರೆ ಆಗಬಾರದು ಎಂದು ಈ ಯೋಜನೆ ಉದ್ಘಾಟಿಸುವ ಮುನ್ನ ಎಲ್ಲವೂ ಸರಿಯಾಗಿದೆಯೇ ಎಂದು ನಾನೇ ಕಣ್ಣಾರೆ ಕಂಡು ಪರಿಶೀಲಿಸಬೇಕು ಎಂದು ಭೇಟಿ ನೀಡಿದ್ದೇನೆ" ಎಂದು ತಮ್ಮ ಭೇಟಿಯ ಕುರಿತು ವಿವರಿಸಿದರು.
ಮುಂದಿನ 10 ವರ್ಷ ಬೆಂಗಳೂರಿಗೆ ಕುಡಿಯುವ ನೀರಿನ ತೊಂದರೆ ಇಲ್ಲ
"ಈಗಾಗಲೇ 1,400 ಎಂಎಲ್ ಡಿ ನೀರನ್ನು ನೀಡಲಾಗುತ್ತಿದ್ದು, ಇದಕ್ಕೆ 775 ಎಂಎಲ್ ಡಿಯಷ್ಟು ನೀರು ಸೇರಿಸಲಾಗುವುದು. ಕನಿಷ್ಠ 10 ವರ್ಷ ಬೆಂಗಳೂರಿನಲ್ಲಿ ಕುಡಿಯಲು ನೀರಿನ ತೊಂದರೆ ಆಗಬಾರದು ಎಂದು ಯೋಜನೆ ರೂಪಿಸಲಾಗಿದೆ ' ಕೆಂಗೇರಿ ಸೇರಿದಂತೆ ಒಂದಷ್ಟು ಕಡೆ ಕಾಮಗಾರಿ ನಡೆಸಲು ಜಾಗಗಳ ಒತ್ತುವರಿ ತೊಂದರೆ, ಅರಣ್ಯ ಭೂಮಿಗಳ ತೊಂದರೆ ಸೇರಿದಂತೆ ಎಲ್ಲವನ್ನೂ ನಾವುಗಳೇ ಖುದ್ದಾಗಿ ಮಾತನಾಡಿ ಬಗೆಹರಿಸಿದ್ದೇವೆ. ಅವರಿಗೆ ಪರಿಹಾರವಾಗಿ ಟಿಡಿಆರ್ ಕೊಟ್ಟಿದ್ದೇವೆ" ಎಂದು ಮಾಹಿತಿ ನೀಡಿದರು.

5 ಸಾವಿರ ಕೋಟಿ ಮೊತ್ತದ ಯೋಜನೆ
5 ನೇ ಹಂತ ಅನುಷ್ಠಾನದ ಬಳಿಕ 4 ಲಕ್ಷ ಹೊಸ ನೀರಿನ ಸಂಪರ್ಕ ನೀಡಲಾಗುತ್ತದೆ. 5 ಸಾವಿರ ಕೋಟಿ ಮೊತ್ತದಲ್ಲಿ 50 ಲಕ್ಷ ಜನರಿಗೆ ನೀರು ಒದಗಿಸುವ ದೇಶದ ದೊಡ್ಡ ಯೋಜನೆ. ಈ ಕಾರ್ಯಕ್ರಮದ ಅನುಷ್ಠಾನಕ್ಕೆ ಜಪಾನ್ ಇಂಟರ್ ನ್ಯಾಷನಲ್ ಕೋ- ಆಪರೇಷನ್ ಏಜನ್ಸಿ (ಜೈಕಾ) ಸಂಸ್ಥೆ ಜೊತೆ ಸಾಲದ ಒಪ್ಪಂದ ಮಾಡಿಕೊಂಡಿದ್ದೇವೆ" ಎಂದರು.
"ಈ ಐದನೇ ಹಂತ ಕೇವಲ ಒಂದು ಕ್ಷೇತ್ರಕ್ಕೆ ಸೇರಿದ್ದಲ್ಲ, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಕೆಂಗೇರಿ, ಆನೇಕಲ್, ಯಶವಂತಪುರ, ಬ್ಯಾಟರಾಯನಪುರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಿಗೆ ನೀರು ಒದಗಿಸಲಾಗುವುದು. ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ನಿವಾರಿಸಲೆಂದೇ ಈ ಬೃಹತ್ ಯೋಜನೆ ಅನುಷ್ಠಾನಕ್ಕೆ ತರುತ್ತಿದ್ದೇವೆ" ಎಂದರು.
ಭಾರತದಲ್ಲೇ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆ
1 ಲಕ್ಷ 45 ಸಾವಿರ ಮೆಗಾ ಟನ್ ಸ್ಟೀಲ್ ಪೈಪ್ ಗಳನ್ನು ಈ ಯೋಜನೆಯಲ್ಲಿ ಬಳಕೆ ಮಾಡಲಾಗಿದೆ. 110 ಕಿ. ಮೀ ಉದ್ದ ಪೈಪ್ ಲೈನ್ ಅಳವಡಿಸಲಾಗಿದೆ. ಕನಕಪುರ ಬಳಿ ತಿರುವು ಮಾಡಲು ತೊಂದರೆ ಆಗಿತ್ತು. ಅದನ್ನು ಬಗೆಹರಿಸಲಾಗಿದೆ. ಇದೊಂದೇ ಹಂತದಲ್ಲಿ 775 ಎಂಎಲ್ ಡಿ ನೀರನ್ನು ಹರಿಸಲಾಗುತ್ತಿದೆ. ಭಾರತದಲ್ಲೇ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆ.
"ಕುಡಿಯುವ ನೀರಿನ ಸರಬರಾಜು ವಿಚಾರದಲ್ಲಿ ನಾವು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದೇವೆ. ಕಳೆದ ಬೇಸಿಗೆ ವೇಳೆ 7 ಸಾವಿರ ಬೋರ್ ವೆಲ್ ಗಳು ಬತ್ತಿ ಹೋಗಿದ್ದರೂ ಅಧಿಕಾರಿಗಳು, ನೌಕರರು ಜನರ ಬದುಕಿಗೆ ತೊಂದರೆ ಆಗದಂತೆ ನೀರನ್ನು ನೀಡಿದ್ದಾರೆ. ಅವರ ಕೆಲಸಕ್ಕೆ, ಬದ್ಧತೆಗೆ ಧನ್ಯವಾದಗಳು. ಈ ಯೋಜನೆ ಆಧುನಿಕ ಇಂಜಿನಿಯರಿಂಗ್ ನ ಅದ್ಬುತ ಎಂದು ಕರೆಯುತ್ತಾರೆ. ಈ ಯೋಜನೆ ಮೂಲಕ ಬೆಂಗಳೂರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಗುರಿ ಹಾಗೂ ಉದ್ದೇಶ" ಎಂದು ಹೇಳಿದರು.
More From GoodReturns

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications