For Quick Alerts
ALLOW NOTIFICATIONS  
For Daily Alerts

ಮಧ್ಯಪ್ರದೇಶದಲ್ಲಿ ಡೀಸೆಲ್ 100 ರು; ಪೆಟ್ರೋಲ್ 100 ರು ಕ್ಲಬ್ಬಿಗೆ ಸಿಕ್ಕಿಂ

|

ಜುಲೈ 04ರ ಭಾನುವಾರದಂದು ಪೆಟ್ರೋಲ್, ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ದೇಶದ ಮೆಟ್ರೋ ನಗರಗಳ ಪೈಕಿ ದೆಹಲಿ ಹಾಗೂ ಕೋಲ್ಕತಾ ಮಾತ್ರ 100 ರು ಪ್ರತಿ ಲೀಟರ್ ಕ್ಲಬ್ಬಿಗೆ ಸೇರ್ಪಡೆಯಾಗಿಲ್ಲ. ಜುಲೈ 04ರಂದು ಪೆಟ್ರೋಲ್ 35 ಪೈಸೆ ಹಾಗೂ ಡೀಸೆಲ್ ಬೆಲೆ 18 ಪೈಸೆ ಪ್ರತಿ ಲೀಟರ್ ಏರಿಕೆಯಾಗಿದೆ. ಎರಡು ತಿಂಗಳಲ್ಲಿ ಪೆಟ್ರೋಲ್ 34 ಬಾರಿ ಹಾಗೂ ಡೀಸೆಲ್ 33 ಬಾರಿ ಏರಿಕೆ ಕಂಡಿವೆ. ಬೆಲೆ ಸುಮಾರು 9.11 ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 8.63 ರು ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ.

 

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 75.70 ಯುಎಸ್ ಡಾಲರ್ (1 USD=74.70ರು) ಪ್ರತಿ ಬ್ಯಾರೆಲ್‌ನಷ್ಟಿದೆ.

ಜುಲೈ 04ರಂದು ಹಲವೆಡೆ 100 ರು ಗಡಿ ದಾಟಿದ ಡೀಸೆಲ್

ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಲಡಾಕ್, ಒಡಿಶಾ, ಮಣಿಪುರ, ಕೇರಳ, ಬಿಹಾರ, ಪಂಜಾಬ್ ಹಾಗೂ ಮಹಾರಾಷ್ಟ್ರದ ಹಲವು ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ಸಿಕ್ಕಿಂ ಹೊಸದಾಗಿ 100 ರು ಕ್ಲಬ್ ಸೇರಿದ್ದು, ಗ್ಯಾಂಗ್ ಟಕ್ ನಲ್ಲಿ ಪೆಟ್ರೋಲ್ 100 .15ರು ಆಗಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 110.74ರು ನಷ್ಟಿದೆ, ಡೀಸೆಲ್ ಬೆಲೆ 102.57ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ತಿಳಿಯಲು ಕ್ಲಿಕ್ ಮಾಡಿ

English summary

Diesel crosses ₹100 in M.P.; Sikkim latest State to see ₹100 a litre petrol

Diesel price on July 4 crossed ₹100 a litre mark in some places in Madhya Pradesh, while Sikkim became the latest State to see ₹100 per litre petrol price after yet another hike in fuel rates.
Story first published: Sunday, July 4, 2021, 16:55 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X