ಸಿಎಂ ಕುರ್ಚಿ (CM Seat) ಯಾರ ಪಾಲಾಗುತ್ತೆ ಎಂಬ ಚರ್ಚೆ ಇಡೀ ದೇಶದಲ್ಲಿ ಚರ್ಚೆಯಾಗುತ್ತಿದೆ. ಕೊಟ್ಟ ಮಾತಿನಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಾ ಎಂದು ಕಾದು ನೋಡಬೇಕಿದೆ. ದಿನ ಹೋದಂತೆ ನವೆಂಬರ್ ಕ್ರಾಂತಿ ಬಗ್ಗೆ ಜನರಲ್ಲೂ ಭಾರೀ ನಿರೀಕ್ಷೆ ಮೂಡಿಸಿದೆ. ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (Siddaramaiah-Dk Shivakumar) ಅವರನ್ನು ಬರಮಾಡಿಕೊಂಡು, ಒಟ್ಟಿಗೆ ಕುಳಿತು ಬ್ರೇಕ್‌ಫಾಸ್ಟ್ ಸವಿದಿದ್ದಾರೆ. ಪವರ್ ಶೇರಿಂಗ್ ಕಿತ್ತಾಟದ ನಡುವೆಯೂ ಉಭಯ ನಾಯಕರ ಈ ನಡೆ ಭಾರೀ ಅಚ್ಛರಿ ಮೂಡಿಸಿದೆ.

ಬ್ರೇಕ್‌ಫಾಸ್ಟ್ ಬಳಿಕ ಸಿಎಂ ಮತ್ತು ಡಿಸಿಎಂ ವೈಯಕ್ತಿಕವಾಗಿ ಸಭೆ ನಡೆಸಿ ಹಲವು ಚರ್ಚೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಭೆ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳುತ್ತೆ, ಅದನ್ನೇ ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ!
ಬ್ರೇಕ್‌ಫಾಸ್ಟ್ ಮೀಟಿಂಗ್ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿತ್ತು. ಆದ್ರೆ ವೈಯಕ್ತಿಕವಾಗಿ ಉಭಯ ನಾಯಕರು ಮಾತನಾಡಿಕೊಂಡ ನಂತರ, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು "ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ. ಇವತ್ತಿನವರೆಗೂ ನಮ್ಮ ನಡುವೆ ಯಾವುದೇ ರೀತಿಯಲ್ಲೂ ಡಿಫರೆನ್ಸ್‌ಗಳಿಲ್ಲ. ಮುಂದೆಯೂ ಹೀಗೆಯೇ ಮುಂದುವರೆಯುತ್ತೇವೆ" ಎಂದು ಹೇಳಿದ್ದಾರೆ.
ಹೈಕಮಾಂಡ್ ತೀರ್ಮಾನಕ್ಕೆ ಬದ್ಧ!
ಕಾಂಗ್ರೆಸ್ ಹೈಕಮಾಂಡ್, ರಾಜ್ಯದಲ್ಲಾಗುತ್ತಿರುವ ಸಿಎಂ ಬದಲಾವಣೆ ಕುರಿತು ಗೊಂದಲಗಳನ್ನು ಇತ್ಯರ್ಥ ಮಾಡುವಂತೆ ಕರೆ ನೀಡಿದ್ದರು. ಅದೇ ಕಾರಣದಿಂದ ಇಂದು ಸೇರಿದ್ದೇವೆ. ಅಲ್ಲದೇ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಇದು ಮತ್ತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಉಭಯ ನಾಯಕರು ಪುನರುಚ್ಛಿಸಿದ್ದು, ಮುಂದಿನ ಚುನಾವಣೆಯಲ್ಲೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಒಗ್ಗಟ್ಟು ತೋರಿಸಿದ್ದಾರೆ.
ಡಿಕೆ ಶಿವಕುಮಾರ್ ಸ್ಪಷ್ಟನೆ
ಜನರ ಆಶೀರ್ವಾದದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದ ಜನರಿಗೆ ನಮ್ಮ ಮೇಲೆ ತುಂಬಾ ನಂಬಿಕೆ ಇದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಮುಂದಿನ ಚಳಿಗಾಲದ ಅಧಿವೇಶನ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇವೆ. ನಮ್ಮದು ಒಂದೇ ಗುಂಪು, ಅದೇ ಕಾಂಗ್ರೆಸ್ ಹೈಕಮಾಂಡ್ ಗುಂಪು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು, ಸಿಎಂ ಸಿದ್ದರಾಮಯ್ಯ ಅವರು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. 2028ರಲ್ಲೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ಕೆಲಸ ಮಾಡುತ್ತಿದ್ದೇವೆ. ಅದರಕ್ಕಾಗಿ ಒಮ್ಮತದಿಂದ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.
ಅಂತೂ ಬ್ರೇಕ್‌ಫಾಸ್ಟ್ ಮೀಟಿಂಗ್ ನಂತರ ಏನಾಗುತ್ತೆ ಎಂಬ ಪ್ರಶ್ನೆಗೆ ಕೊನೆಗೂ ನಾಯಕರೇ ಉತ್ತರ ನೀಡಿದ್ದಾರೆ. ಈ ಮೂಲಕ ಎರಡೂ ನಾಯಕರು ಅಷ್ಟೇ ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವುದು ಇಲ್ಲಿ ಸ್ಪಷ್ಟವಾಗಿ ತಿಳಿಯುತ್ತದೆ. ಹಾಗಿದ್ರೆ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.


Click it and Unblock the Notifications