ಭಾರತದಲ್ಲಿ ಆರ್ಥಿಕ ಅಪರಾಧವೆಸಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಾಲಿನಲ್ಲಿ ನಮಗೆ ಥಟ್ಟನೆ ನೆನಪಾಗುವುದು , ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ, ಸಂಜಯ್ ಭಂಡಾರಿ, ಲಲಿತ್ ಮೋದಿ ಮುಂತಾದವರ ಹೆಸರುಗಳು. ಆರ್ಥಿಕ ಅಪರಾಧಿಗಳನ್ನು ಶಿಕ್ಷಿಸುವ ಕಠಿಣ ಕಾನೂನು ಭಾರತದಲ್ಲಿ ರೂಪುಗೊಂಡಿದ್ದರೂ, ವಂಚನೆ ಮತ್ತು ಆರ್ಥಿಕ ಅಪರಾಧಗಳ ಆರೋಪ ಕೇಳಿಬರುತ್ತಿದ್ದಂತೆ ಈ ಸಿರಿವಂತ ಉದ್ಯಮಿಗಳು ದೇಶ ಬಿಟ್ಟು ವಿದೇಶದಲ್ಲಿ ತಲೆಮರೆಸಿಕೊಳ್ಳುತ್ತಾರೆ. ಅದರಲ್ಲೂ ಹೆಚ್ಚಿನ ಮಂದಿ ಲಂಡನ್ ನಲ್ಲಿ ಆರಾಮದಾಯಕ ಜೀವನ ಕಳೆಯುತ್ತಾರೆ. ಇದೇ ಹಿನ್ನಲೆಯಲ್ಲಿ ಯುಕೆಯಲ್ಲಿ ನೆಲೆಸಿರುವ ಭಾರತೀಯ ಆರ್ಥಿಕ ಅಪರಾಧಿಗಳ ಸಮಸ್ಯೆಯನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಕಿಂಗ್‌ಡಂ ಪ್ರಧಾನಿ ಕೀರ್ ಸ್ಟಾರ್ಮರ್ ಅ ಅವರನ್ನು ಒತ್ತಾಯಿಸಿದ್ದಾರೆ.
ಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುನೈಟೆಡ್ ಕಿಂಗ್‌ಡಂ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಬ್ರಿಟನ್ ನಲ್ಲಿ ನೆಲೆಸಿರುವ ಭಾರತೀಯ ಆರ್ಥಿಕ ಅಪರಾಧಿಗಳ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಕೆಯ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಚರ್ಚಿಸಿದರು.

ಅವರು ವಲಸೆ, ಚಲನಶೀಲತೆ ಮತ್ತು ವಿಜಯ್ ಮಲ್ಯ ಮತ್ತು ನೀರವ್ ಮೋದಿಯಂತಹ ಆರ್ಥಿಕ ಅಪರಾಧವೆಸಗಿ ಪರಾರಿಯಾದವರ ಹಸ್ತಾಂತರದ ವಿಷಯಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಉಭಯ ನಾಯಕ ಮೊದಲ ಭೇಟಿ ಇದಾಗಿದ್ದು, ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಎತ್ತರಕ್ಕೆ ಏರಿವೆ ಎಂದು ಉಭಯ ದೇಶಗಳ ಪ್ರಧಾನ ಮಂತ್ರಿಗಳು ಸಂತಸ ವ್ಯಕ್ತಪಡಿಸಿದರು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.
ದ್ವಿಪಕ್ಷೀಯ ಬಾಂಧವ್ಯದ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದ ಉಭಯ ಪ್ರಧಾನ ಮಂತ್ರಿಗಳು ಆರ್ಥಿಕತೆ, ವ್ಯಾಪಾರ, ವಿನೂತನ ತಂತ್ರಜ್ಞಾನಗಳು, ಸಂಶೋಧನೆ ಮತ್ತು , ಹಸಿರು ಹಣಕಾಸು(ಪರಿಸರ ಸ್ನೇಹಿ ಯೋಜನೆಗಳಿಗೆ ಹಣಕಾಸು ಒದಗಿಸುವುದು) ಮತ್ತು ಜನರಿಂದ-ಜನರಿಗೆ-ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಸಚಿವಾಲಯದ ಹೇಳಿಕೆಯ ಪ್ರಕಾರ ಪ್ರಮುಖ ಇರುವಂತಹ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ
ಭಾರತ ಮತ್ತು ಯುಕೆ ದೇಶಗಳು ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದು, ಎರಡೂ ದೇಶಗಳ ಆರ್ಥಿಕತೆಗೆ ಇದು ಹೊಸ ಆಯಾಮ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಯುಕೆ ಪ್ರಧಾನ ಮಂತ್ರಿ ಕೀರ್ ಸ್ಟಾರ್ಮರ್ ಇಬ್ಬರೂ ನಾಯಕರು ಕೂಡಾ ಮುಕ್ತ ವ್ಯಾಪಾರ ಕಡೆಗೆ ಒಲವು ಹೊಂದಿದ್ದು, ಎರಡೂ ದೇಶಗಳಿಗೆ ಲಾಭದಾಯಕವಾದ ಸಮತೋಲಿತ ಒಪ್ಪಂದ ಮಾಡಿಕೊಳ್ಳುವ ಆಶಯವನ್ನು ಹೊಂದಿದ್ದಾರೆ. ಈ ಒಪ್ಪಂದದ ಮೂಲಕ ಎರಡೂ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆ ಹೆಚ್ಚಾಗಲಿದೆ. ಭದ್ರತೆ, ಶಿಕ್ಷಣ, ತಂತ್ರಜ್ಞಾನ ಮತ್ತು ಹವಾಮಾನ ಬದಲಾವಣೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಾಗಲಿದೆ.
ಸ್ಟಾರ್ಮರ್‌ನ ಕಚೇರಿಯ ಪ್ರಕಟನೆಯ ಪ್ರಕಾರ, "ಭದ್ರತೆ, ಶಿಕ್ಷಣ, ತಂತ್ರಜ್ಞಾನ ಮತ್ತು ಹವಾಮಾನ ಬದಲಾವಣೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಆಳವಾದ ಸಹಕಾರವನ್ನು ಬಯಸಿದ್ದು ಯುಕೆ ಭಾರತದೊಂದಿಗೆ ಹೊಸ ಕಾರ್ಯತಂತ್ರದ ಪಾಲುದಾರಿಕೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದವು ಯುಕೆಯಲ್ಲಿ ಉದ್ಯೋಗ ಸೃಷ್ಟಿಗೆ ಬೆಂಬಲವನ್ನು ನೀಡುತ್ತದೆ " ಎಂದು ಹೇಳಿಕೆ ತಿಳಿಸಿದೆ.
ಇದೇ ವೇಳೆ ಯುಕೆಯಲ್ಲಿ ಭಾರತೀಯ ಸಮುದಾಯಕ್ಕೆ ಉತ್ತಮ ಸೇವೆ ನೀಡಲು, ಬೆಲ್‌ಫಾಸ್ಟ್ ಮತ್ತು ಮ್ಯಾಂಚೆಸ್ಟರ್‌ನಲ್ಲಿ ಎರಡು ಹೊಸ ಭಾರತೀಯ ಕಾನ್ಸುಲೇಟ್ ಜನರಲ್‌ಗಳನ್ನು ತೆರೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications