ಬೆಂಗಳೂರಿನ ಎರಡನೇ ಏರ್‌ಪೋರ್ಟ್ (Bengaluru 2nd Airport) ಎಲ್ಲಿ ನಿರ್ಮಾಣವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಉದ್ಭವಿಸಿದೆ. ಈಗಾಗಲೇ ಸರ್ಕಾರ, ಸಂಬಂಧಪಟ್ಟ ಅಧಿಕಾರಿಗಳು ಎರಡನೇ ಏರ್‌ಪೋರ್ಟ್‌ಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಮಧ್ಯೆ 2ನೇ ಏರ್‌ಪೋರ್ಟ್‌ಗಾಗಿ ಮೂರು ಸ್ಥಳಗಳನ್ನು ಗುರುತಿಸಿದ್ದು, ಸರ್ಕಾರ ಯಾವುದಕ್ಕೆ ಅನುಮೋದನೆ ನೀಡುತ್ತದೆ ಎಂಬುದು ಕಾದುನೋಡಬೇಕಿದೆ. ಈ ಮಧ್ಯೆ ಎರಡನೇ ಏರ್‌ಪೋರ್ಟ್ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶುವಕುಮಾರ್ (DK Shivakumar) ಅವರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.

ಈಗಾಗಲೇ ಬೆಂಗಳೂರು ಟೆಕ್ ಸಮ್ಮಿಟ್ ಆರಂಭವಾಗಿದೆ. ನವೆಂಬರ್ 18 ರಿಂದ 20 ರವರೆಗೆ ನಡೆಯಲಿರುವ ಈ ಟೆಕ್ ಶೃಂಗಸಭೆಯಲ್ಲಿ ಹಲವಾರು ಟೆಕ್ ದಿಗ್ಗಜರು, ಉದ್ಯಮಿಗಳು ಆಗಮಿಸಲಿದ್ದಾರೆ. ನಿನ್ನೆ ಈ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಕೆಶಿ, ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಾಗುತ್ತೆ ಎಂಬುದರ ಸಂಭವನೀಯ ಸ್ಥಳದ ಬಗ್ಗೆ ರಿವೀಲ್ ಮಾಡಿದ್ದಾರೆ.
ಎಲ್ಲಾಗುತ್ತೆ 2ನೇ ಏರ್‌ಪೋರ್ಟ್?
ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿದೆ. ಈ ಮಧ್ಯೆ ಮಂಗಳವಾರ ಟೆಕ್ ಸಮ್ಮಿಟ್‌ನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಎರಡನೇ ವಿಮಾನ ನಿರ್ಮಾಣ ಆಗಬಹುದು. ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಸರ್ಕಾರ ಬರಲಿದೆ ಎಂದು ಹೇಳಿದ್ದಾರೆ. ಉತ್ತಮ ಸೇವೆ ಮತ್ತು ವಿಸ್ತಾರವಾದ ಜಾಗದ ಉದ್ದೇಶದಿಂದ ಈ ಸ್ಥಳವನ್ನು ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ನಿರ್ಧಾರದಲ್ಲಿ ವಿಳಂಬ
ಕಳೆದ ತಿಂಗಳಷ್ಟೇ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಹೊಸ ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಈಗಾಗಲೇ ಮೂರು ಸ್ಥಳಗಳನ್ನು ಸರ್ಕಾರಕ್ಕೆ. ವರದಿಯ ಪ್ರಕಾರ, ಮೂರು ಸ್ಥಳಗಳನ್ನು ಪರಿಶೀಲಿಸಲಾಗಿದ್ದರೂ, ಅಂತಿಮ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ.
ಬೆಂಗಳೂರು ಟೆಕ್ ಶೃಂಗಸಭೆ 2025 ರಲ್ಲಿ ಮಾತನಾಡಿದ ಶಿವಕುಮಾರ್, ಸರ್ಕಾರವು ದಕ್ಷಿಣ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಪರಿಗಣಿಸುತ್ತಿದೆ ಎಂದು ಹೇಳಿದರು.
2025 ರ ಮಾರ್ಚ್‌ನಲ್ಲಿ, ಕರ್ನಾಟಕ ಸರ್ಕಾರವು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಫೈನಲ್ ಮಾಡಿತ್ತು. ಆ ಪ್ರಕಾರ, ಕನಕಪುರ ರಸ್ತೆಯ ಬಳಿಯ ಕಗ್ಗಲಿಪುರ ಮತ್ತು ಹಾರೋಹಳ್ಳಿ ಮತ್ತು ಕುಣಿಗಲ್ ರಸ್ತೆಯ ಉತ್ತರ ಭಾಗದಲ್ಲಿರುವ ಒಂದು ಸ್ಥಳವನ್ನು ಅಂತಿಮಗೊಳಿಸಿತ್ತು. ಇದೀಗ 2ನೇ ಏರ್‌ಪೋರ್ಟ್ ಎಲ್ಲಾಗುತ್ತೆ ಎಂಬ ಚಿತ್ತ ಎಲ್ಲರಲ್ಲೂ ನೆಟ್ಟಿದೆ.ಇತ್ತೀಚೆಗಷ್ಟೇ ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಎರಡನೇ ಏರ್‌ಪೋರ್ಟ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದ್ದರು. ಅಂದರೆ ಪ್ರಸ್ತುತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿ.ಮೀ. ಒಳಗೆ 2033 ರವರೆಗೆ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದಿಲ್ಲ. ಅದೇ ಕಾರಣದಿಂದ ಸರ್ಕಾರ ಈಗಲೇ ನಿರ್ಮಾಣದ ಕಾರ್ಯಗಳನ್ನು ಶುರುಮಾಡಿದೆ.
ಎರಡನೇ ಏರ್‌ಪೋರ್ಟ್‌ನ ಪೂರ್ವಭಾವಿ ಕೆಲಸಗಳನ್ನು ಆರಂಭಿಸುವುದರಿಂದ, 2033ರ ವೇಳೆಗೆ ವಿಮಾನ ನಿಲ್ದಾಣವೂ ಸಂಪೂರ್ಣಗೊಳ್ಳಲಿದೆ ಎಂಬುದು ಸರ್ಕಾರದ ಚಿಂತನೆ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಏಕೆಂದರೆ ಯಾವುದೇ ದೊಡ್ಡ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದರೆ ಕಮ್ಮಿ ಅಂದರೂ ಐದರಿಂದ ಆರು ವರ್ಷಗಳು ಬೇಕಾಗುತ್ತದೆ. ಅದಕ್ಕಾಗಿಯೇ ಸರ್ಕಾರ ಪ್ರಿಪ್ಲಾನ್ ಮಾಡುತ್ತಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications