ಗ್ರಾಮೀಣ ಪತ್ರಕರ್ತರು ಉಚಿತ ಬಸ್ ಪಾಸ್ ಪಡೆಯಲು ಕಠಿಣ ನಿಯಮಗಳಿದ್ದುವು. ಆದರೆ, ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳದಲ್ಲಿ ಕಠಿಣ ನಿಯಮಗಳನ್ನು ಸರಳಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ನಿಯಮ ಸರಳಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ಹೌದು, ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ,ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.
ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.
ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಬಜೆಟ್‌ನಲ್ಲಿ ಆರೋಗ್ಯ ವಿಮೆ ಘೋಷಣೆ ಸಾಧ್ಯತೆ
ಪ್ರಸ್ತುತ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ವಿಮೆ ನೀಡಲಾಗುತ್ತಿದೆ. ಈ ಮೂಲಕ ಸರ್ಕಾರಿ ನೌಕರರ ಆರೋಗ್ಯಕ್ಕೆ ಒತ್ತು ನೀಡಲಾಗಿದೆ. ಒಂದು ವೇಳೆ ಆರೋಗ್ಯ ಸಮಸ್ಯೆ ಎದುರಾದಾಗ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಅದರಂತೆಯೇ ಪತ್ರಕರ್ತರ ಕುಟುಂಬಕ್ಕೂ ಆರೋಗ್ಯ ವಿಮೆ ನೀಡಬೇಖು ಎಂದು ಸಿಎಂ ಸಿದ್ದರಾಮ್ಯ ಮುಂದೆ ಹಕ್ಕೊತ್ತಾಯ ಮಂಡಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಇದನ್ನು ಘೋಷಿಸುವ ಸಾಧ್ಯತೆಯಿದೆ.
ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಸಹ ಬದಲಾಗುತ್ತವೆ. ಆದರೆ ವಸ್ತು ಸ್ಥಿತಿ ಜೊತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ದಿನಮಾನಗಳಿಗೆ ಅಗತ್ಯ. ಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಅಭಿಪ್ರಾಯ ಪಟ್ಟರು.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications