ಭಾರತದ 14 ನೇ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರದ ನಿಧನ ಹಿನ್ನಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ ಡಿ.27ರ ಶುಕ್ರವಾರ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ. ಜೊತೆಗೆ ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆಗೆ ಸಂತಾಪ ಹಾಗೂ ಗೌರವ ನಮನಗಳ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಎರಡು ಅವಧಿಗೆ ದೇಶವನ್ನು ಆಳಿದ್ದ ಮಾಜಿ ಪ್ರಧಾನಿ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಾಜ್ಯದಲ್ಲಿಯೂ ಶೋಕಾಚರಣೆ
ಡಾ ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಕರ್ನಾಟಕ ರಾಜ್ಯದಲ್ಲೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಅಲ್ಲದೇ ಇಂದು ಅಂದರೆ ಡಿ. 27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಕಾರ್ಯನಿರ್ವಹಿಸುವುದಿಲ್ಲ. ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಸಾರಲಾಗಿದೆ.
ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮವು ರದ್ದು!
ಕರ್ನಾಟಕದ ಗಡಿ ಬಾಗದ ಜಿಲ್ಲೆಯಾಗಿರುವ ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಕಾಂಗ್ರೆಸ್ ಪಕ್ಷ ಸಿದ್ದತೆಗಳನ್ನು ಮಾಡಿಕೊಂಡಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿಜಿ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲಾಗಿತ್ತು. ಈ ಅಧಿವೇಶನ ನಡೆದು 100 ವರ್ಷ ತುಂಬಿರುವ ಹಿನ್ನೆಲೆ ಶತಮಾನೋತ್ಸವ ಸಂಭ್ರಮ ಆಚರಿಸಲು ಅದ್ದೂರಿಯಾಗಿ ಕರ್ನಾಟಕ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿತ್ತು.
ಸಂಪೂರ್ಣ ಸಿದ್ದತೆ ನಡೆದು ನವ ಸತ್ಯಾಗ್ರಹ ಬೈಠಕ್ 2025 ಗಾಗಿ ದೀಪಗಳಿಂದ ಅಲಂಕರಿಸಲ್ಪಟ್ಟ ಬೆಳಗಾವಿಯ ಸಿಂಗ್ ಸಾವಿನಿಂದ ಕತ್ತಲಿನಲ್ಲಿ ಮುಳುಗಿತು ಕಾಂಗ್ರೆಸ್ ನಾಯಕರಿಗೆ ಮನಮೋಹನ್ ಸಿಂಗ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿಯತ್ತ ಪ್ರಯಾಣಿಸಲು ಸಿದ್ದತೆ ನಡೆಸಿಕೊಂಡರು.
ಇದೇ ವೇಳೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ " ಡಾ. ಮನಮೋಹನ್ ಸಿಂಗ್ ದೇಶಕ್ಕೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆ ಮರೆಯಲು ಸಾಧ್ಯವಿಲ್ಲ. ಬೆಳಗಾವಿಯಲ್ಲಿ ನಡೆಯಬೇಕಿದ್ದ'ಗಾಂಧೀ ಭಾರತ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ತೆರಳುತ್ತಿದ್ದೇವೆ" ಎಂದು ಪ್ರತಿಕ್ರಿಯಿಸಿದ್ದಾರೆ.
ಬ್ಯಾಂಕ್ ಗಳು ಕಾರ್ಯಾಚರಿಸುತ್ತವೆಯೇ?
ಮಾಜಿ ಪ್ರಧಾನಿಯ ಗೌರವಾರ್ಥವಾಗಿ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಹೀಗಾಗಿ ರಾಷ್ಟ್ರೀಯ ಶೋಕಾಚರಣೆಯ ಸಂದರ್ಭದಲ್ಲಿ, ಎಲ್ಲಾ ಸ್ಥಳಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಇನ್ನು ಡಿಸೆಂಬರ್ 27 ಶುಕ್ರವಾರದಂದು ಶಾಲೆಗಳು ಮತ್ತು ಬ್ಯಾಂಕ್‌ಗಳಿಗೆ ರಜೆ ಇರುತ್ತದೆಯೇ ಎಂಬ ಅನುಮಾನ ಕಾಡುವುದು ಸಹಜ. ಶಾಲೆ ; ಕಾಲೇಜುಗಳಿಗೆ ಈಗಾಗಲೇ ರಜೆ ಸಾರಲಾಗಿದೆ.
ಆರ್‌ಬಿಐನ ರಜಾದಿನದ ಕ್ಯಾಲೆಂಡರ್ ಪ್ರಕಾರ, ನಾಗಾಲ್ಯಾಂಡ್‌ನ ಕೊಹಿಮಾ ಪ್ರದೇಶವು ಕ್ರಿಸ್ಮಸ್ ಆಚರಣೆಗಾಗಿ ಬ್ಯಾಂಕ್ ರಜೆಯನ್ನು ಹೊಂದಿರುತ್ತದೆ. ಆದರೆ ಡಿಸೆಂಬರ್ 27 ಶುಕ್ರವಾರದಂದು ಬ್ಯಾಂಕ್‌ಗಳನ್ನು ಮುಚ್ಚಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ರಾಷ್ಟ್ರೀಯ ರಜಾದಿನಗಳ ಜೊತೆಗೆ, ಬ್ಯಾಂಕ್ ರಜಾದಿನಗಳು ಭಾರತದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಹೆಚ್ಚುವರಿಯಾಗಿ, ಎರಡನೇ ಮತ್ತು ನಾಲ್ಕನೇ ಶನಿವಾರದಂದು, ಎಲ್ಲಾ ನಿಗದಿತ ಮತ್ತು ನಾನ್-ಶೆಡ್ಯೂಲ್ಡ್ ಬ್ಯಾಂಕ್‌ಗಳು ಸಾರ್ವಜನಿಕ ರಜಾದಿನವನ್ನು ಆಚರಿಸುತ್ತವೆ.
ಒಂದು ವೇಳೆ ಬ್ಯಾಂಕ್ ರಜೆ ಹೊಂದಿದ್ದರೂ UPI, IMPS ಮತ್ತು ನೆಟ್ ಬ್ಯಾಂಕಿಂಗ್‌ನಂತಹ ಡಿಜಿಟಲ್ ಪಾವತಿ ವಿಧಾನಗಳು, ಹಾಗೆಯೇ ಆನ್‌ಲೈನ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಮೊಬೈಲ್ ಅಪ್ಲಿಕೇಶನ್‌ಗಳು ಗ್ರಾಹಕರಿಗೆ ಲಭ್ಯವಿರುತ್ತವೆ ಹೀಗಾಗಿ ವಹಿವಾಟು ನಡೆಸಲು ಗ್ರಾಹಕರಿಗೆ ತೊಂದರೆ ಇಲ್ಲ.


Click it and Unblock the Notifications