ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹೌದು,ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜೊತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಡಿಸಿಎಮ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು ನಡೆಯುತ್ತಿದೆ ಇದರಿಂದ ದೇಶದಲ್ಲಿ ಹೆಚ್ಚಿನ ಅಭಿವೃದ್ದಿ ಸಾದ್ಯವೆಂದು ಮಾಹಿತಿಯನ್ನು ತಿಳಿಸಿದ್ದಾರೆ.

ರಾಜ್ಯದಲ್ಲಿ ಸೋಲುವ ಮಾತಿಲ್ಲ
ರಾಜ್ಯದಲ್ಲಿ ಹೊಡಿಕೆ ಮಾಡುವವರಿಗೆ ಸೋಲುವ ಮಾತಿಲ್ಲ ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿ
ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು.ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ಗುರಿ ಹೊಂದಿದೆ.
ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್ಎಂಇಗಳು ದೊಡ್ಡ ಶಕ್ತಿ ತುಂಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರಿ ಮಾಡಿದ್ದಾರೆ.
ಸ್ನೇಹ ಸಂಬಂಧ
ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ.ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಇಡಬೇಕಾಗುತ್ತದೆ.
ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ಗುರಿಯನ್ನು ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಭರವಸೆನ್ನು ನೀಡಿದ್ದಾರೆ.
ದೇಶದ ಅಭಿವೃದ್ಧಿಗೆ ಸಹಕಾರ
365 ದಿನಗಳು ಕೂಡ ನಿಮಗಾಗಿ ನಾವು ಹೂಡಿಕೆ ಮಾಡಲು ಅವಕಾಶವಿರುತ್ತದೆ.ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿಕೆ ನೀಡಿದ್ದರೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications