ಒಂದು ವೇಳೆ ಇಎಸ್ ಐಸಿಗೆ ಸೇರಿದ ಆಸ್ಪತ್ರೆಗಳಲ್ಲಿ ಹೆರಿಗೆಗೆ ಅವಕಾಶ ಸಿಗದಿದ್ದಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮವು (ESIC) ಗರ್ಭಿಣಿಯರಿಗೆ ಈಗಿರುವ ಹಣಕಾಸು ಅನುದಾನ 2500 ರುಪಾಯಿಯನ್ನು 7500 ರುಪಾಯಿಗೆ ಹೆಚ್ಚಿಸಲು ನಿರ್ಧಾರ ಮಾಡಿದೆ. ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಿಂದ ಹೊರಡಿಸಿರುವ ಅಧಿಕೃತ ಗೆಜೆಟ್ ನಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.
ಸಲಹೆ ಅಥವಾ ಆಕ್ಷೇಪಗಳನ್ನು ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ಅವುಗಳನ್ನು ಪರಿಗಣಿಸಿ, ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು. ಸದ್ಯಕ್ಕೆ ಇರುವ 56-A ನಿಯಮದ ಪ್ರಕಾರ, ಇನ್ಷೂರ್ಡ್ ಮಹಿಳೆ ಮತ್ತು ಇನ್ಷೂರ್ಡ್ ವ್ಯಕ್ತಿಯ ಪತ್ನಿಗೆ ಐದು ಸಾವಿರ ರುಪಾಯಿ ವೈದ್ಯಕೀಯ ಬೋನಸ್ ಸಿಗುತ್ತದೆ. ಅದನ್ನು ಎಲ್ಲಿ ಇಎಸ್ ಐಸಿ ಅಡಿಯಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆ ಇರುವುದಿಲ್ಲವೋ ಅಂಥಲ್ಲಿ ಹೆರಿಗೆ ಸಂದರ್ಭಕ್ಕೆ ಖರ್ಚಿಗೆ ನೀಡಲಾಗುತ್ತದೆ.

ಇಎಸ್ ಐಸಿ ಮಂಡಳಿಯು ಮೊತ್ತವನ್ನು ಹೆಚ್ಚಿಸಲು ಅನುಮತಿ ನೀಡಿದೆ. ಈ ವರ್ಷದ ಫೆಬ್ರವರಿಯಲ್ಲಿ ನಡೆದ ಚರ್ಚೆ ವೇಳೆಯೇ ಇದಕ್ಕೆ ಸಮ್ಮತಿ ಸಿಕ್ಕಿದೆ. ಈಗ ಅಧಿಸೂಚನೆ ಕೂಡ ಹೊರಬಂದಿದ್ದು, ಇನ್ನು ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ ನಿಯಮವನ್ನು ಜಾರಿಗೆ ತರಲಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications