ಬೆಂಗಳೂರು, ಸೆಪ್ಟೆಂಬರ್ 4: ಭಾರತದ ಟೆಕ್ ಹಬ್ ಎಂದೇ ಕರೆಯಲ್ಪಡುವ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ನೂರಕ್ಕೂ ಹೆಚ್ಚು ಸ್ಥಳಗಳಿಗೆ ತಡೆ ರಹಿತ ಸಂಪರ್ಕದ ಅಥವಾ ನೇರ ವಿಮಾನ ಸೇವೆ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ.
" ಬೆಂಗಳೂರು ವಿಮಾನ ನಿಲ್ದಾಣದಿಂದ ನೂರಾರು ಸ್ಥಳಗಳಿಗೆ ತಡೆರಹಿತ ವಿಮಾನಯಾನ ಸಂಪರ್ಕ ಕಲ್ಪಿಸಲಾಗಿದೆ. ಈ ಮೂಲಕ ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ನೈಸರ್ಗಿಕ ಹೆಬ್ಬಾಗಿಲು ಆಗುವ ನಮ್ಮ ಪ್ರಯಾಣದಲ್ಲಿ 100 ಗಮ್ಯಸ್ಥಾನಗಳನ್ನು ತಲುಪುವುದು ಗಮನಾರ್ಹ ಸಾಧನೆಯಾಗಿದೆ" ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (BIAL) ನ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಹೇಳಿದ್ದಾರೆ.

BIALಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಮಾಡುತ್ತದೆ. ತಡೆ ರಹಿತ ಸಂಪರ್ಕದ100 ಪ್ರದೇಶಗಳಲ್ಲಿ 72 ದೇಶೀಯ ಮತ್ತು 28 ಅಂತರರಾಷ್ಟ್ರೀಯ ಸ್ಥಳಗಳಾಗಿವೆ. ಈ ಪೈಕಿ ಇಂಡಿಗೋದ ಜಬಲ್ಪುರಕ್ಕೆ ವಿಮಾನ ನಿಲ್ದಾಣವು ಇತ್ತೀಚಿನ ಸೇರ್ಪಡೆಯಾಗಿದೆ.
"ತನ್ನ ಮೊದಲ ವರ್ಷದಲ್ಲಿ 9 ಮಿಲಿಯನ್ ಪ್ರಯಾಣಿಕರೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ, ವಿಮಾನ ನಿಲ್ದಾಣವು ಪ್ರಸ್ತುತ ಎರಡು ರನ್ವೇಗಳು ಮತ್ತು ಟರ್ಮಿನಲ್ಗಳನ್ನು ಹೊಂದುವ ಮೂಲಕ ಮತ್ತಷ್ಟು ಅಭಿವೃದ್ದಿಗೊಂಡಿದೆ. ವಾರ್ಷಿಕವಾಗಿ 40 ಮಿಲಿಯನ್ ಪ್ರಯಾಣಿಕರು ಮತ್ತು 465,000 ಮೆಟ್ರಿಕ್ ಟನ್ ಸರಕುಗಳನ್ನು ನಿರ್ವಹಿಸುತ್ತದೆ. ಮುಂದಿನ ದಶಕದಲ್ಲಿ ಬಿಐಎಎಲ್ 85 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ನಿರೀಕ್ಷೆಯಿದೆ. ಇದಲ್ಲದೇ ಬಿಐಎಎಲ್ ವಾರ್ಷಿಕವಾಗಿ ಒಂದು ಮಿಲಿಯನ್ ಮೆಟ್ರಿಕ್ ಟನ್ ಗಳಷ್ಟು ಸರಕುಗಳನ್ನು ನಿರ್ವಹಿಸುತ್ತದೆ" ಎಂದು ರಘುನಾಥ್ ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2008ರ ಮೇ 24ರಂದು ಬೆಂಗಳೂರಿನ ಕೇಂದ್ರ ಸ್ಥಳದಿಂದ ಸುಮಾರು 40 ಕಿಮೀ ದೂರದಲ್ಲಿರುವ ದೇವನಹಳ್ಳಿಯಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. 2023ರ ಡಿಸೆಂಬರ್ 1ರಂದು ಇದು ದೆಹಲಿ ಮತ್ತು ಮುಂಬೈ ನಂತರ 300 ಮಿಲಿಯನ್ ಪ್ರಯಾಣಿಕರನ್ನು ದಾಟಿ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಯಿತು.
ಕೆನಡಾದ ಬಿಲಿಯನೇರ್ ಪ್ರೇಮ್ ವಾತ್ಸಾ ಅವರ ಫೇರ್ಫ್ಯಾಕ್ಸ್ ಗ್ರೂಪ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ನಿರ್ವಹಿಸುವ ಬಿಐಎಎಲ್ನಲ್ಲಿ ಶೇ. 64ರಷ್ಟು ಪಾಲನ್ನು ಹೊಂದಿದೆ. ಸೀಮೆನ್ಸ್ ಪ್ರಾಜೆಕ್ಟ್ ವೆಂಚರ್ಸ್ ಶೇ. 10ರಷ್ಟು ಷೇರನ್ನು ಹೊಂದಿದ್ದು, ಉಳಿದ ಶೇ. 26ರಷ್ಟು ಷೇರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿ. (ಶೇ. 13) ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಶೇ. 13) ಹೊಂದಿದೆ.
ಇನ್ನೊಂದೆಡೆ ಕರ್ನಾಟಕ ಸರ್ಕಾರವೂ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭೂಮಿ ಹುಡುಕಾಟ ಪ್ರಾರಂಭಿಸಿದೆ. ಇದನ್ನು ತುಮಕೂರು ರಸ್ತೆಯಲ್ಲಿ ನಿರ್ಮಿಸುವ ಸಾಧ್ಯತೆ ಇದೆ.ಮೂಲಗಳ ಪ್ರಕಾರ, ಬಿಐಎಎಲ್ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೂ ಉತ್ಸುಕವಾಗಿದೆ.
ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಭೂಮಿ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆರು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. 2035ರ ವೇಳೆಗೆ ಹೊಸ ವಿಮಾನ ನಿಲ್ದಾಣ ಕಾರ್ಯಾರಂಭ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದ್ದು ಅದಕ್ಕಾಗಿ ಸಿದ್ಧತೆ ನಡೆಸತೊಡಗಿದೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಚಿನ್ನದ ಬೆಲೆ ಇಳಿಕೆ: ಖರೀದಿಗೆ ಇದೇ ಸುವರ್ಣಾವಕಾಶವೇ?



Click it and Unblock the Notifications