ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ ಇದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಜಿಲ್ಲೆಗೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

1953ರ ಗೃಹ ಸಚಿವಾಲಯದ ಅಧಿಸೂಚನೆಯ ಇದರ ಪ್ರಕಾರ, ಗ್ರಾಮಗಳು, ಪಟ್ಟಣಗಳು ಅಥವಾ ರೈಲ್ವೆ ನಿಲ್ದಾಣಗಳ ಹೆಸರು ಬದಲಾಯಿಸಲು ರಾಜ್ಯ ಸರ್ಕಾರವು ಮೊದಲು ಗೃಹ ಸಚಿವಾಲಯಕ್ಕೆ (Union Ministry of Home Affairs - MHA) ಪ್ರಸ್ತಾವನೆ ಸಲ್ಲಿಸಬೇಕು. ಈ ಪ್ರಸ್ತಾವನೆಯನ್ನು ಮೌಲ್ಯಮಾಪನ ಮಾಡಿದ ಬಳಿಕ, ಕೇಂದ್ರ ಸರ್ಕಾರ (MHA) 'ನಿರಾಕ್ಷೇಪಣಾ ಪ್ರಮಾಣಪತ್ರ' (No Objection Certificate - NOC) ನೀಡಬಹುದು. ಈ ನಂತರ ರಾಜ್ಯ ಸರ್ಕಾರ ಅಧಿಕೃತವಾಗಿ ಹೆಸರು ಬದಲಾವಣೆ ಕುರಿತ ರಾಜ್ಯ ಗಜೆಟ್ ಅಧಿಸೂಚನೆ ಹೊರಡಿಸಬಹುದು.
ನಗರಗಳು, ಗ್ರಾಮಗಳು ಮತ್ತು ಜಿಲ್ಲೆಗಳ ಹೆಸರು ಬದಲಾಯಿಸುವ ಅಧಿಕಾರ ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳಿಗೇ ಸೇರಿದ್ದು, ಅದು ರಾಜ್ಯದ ಆಡಳಿತಾತ್ಮಕ ಚಟುವಟಿಕೆಗಳ ಭಾಗವಾಗಿದೆ. ಇನ್ನೂ ಕೆಲವು ಹೆಸರು ಬದಲಾವಣೆಗಳು (ಹೆಚ್ಚು ಪ್ರಭಾವ ಬೀರಬಹುದಾದವು ಉದಾ. ರಾಷ್ಟ್ರೀಯ ರೈಲ್ವೆ ನಿಲ್ದಾಣಗಳು ಅಥವಾ ಪೋಸ್ಟ್ ಆಫೀಸ್) ಕೇಂದ್ರದ ಅನುವಮತಿಯನ್ನು ಅಗತ್ಯವಿದೆ.
ಒಂದು ಜಿಲ್ಲೆಯ ಹೆಸರು ಬದಲಾಯಿಸಲ ಏನೆಲ್ಲಾ ಪ್ರಕ್ರಿಯೆ ಇರುತ್ತೆ..?
- ಮೊದಲು ರಾಜ್ಯ ಸರ್ಕಾರವು ಪ್ರಸ್ತಾವನೆ ತಯಾರಿಸುತ್ತದೆ
- ನಂತರ MHA ಗೆ ಕಳುಹಿಸಲಾಗುತ್ತದೆ.
- ಅಗತ್ಯವಿದ್ದರೆ MHA ಇತಿಹಾಸ, ಭಾಷಾ ಹಿನ್ನಲೆ, ಸಾರ್ವಜನಿಕ ಅಭಿಪ್ರಾಯ ಮೊದಲಾದ ಅಂಶಗಳನ್ನು ಪರಿಶೀಲಿಸಿ ನಿರಾಕ್ಷೇಪಣಾ ಪ್ರಮಾಣಪತ್ರ ನೀಡುತ್ತದೆ. ನಂತರ ರಾಜ್ಯ ಸರ್ಕಾರ ಹೆಸರು ಬದಲಾವಣೆ ಕುರಿತ ಅಧಿಸೂಚನೆ ಪ್ರಕಟಿಸುತ್ತದೆ.
ನಾಡಿನಲ್ಲಿ ಮಳೆ ಹೆಚ್ಚಾಗಬೇಕು ಎಂದುಕೊಳ್ಳುತ್ತೇನೆ. ಅದರಿಂದ ಬೆಳೆ ಉತ್ತಮವಾಗಿ ನಾಡು ಸುಭಿಕ್ಷವಾಗಿರುತ್ತದೆ. ಆದರೆ, ಬೆಂಗಳೂರಿನಲ್ಲಿ ನಿರಂತರ ಮಳೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ನಮ್ಮ ಜವಾಬ್ದಾರಿ. ಹೀಗಾಗಿ ಮೂಲಸೌಕರ್ಯಗಳಲ್ಲಿನ ಬಹುಕಾಲದ ನ್ಯೂನ್ಯತೆಗಳನ್ನು ಸರಿಪಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇತ್ತೀಚಿಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ, ಅಗತ್ಯ ಕ್ರಮಗಳಿಗೆ ಸೂಚಿಸಿದಂತೆ ಅಧಿಕಾರಿಗಳು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ. ಜನರಿಗೆ ಆಕ್ರೋಶ ಇದೆ ನಿಜ. ಆದರೆ, ಮಳೆ ಪರಿಸ್ಥಿತಿ ನಿಭಾಯಿಸಲು ಶಾಶ್ವತ ಪರಿಹಾರ ನಮ್ಮ ಆದ್ಯತೆಯಾಗಿದೆ.ಇದಿ
2,000 ಕೋಟಿಯಲ್ಲಿ ರಾಜಕಾಲುವೆಗಳ ಸಮಸ್ಯೆಗೆ ಪರಿಹಾರ
2,000 ಕೋಟಿಯಲ್ಲಿ ಇಡೀ ಬೆಂಗಳೂರಿನ ರಾಜಕಾಲುವೆಗಳ ಸಮಸ್ಯೆಗಳನ್ನು ಒಂದೇ ಸಾರಿ ಪೂರ್ಣಗೊಳಿಸಬೇಕೆಂದುಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ. ಮಳೆ ಬಾಧಿತ ಪ್ರದೇಶಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ಟೌನ್ ಪ್ಲಾನಿಂಗ್ ನಲ್ಲಿ ಬದಲಾವಣೆ ತರುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮಳೆ ನೀರು ನುಗ್ಗದಿದ್ದರೂ, ಕೆಲವೆಡೆ ನೆಲಮಹಡಿಗಳಲ್ಲಿ ಅಂತರ್ಜಲ ಬರುತ್ತಿದೆ. ಇದರಿಂದ ವಿದ್ಯುತ್ ಶಾರ್ಟ್ ಸರ್ಕೀಟ್‌ಗಳಾಗುತ್ತಿದೆ. ಪ್ರಾಣ ಹಾನಿಗಳಾಗಿದೆ ಎಂದು ಹೇಳಿದ್ದಾರೆ.
ಹೀಗಾಗಿ, ಹೊಸ ಕಟ್ಟಡಗಳಲ್ಲಿ ಈ ನೆಲಮಹಡಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕವಾಗಿ ಸಮಾಲೋಚಿಸಿ, ತೀರ್ಮಾನ ಕೈಗೊಳ್ಳುತ್ತಿದ್ದೇವೆ. ಪರಿಹಾರ ಕ್ರಮಗಳು ಸದ್ಯಕ್ಕೆ ಸಮರೋಪಾದಿಯಲ್ಲಿದೆ. ಜನ ನೆಮ್ಮದಿಯಿಂದ ಬದುಕುವ, ಸುಸ್ಥಿರ ಬೆಂಗಳೂರು ನಿರ್ಮಾಣ ನಮ್ಮ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಡಿ.ಎ ಶಿವಕುಮಾರ್ ಹೇಳಿದ್ದಾರೆ.


Click it and Unblock the Notifications