ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮನೆ ಮೇಲೆ ED ದಾಳಿ

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್‌ ಬ್ಯಾಂಕ್ ಸಂಸ್ಥಾಪಕ ಮಾಜಿ ಸಿಇಓ ರಾಣಾ ಕಪೂರ್ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ.

ಮುಂಬೈನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಈಗಾಗಲೇ ನಷ್ಟದಲ್ಲಿದ್ದ ದಿವಾನ್ ಹೌಸಿಂಗ್ ಫೈನಾನ್ಸ್‌(ಡಿಎಚ್‌ಎಫ್‌ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಇಡಿ ತಿಳಿಸಿದೆ.

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮನೆ ಮೇಲೆ ED ದಾಳಿ

ಬ್ಯಾಂಕ್‌ನ ಆರ್ಥಿಕ ಮುಗ್ಗಟ್ಟಿಗೆ ಕಾರಣಗಳ ಜೊತೆಗೆ ಉನ್ನತ ಅಧಿಕಾರಿಗಳ ಅವ್ಯವಹಾರದ ಪಾಲು ಇರುವುದರಿಂದ ನಿರ್ದೇಶಕ ಮಂಡಳಿ ಪುನರ್ ರಚನೆಗೆ ಸರ್ಕಾರ ಮುಂದಾಗಿದೆ ಎಂದು ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಬಿಕ್ಕಟ್ಟಿಗೆ ಕಾರಣವಾದ ತಪ್ಪಿತಸ್ಥರನ್ನು ಗುರುತಿಸಲು ಆರ್‌ಬಿಐ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ(ಪಿಎಂಎಲ್‌ಎ) ಅಡಿಯಲ್ಲಿ ರಾಣಾ ಕಪೂರ್ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದ್ದು, ದೇಶವನ್ನು ತೊರೆಯದಂತೆ ಲುಕ್‌ಔಟ್ ನೋಟಿಸ್ ನೀಡಲಾಗಿದೆ.

ಯೆಸ್‌ ಬ್ಯಾಂಕ್‌ ಮೇಲೆ ಏಪ್ರಿಲ್ 3ರವರೆಗೆ ಆರ್‌ಬಿಐ ನಿರ್ಬಂಧ ಹೇರಿದ್ದು, ಗ್ರಾಹಕರು 50,000ವರೆಗೆ ಮಾತ್ರ ವಿತ್‌ಡ್ರಾ ಮಾಡಲು ನಿಯಂತ್ರಣ ಸಾಧಿಸಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+