ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮಂಗಳವಾರ ಮಧ್ಯರಾತ್ರಿಯಿಂದ ದೇಶೀ ವಿಮಾನ ಹಾರಾಟವನ್ನು ನಿಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದಾದ್ಯಂತ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದ್ದು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇದು ಕೂಡ ಪ್ರಮುಖ ಕ್ರಮ ಎನ್ನಲಾಗುತ್ತಿದೆ.
ಮಂಗಳವಾರ ರಾತ್ರಿ 11.59ರೊಳಗೆ ಎಲ್ಲ ವಿಮಾನ ಯಾನ ಸಂಸ್ಥೆಗಳ ದೇಶೀಯ ವಿಮಾನಗಳು ಅವುಗಳು ತಲುಪಬೇಕಾದ ಸ್ಥಳದಲ್ಲಿ ನಿಲ್ಲಬೇಕು ಎಂದು ವಿಮಾನ ಯಾನ ಸಚಿವಾಲಯದ ವಕ್ತಾರರು ಸೋಮವಾರ ತಿಳಿಸಿದ್ದಾರೆ. ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಅನ್ವಯ ಆಗುವುದಿಲ್ಲ. ಮತ್ತೆ ದೇಶೀಯ ವಿಮಾನಗಳು ಕಾರ್ಯ ನಿರ್ವಹಿಸುವುದು ಎಂದಿನಿಂದ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ಮಾರ್ಚ್ 20ರಿಂದ ಅನ್ವಯ ಆಗುವಂತೆ ಒಂದು ವಾರ ಅಂತರರಾಷ್ಟ್ರೀಯ ವಿಮಾನಗಳನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ಸೋಮವಾರ ಮಧ್ಯಾಹ್ನದ ತನಕ ಲೆಕ್ಕದ ಪ್ರಕಾರ, 415 ಕೊರೊನಾ ಪ್ರಕರಣಗಳು ಹಾಗೂ ಅದರಿಂದ 7 ಸಾವಿನ ಪ್ರಕರಣ ವರದಿಯಾಗಿವೆ. ಇನ್ನು ವಿಮಾನಯಾನ ಕ್ಷೇತ್ರದ ಪುನಶ್ಚೇತನಕ್ಕಾಗಿ 1.6 ಬಿಲಿಯನ್ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಯೋಜನೆ ರೂಪಿಸಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications