ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವ ಸಮಯದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಏರಿಕೆಗೊಂಡಿದೆ. ಈ ಮೂಲಕ ಸತತ ಮೂರನೇ ತಿಂಗಳು ದೇಶೀಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಾಗಿದೆ.
ಇಂದಿನಿಂದ, ಸೆಪ್ಟೆಂಬರ್ 1, 2021 ರಿಂದ, ದೇಶೀಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 884.50 ರೂ. ತಲುಪಿದೆ.
ಕಳೆದ ಎರಡು ತಿಂಗಳು ಕೂಡ ಬೆಲೆ ಏರಿಕೆಯಾಗಿದೆ
ತೈಲ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15 ರಂದು ಎಲ್‌ಪಿಜಿಯ ಬೆಲೆಯನ್ನು ಪರಿಶೀಲಿಸುತ್ತವೆ ಎಂಬುದನ್ನು ಗಮನಿಸಬಹುದು. ಈ ಮೊದಲು, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಆಗಸ್ಟ್ 18, 2021 ರಂದು ಏರಿಸಲಾಗಿತ್ತು. ಅದಕ್ಕೂ ಮೊದಲು ಜುಲೈ 1, 2021 ರಂದು ಬೆಲೆಯನ್ನು ಹೆಚ್ಚಿಸಲಾಗಿತ್ತು.
ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 25.50 ರೂಪಾಯಿ ಮತ್ತು ಆಗಸ್ಟ್‌ನಲ್ಲಿ 14.2 kg ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು.
2021ರ ಆರಂಭದಲ್ಲಿ 694 ರೂಪಾಯಿನಷ್ಟಿದ್ದ ಎಲ್‌ಪಿಜಿ ಬೆಲೆ
ಎಲ್‌ಪಿಜಿ ಬೆಲೆಯನ್ನು ಫೆಬ್ರವರಿ, ಮಾರ್ಚ್‌ನಲ್ಲಿ ಮತ್ತು ನಂತರ ಜುಲೈನಲ್ಲಿ ಹೆಚ್ಚಿಸಲಾಯಿತು. 2021 ರ ಆರಂಭದಲ್ಲಿ, ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ರೂ. 694. ಬೆಲೆಯನ್ನು ಫೆಬ್ರವರಿಯಲ್ಲಿ ಪ್ರತಿ ಸಿಲಿಂಡರ್‌ಗೆ 75 ರೂಪಾಯಿ ಹೆಚ್ಚಾಗಿ 769 ರೂಪಾಯಿ ತಲುಪಿತು. ನಂತರ ಮಾರ್ಚ್‌ನಲ್ಲಿ 50 ರೂಪಾಯಿ ಏರಿಕೆಗೊಂಡು 819 ರೂಪಾಯಿ ತಲುಪಿತು. ಏಪ್ರಿಲ್‌ನಲ್ಲಿ 10 ರೂಪಾಯಿ ಇಳಿಕೆಗೊಂಡು 809 ರೂಪಾಯಿ ತಲುಪಿದೆ.
ಜುಲೈ ಮತ್ತು ಆಗಸ್ಟ್‌ನಲ್ಲಿ ತಲಾ 25 ರೂಪಾಯಿ ಏರಿಕೆಗೊಂಡು 859.50 ರೂಪಾಯಿಗೆ ತಲುಪಿದ ನಂತರ, ಇದೀಗ ಸೆಪ್ಟೆಂಬರ್‌ನಲ್ಲಿ 25 ರೂಪಾಯಿ ಹೆಚ್ಚಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ 884.50 ರೂ ಮುಟ್ಟಿದೆ.
ಯಾವ ನಗರದಲ್ಲಿ ಎಷ್ಟಿದೆ?
ದೇಶದ ಪ್ರಮುಖ ನಗರಗಳಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ:
ದೆಹಲಿ: 884.50
ಕೋಲ್ಕತ್ತಾ: 911.00
ಮುಂಬೈ: 884.5
ಚೆನ್ನೈ: 900.5
ಗುರುಗಾವ್: 893.5
ನೋಯ್ಡಾ: 882.5
ಬೆಂಗಳೂರು:887.5
ಭುವನೇಶ್ವರ: 911.00
ಚಂಡೀಗಡ: 894.00
ಹೈದ್ರಾಬಾದ್: 937.00
ಜೈಪುರ:863.00
ಏಳು ವರ್ಷಗಳಲ್ಲಿ ಎಲ್‌ಪಿಜಿ ಬೆಲೆ ಡಬಲ್ ಆಗಿದೆ!
ದೇಶೀಯ ಗ್ಯಾಸ್ ಸಿಲಿಂಡರ್‌ಗಳಿಗೆ ಸಬ್ಸಿಡಿ ರಹಿತ ಬೆಲೆಗಳು ಕಳೆದ ಹಲವು ವರ್ಷಗಳಿಂದ ಹೆಚ್ಚಾಗುತ್ತಿವೆ. ದೆಹಲಿಯಲ್ಲಿ 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್ LPG ಬೆಲೆಗಳು ಕಳೆದ ಏಳು ವರ್ಷಗಳಲ್ಲಿ ದ್ವಿಗುಣಗೊಂಡಿದೆ. ದೆಹಲಿಯಲ್ಲಿ 2014 ರ ಮಾರ್ಚ್ 1 ರಂದು ಪ್ರತಿ ಸಿಲಿಂಡರ್‌ಗೆ ರೂ 410.50 ಇದ್ದ ಎಲ್‌ಪಿಜಿ ಬೆಲೆಯು, ಈಗ 884.50 ರೂ.ಗಳಷ್ಟು ದುಪ್ಪಟ್ಟಾಗಿದೆ.
ಪೆಟ್ರೋಲ್, ಡೀಸೆಲ್ ದರ ಇಳಿಕೆ
ಎಲ್‌ಪಿಜಿ ಬೆಲೆ ಏರಿಕೆ ಒಂದೆಡೆಯಾದ್ರೆ, ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್, ಡೀಸೆಲ್ ದರವು ಒಂದು ವಾರದ ಬಳಿಕ ಇಳಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಇಳಿಕೆಗೊಂಡು 101.34 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 15 ಪೈಸೆ ಕುಸಿದು 88.77 ರೂಪಾಯಿಗೆ ಮುಟ್ಟಿದೆ.
ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications