ಪತಿಯೊಬ್ಬ ವಿದ್ಯಾರ್ಥಿಯೂ ಹೆಚ್ಚಿನ ಅಂಕ ಪಡೆದು ಪ್ರತಿಷ್ಟಿತ ಕಾಲೇಜುಗೆ ಸೇರಬೇಕೆಂಬ ಆಸೆಯನ್ನು ಇಟ್ಟುಕೊಂಡು ಚನ್ನಾಗಿ ಓದಿ ಒಳ್ಳೆಯ ಅಂಕವನ್ನು ಪಡೆದುಕೊಳ್ಳುತ್ತಾರೆ. ಆದರೆ ಕೆಲವೊಂದು ಖಾಸಗಿ ಕಾಲೇಜುಗಳು ಹಣದ ಆಸೆಗಾಗಿ ಅರ್ಹ ವಿದ್ಯಾರ್ಥಿಗಳನ್ನುಕಡೆಗಣಿಸಿ ಕಡಿಮೆ ಅಂಕ ತಗೆದವರಿಗೆ ಲಕ್ಷ ಲಕ್ಷ ಹಣವನ್ನು ತಗೆದುಕೊಂಡು ಸೀಟುಗಳನ್ನು ಮಾರಾಟ ಮಾಡಿಕೊಳ್ಳತ್ತಿರುವ ಆರೋಪ ಕೇಳಿ ಬರುತ್ತಿದೆ.
ಹೌದು,ಇಂದು ಬೆಳ್ಳಂ ಬೆಳ್ಳಗ್ಗೆ ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಸುಮಾರು 18 ಸ್ಥಳಗಳಲ್ಲಿ ಶೋಧ ಕಾರ್ಯಚರಣೆಯನ್ನು ನಡೆಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ತಿಳಿಸಿವೆ.

2024-25ರ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ಉನ್ನತ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸೀಟುಗಳನ್ನು ಅಕ್ರಮವಾಗಿ ನಿರ್ಬಂಧಿಸಿ ಮಾರಾಟ ಮಾಡಲಾಗಿದೆ ಎಂಬ ಆರೋಪದ ಮೇಲೆ ಇಡಿ ಕಾರ್ಯಚಾರಣೆಯನ್ನು ಮಾಡುತ್ತಿದ್ದು, 18 ಸ್ಥಳಗಳಲ್ಲಿ ಶೋಧ ಕಾರ್ಯಚರಣೆಯನ್ನು ನಡೆಸಿದೆ.
ಎಂಜಿನಿಯರಿಂಗ್ ಸೀಟುಗಳ ಹಂಚಿಕೆಯಲ್ಲಿ 2,000ಕ್ಕೂ ಹೆಚ್ಚು ವಂಚನೆ
ಆಕಾಶ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಪ್ರಕರಣದ ಇತರ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ಪ್ರಕರಣದ ಹಿನ್ನೆಲೆಯ ಪ್ರಕಾರ, 2,000 ಕ್ಕೂ ಹೆಚ್ಚು ಎಂಜಿನಿಯರಿಂಗ್ ಸೀಟುಗಳನ್ನು ವಂಚನೆಯಿಂದ ನಿರ್ಬಂಧವನ್ನು ಮಾಡಲಾಗಿದೆ ಎಂದು ಮಾಹಿತಿಯನ್ನು ತಿಳಿಸಲಾಗಿದೆ.
ಇ.ಡಿ ದಾಳಿ
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಲಕ್ಷಾಂತರ ರೂಪಾಯಿ ಹಣ ಪಡೆದು ಸೀಟುಗಳನ್ನು ಬ್ಲಾಕ್ ಮಾಡುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಮತ್ತು ಸೀಟು ಬ್ಲಾಕಿಂಗ್ ವಿಚಾರವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ತನಿಖೆ ಆರಂಭಿಸಿದೆ. ಬೆಂಗಳೂರಿನ ಬಿ.ಎಂ.ಎಸ್ ಕಾಲೇಜು, ಆಕಾಶ್ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಮಾಡುತ್ತಿದ್ದಾರೆ.
ದಾಳಿಯ ಸಮಯದಲ್ಲಿ, ಕಾಲೇಜುಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮತ್ತು ಹಣಕಾಸಿನ ವ್ಯವಹಾರಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಸೀಟು ಹಂಚಿಕೆಯಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಇ.ಡಿ ಈ ಕ್ರಮವನ್ನು ಕೈಗೊಂಡಿದೆ.
ಕೆಲವು ಖಾಸಗಿ ಕಾಲೇಜುಗಳಿಗೆ ಆರ್ಥಿಕವಾಗಿ ಲಾಭಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ವಂಚಿಸಿದೆ. ಈ ಹಗರಣವನ್ನು ಆರಂಭದಲ್ಲಿ 2024 ರಲ್ಲಿ ಮಲ್ಲೇಶ್ವರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಗುತ್ತಿಗೆ ಸಿಬ್ಬಂದಿ ಸೇರಿದಂತೆ ಸುಮಾರು ಜನರನ್ನು ಬಂಧಿಸಲುಕೂಡ ಕಾರಣವಾಯಿತು.
ಕಳೆದ ವರ್ಷ ಹಲವಾರು ಎಂಜಿನಿಯರಿಂಗ್ ಕಾಲೇಜುಗಳಿಗೆ ನೋಟಿಸ್‌ಗಳನ್ನು ಸಹ ನೀಡಲಾಗಿದೆ. ಹಣಗಾಗಿ ಖಾಸಗಿ ಕಾಲೇಜು ಆಡಳಿತ ಮಂಡಳಿ ಸೀಟುಗಳನ್ನು ಮಾರಾಟ ಮಾಡಿಕೊಳ್ಳುತ್ತಿವೆ. ಹೀಗಾಗಿ ಇಡಿ ದಾಳಿ ನಡೆಸಿದೆ.
ಈ ಹಗರಣವು ರಾಜ್ಯದ ಖಾಸಗಿ ಕಾಲೇಜು ಪ್ರವೇಶ ಪ್ರಕ್ರಿಯೆಯ ಸಮಗ್ರತೆಯ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಇಂತಹ ವಂಚನೆಯ ಚಟುವಟಿಕೆಗಳನ್ನು ತಡೆಗಟ್ಟಲು ಜಾರಿಯಲ್ಲಿರುವ ಮೇಲ್ವಿಚಾರಣಾ ವ್ಯವಸ್ಥೆಗಳಗಳ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಈಗ ಸದ್ಯ ಇಡಿ ತನಿಖೆಯ ಚುಕ್ಕಾಣಿ ಹಿಡಿದಿರುವುದರಿಂದ, ತನಿಖೆ ಆಳವಾದಂತೆ ಮತ್ತಷ್ಟು ಆರೋಪ ಬಂಧನಗಳು ಮತ್ತು ಆಸ್ತಿ ವಶಪಡಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಇದು ಶಿಕ್ಷಣ ಕ್ಷೇತ್ರಕ್ಕೆ ಒಂದು ಕಪ್ಪು ಚುಕ್ಕಿ.
ಒಳ್ಳೆಯ ಕಾಲೇಜುಗಳಿಗೆ ಸೇರಿ ವಿದ್ಯಾಬ್ಯಾಸ ಮಾಡಬೇಕೆಂದುಕೊಂಡ ಬಂದರ ಬಳಿ ಹಚ್ಚಿನ ಹಣವನ್ನು ಕೇಳಿ ಇದನ್ನೇ ಭಂಡವಾಳ ಮಾಡಿಕೊಳ್ಳವುದೇ ಸೀಟ್ ಬ್ಲಾಕಿಂಗ್ ದಂಧೆಯಾಗಿ ಮಾಡಿಕೊಂಡಿದ್ದಾರೆ.ಈ ಕುರಿತು ಇನ್ನೂ ಇಡಿ ಹೆಚ್ಚಿನ ತನಿಖೆ ನಡೆಯುತ್ತಿದೆ.


Click it and Unblock the Notifications