ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗೆ ಅಂತ್ಯ ಹಾಡಲು ಸಾಧ್ಯವಾಗುತ್ತಿಲ್ಲ. ಮಳೆ ಬಂದರೆ ಸಾಕು ನಗರದ ಪ್ರಮುಖ ರಸ್ತೆಗಳು ಜಾಲಾವೃತಗೊಂಡು ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಿರುವಾಗ ಒಂದು ಸ್ಥಳದಿಂದ ಮತ್ತೊಂದು ಪ್ರದೇಶಕ್ಕೆ ಹೋಗಲು ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯಬೇಕಾದ ಸ್ಥಿತಿ ನಗರದಲ್ಲಿ ಸಾಮಾನ್ಯವಾಗಿದೆ. ಆದರೀಗ ಕೇವಲ 19 ನಿಮಿಷಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಹೋಗಬಗುದು. ಅದು ಹೇಗೆ ಅಂತೀರಾ ಈ ಸ್ಟೋರಿ ಓದಿ...
ಇತ್ತೀಚೆಗೆ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ನಗರ ಮೂಲದ ಸ್ಟಾರ್ಟ್ಅಪ್ ಸರಳಾ ಏವಿಯೇಷನ್ನೊಂದಿಗೆ ಕೈಜೋಡಿಸುವ ಮೂಲಕ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಗಳನ್ನು (Air Taxi) ಪ್ರಾರಂಭಿಸಲು ಯೋಜಿಸಿದೆ. ಈ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಗಳ ಮೂಲಕ ಕೇವಲ 19 ನಿಮಿಷಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ತಲುಪಬಹುದು.

ಹೌದು.. ಎರಡೂ ಸಂಸ್ಥೆಗಳು ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ ಸೇವೆ ಒದಗಿದಲು ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದ ಮಾಡಿಕೊಂಡ ಸಂಸ್ಥೆಗಳು ಎಲೆಕ್ಟ್ರಿಕ್ ವರ್ಟಿಕಲ್ ಟೇಕ್-ಆಫ್ ಮತ್ತು ಲ್ಯಾಂಡಿಂಗ್ (ಇವಿಟಿಒಎಲ್) ವಿಮಾನಗಳನ್ನು ತಯಾರಿಸುತ್ತವೆ. ನಂತರ ಆ ಸೇವೆಯನ್ನು ಪ್ರಯಾಣಿಕರಿಗೆ ಒದಗಿಸಲಿವೆ. ಹಾಗಾದರೆ ಏನಿದು ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ? ಹೇಗಿರುತ್ತದೆ? ಹೇಗೆ ಕೆಲಸ ಮಾಡುತ್ತದೆ? ದರವೆಷ್ಟು? ಇದರಲ್ಲಿ ಎಲ್ಲಿಂದ ಎಲ್ಲಿಯವರೆಗೆ ಪ್ರಯಾಣ ಮಾಡಬಹುದು ಎಲ್ಲವನ್ನೂ ತಿಳಿಯೋಣ.
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ ವಿಮಾನದಂತೆ ಕಾರ್ಯ ನಿರ್ವಹಿಸುತ್ತದೆ. ಇದು ನೋಡಲು ವಿಮಾನದಂತಿರಲಿದ್ದು ಪ್ರಯಾಣಿಕರನ್ನು ಕರೆದುಕೊಂಡು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿ ಬಿಡಲಿದೆ. ಬಸ್, ಟ್ಯಾಕ್ಸಿ, ಆಟೋ, ಬೈಕ್ ಇನ್ನಿತರ ವಾಹನಗಳಲ್ಲಿ ಪ್ರಯಾಣ ಬೆಳೆಸುವ ಪ್ರಯಾಣಿಕರು ಈ ಸೇವೆ ಪಡೆಯುವುದರಿಂದ ಸಮಯ ಉಳಿತಾಯವಾಗಲಿದೆ. ಇದರಲ್ಲಿ ಬಹುಬೇಗ ಪ್ರಯಾಣವನ್ನು ಮಾಡಬಹುದು.
ಕೆಲವೇ ನಿಮಿಷಗಳಲ್ಲಿ ಪ್ರಯಾಣ:
ಬೆಂಗಳೂರು ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ಸ್ ಸಿಟಿ ನಡುವಿನ ಅಂತರ ಸುಮಾರು 52 ಕಿಲೋಮೀಟರ್ ಇದೆ. ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯಲ್ಲಿ ಪ್ರಯಾಣಿಸಿದರೆ ಈ ಸ್ಥಳಕ್ಕೆ ಕೇವಲ 19 ನಿಮಿಷಗಳಲ್ಲಿ ಪ್ರಯಾಣಿಸಬಹುದು. ಇದೇ ಸ್ಥಳಕ್ಕೆ ರಸ್ತೆಯ ಮೂಲಕ ಸಾಗಲು ಪ್ರಸ್ತುತ 2 ರಿಂದ 3 ಗಂಟೆಗಳು ತೆಗೆದುಕೊಳ್ಳುತ್ತದೆ.
ಹೇಗಿರುತ್ತೆ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ?
ಈ ಹಾರುವ ಟ್ಯಾಕ್ಸಿಯಲ್ಲಿ ಒಟ್ಟು 7 ಪ್ರಯಾಣಿಕರು ಕುಳಿತುಕೊಳ್ಳಬಹುದು. ಆದರೆ ತ್ವರಿತವಾಗಿ ಸಾಗುವ ಈ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯಲ್ಲಿ ಪ್ರಯಾಣಿಸುವುದು ತುಂಬಾ ದುಬಾರಿಯಾಗಿರುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಿಂದ (KIA) ಎಲೆಕ್ಟ್ರಾನಿಕ್ಸ್ ಸಿಟಿಗೆ 19 ನಿಮಿಷಗಳಲ್ಲಿ ತಲುಪಲು ಪ್ರಯಾಣಿಕರೊಬ್ಬರಿಗೆ ಸುಮಾರು 1700 ರೂಪಾಯಿ ದರ ಇರಲಿದೆ.
ಯಾವಾಗ ಶುರು?
ಈ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ ವಿಮಾನವನ್ನು ನಿರ್ಮಾಣ ಮಾಡಲು ಎರಡು ಸಂಸ್ಥೆಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಇದು ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮೂರು ವರ್ಷಗಳವರೆಗೆ ತೆಗೆದುಕೊಳ್ಳಬಹುದು. ಕಂಪನಿಯು ತನ್ನ ಏರ್ ಟ್ಯಾಕ್ಸಿ ಇತರ ಹೆಲಿಕಾಪ್ಟರ್ ಸೇವೆಗಳಿಗಿಂತ ಹೆಚ್ಚು ಆರ್ಥಿಕವಾಗಿರುತ್ತದೆ ಎಂದು ಹೇಳುತ್ತದೆ. ಆದರೆ, ಇದು ಯಾವಾಗ ಜಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು ಟ್ರಾಫಿಕ್ ಸಮಸ್ಯೆ:
ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಸಮಸ್ಯೆ ಮತ್ತಷ್ಟು ಹೆಚ್ಚಿದೆ. ಪ್ರತಿಷ್ಠಿತ ಪ್ರದೇಶಗಳಲ್ಲೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ನೈಜ್ಯ ಚಿತ್ರಣವನ್ನು ಫೋಟೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಜಿಯೋಲೊಕೇಶನ್ ತಂತ್ರಜ್ಞಾನ ತಜ್ಞ ಟಾಮ್‌ಟಾಮ್ ಇತ್ತೀಚೆಗೆ ಹಂಚಿಕೊಂಡ ವರದಿ ಪ್ರಕಾರ ಟ್ರಾಫಿಕ್‌ನಲ್ಲಿ ಬೆಂಗಳೂರು ವಿಶ್ವದ ಎರಡನೇ ಅತ್ಯಂತ ಜನನಿಬಿಡ ನಗರವಾಗಿದೆ. ಇದು ನಿಜಕ್ಕೂ ಆತಂಕಕಾರಿ ವಿಷಯವಾಗಿದ್ದು ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications