ಮತ್ತೆ ಟ್ರಂಪ್ ಕ್ಯಾತೆ! ಹೌದು, ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಿಂದ ಅಮೆರಿಕಾಕ್ಕೆ ಆಗುವ ರಫ್ತುಗಳ ಮೇಲೆ ಶೇಕಡ 25 ರಷ್ಟು ಹೆಚ್ಚಿನ ತೆರಿಗೆಯನ್ನು ವಿಧಿಸುವುದಾಗಿ ಘೋಷಣೆಯನ್ನು ಮಾಡಿದ್ದಾರೆ. ಈ ನಿಯಮವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ರಷ್ಯಾದೊಂದಿಗೆ ಭಾರತವು ಹೊಂದಿರುವ ನಿಕಟ ಸಂಬಂಧವೇ ಇದಕ್ಕೆ ಕಾರಣವೆಂದು ಹೇಳಲಾಗಿದೆ.
ಈ ಕುರಿತು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮ ವೇದಿಕೆ ಟೂತ್ ಸೋಶಿಯಲ್‌ನಲ್ಲಿ ಭಾರತದ ಮೇಲೆ ಶೇ. 25 ರಷ್ಟು ಸುಂಕವನ್ನು ವಿಧಿಸುವುದಾಗಿ ಘೋಷಿಸಿದ್ದಾರೆ. ರಷ್ಯಾದೊಂದಿಗೆ ಭಾರತ ನಡೆಸುವ ವ್ಯಾಪಾರಕ್ಕಾಗಿ ದಂಡವನ್ನು ವಿಧಿಸಲಾಗುವುದು ಎಂದು ಹೇಳಿದ್ದಾರೆ. ಅಮೆರಿಕದೊಂದಿಗೆ ಭಾರತ ವ್ಯಾಪಾರ ಒಪ್ಪಂದಕ್ಕೆ ಬರಲಾಗುವುದು ಎಂದು ನಿರೀಕ್ಷಿಸಲಾಗಿದ್ದರೂ, ಟ್ರಂಪ್ ಭಾರತದ ಮೇಲೆ ಶೇ. 25 ತೆರಿಗೆ ಘೋಷಣೆ ಮಾಡಿದ್ದಾರೆ. ಈ ಸುಂಕವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.

ಭಾರತ ಮತ್ತು ಅಮೆರಿಕ ದೇಶಗಳು ಕಾರ್ಯತಂತ್ರದ ಪಾಲುದಾರರೆಂದು ಪರಿಗಣಿಸಲ್ಪಟ್ಟಿದ್ದರೂ, ಈ ನಿರ್ಧಾರವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಿದೆ. ಅಲ್ಲದೆ ರಷ್ಯಾದೊಂದಿಗೆ ಭಾರತ ಹೊಂದಿರುವ ಸಂಬಂಧದ ಬಗ್ಗೆ ಅಮೆರಿಕಾ ಅಸಮಾಧಾನಗೊಂಡಿದೆ. ಈ ತೆರಿಗೆ ನೀತಿಯಿಂದಾಗಿ ಎರಡೂ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ.
ಭಾರತದ ಮೇಲೆ ಅಮೆರಿಕಾ ಏಕೆ ಸುಂಕ ವಿಧಿಸುತ್ತಿದೆ?
ಭಾರತದ ಮೇಲೆ ಅಮೆರಿಕಾ ಏಕೆ ಸುಂಕ ವಿಧಿಸುತ್ತಿದೆ ಎಂಬ ಪ್ರಶ್ನೆಗೆ ಟ್ರಂಪ್ ತಮ್ಮ 'ಎಕ್ಸ್' ಖಾತೆಯಲ್ಲಿ ಉತ್ತರಿಸಿದ್ದಾರೆ. ಭಾರತವು ವಿಧಿಸುವ ಹೆಚ್ಚಿನ ಸುಂಕಗಳು ಹಾಗೂ ಕಠಿಣ ಆರ್ಥಿಕ ನೀತಿಗಳೇ ಇದಕ್ಕೆ ಕಾರಣವೆಂದು ಅವರು ಹೇಳಿದ್ದಾರೆ. ರಷ್ಯಾದಿಂದ ಭಾರತವು ಮಿಲಿಟರಿ ಸಲಕರಣೆಗಳನ್ನು ಖರೀದಿಸುತ್ತಿರುವುದನ್ನೂ ಅವರು ಟೀಕಿಯನ್ನು ಮಾಡಿದ್ದಾರೆ.
ಭಾರತವು ಅಮೆರಿಕಾದ ಮಿತ್ರ ರಾಷ್ಟ್ರವಾಗಿದ್ದರೂ, ಉಭಯ ದೇಶಗಳ ನಡುವಿನ ವ್ಯಾಪಾರವು ಅಷ್ಟೇನೂ ಪರಿಣಾಮಕಾರಿಯಾಗಿಲ್ಲ. ಭಾರತವು ವಿಧಿಸುವ ಹೆಚ್ಚಿನ ಸುಂಕಗಳು ಮತ್ತು ಕಠಿಣ ಆರ್ಥಿಕ ನೀತಿಗಳೇ ಇದಕ್ಕೆ ಕಾರಣ. ಅಲ್ಲದೆ, ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತವು ರಷ್ಯಾದಿಂದ ಹೆಚ್ಚಿನ ಇಂಧನವನ್ನು ಖರೀದಿಸುತ್ತಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೀಗಾಗಿ ಆಗಸ್ಟ್ 1 ರಿಂದ ಭಾರತವು ಶೇ 25ರಷ್ಟು ಸುಂಕವನ್ನು ಪಾವತಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಭಾರತವು ಹೆಚ್ಚಿನ ಆಮದು ತೆರಿಗೆ ವಿಧಿಸುತ್ತಿದೆ
ಭಾರತವು ಕೃಷಿ, ಡೈರಿ ಮತ್ತು ಆನ್‌ಲೈನ್ ಶಾಪಿಂಗ್‌ನಂತಹ ಕ್ಷೇತ್ರಗಳಲ್ಲಿ ಕಠಿಣ ನಿಯಮಗಳನ್ನು ಹೇರುತ್ತಿದೆ ಎಂದು ಅಮೆರಿಕದ ಉದ್ಯಮಿಗಳು ದೂರುತ್ತಿದ್ದಾರೆ. ಹಲವು ಸಭೆಗಳ ನಂತರವೂ, ಉಭಯ ದೇಶಗಳು ವ್ಯಾಪಾರ ಒಪ್ಪಂದಕ್ಕೆ ಬರಲು ಸಾಧ್ಯವಾಗಲಿಲ್ಲ. ರಷ್ಯಾದೊಂದಿಗಿನ ಭಾರತದ ಬಲವಾದ ಸಂಬಂಧವೂ ಸಹ ಅಮೆರಿಕಾದ ಈ ನಿರ್ಧಾರಕ್ಕೆ ಕಾರಣವಾಗಿದೆ.
ಭಾರತವು ರಷ್ಯಾದಿಂದ ಆಮದು ಮಾಡಿಕೊಳ್ಳುವ ರಕ್ಷಣಾ ಸಲಕರಣೆಗಳ ಪ್ರಮಾಣವನ್ನು ಕಡಿಮೆ ಮಾಡಿದ್ದರೂ, ಇನ್ನೂ ಹೆಚ್ಚಿನ ಶಸ್ತ್ರಾಸ್ತ್ರಗಳಿಗಾಗಿ ರಷ್ಯಾವನ್ನೇ ಅವಲಂಬಿಸಿಕೊಮಡಿದೆ. ಅಲ್ಲದೆ, ಭಾರತವು ರಷ್ಯಾದಿಂದ ಅತಿ ಹೆಚ್ಚು ತೈಲವನ್ನು ಖರೀದಿಸುತ್ತಿದೆ. ಇದು ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತದೆ ಎಂದು ಅಮೆರಿಕ ಅಂದುಕೊಂಡಿದೆ.
ಈ ತೆರಿಗೆಯಿಂದ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಬಟ್ಟೆ, ಯಂತ್ರಗಳು, ಔಷಧಿಗಳು ಮತ್ತು ವಾಹನ ಬಿಡಿಭಾಗಗಳಂತಹ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಭಾರತೀಯ ರಫ್ತುದಾರರಿಗೆ ನಷ್ಟವಾಗುವ ಸಾಧ್ಯತೆಯಿದೆ. ಈ ಬೆಳವಣಿಗೆಯು ಭಾರತದ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.ಭಾರತದ ಷೇರು ಮಾರುಕಟ್ಟೆ ಇಂದು ಹಸಿರು ಬಣ್ಣದಲ್ಲಿ ಮುಕ್ತಾಯಗೊಂಡರು ಸೆನ್ಸೆಕ್ಸ್ ಮತ್ತು ನಿಫ್ಟಿ ಈ ಪ್ರಕಟಣೆಗೆ ಬಲವಾಗಿ ಪ್ರತಿಕ್ರಿಯಿಸುವ ನಿರೀಕ್ಷೆಯಂತೂ ಇದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications